ಬೆಂಗಳೂರು: ಉನ್ನತ ಸ್ಥಾನದಲ್ಲಿರುವ ಮಹಿಳಾಧಿಕಾರಿಗಳ (Woman Officer) ಬಹಿರಂಗ ಕಿತ್ತಾಟಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಗರಂ ಆಗಿದ್ದು, ರೋಹಿಣಿ ಸಿಂಧೂರಿ (Rohini Sindhuri) ಮತ್ತು ಡಿ ರೂಪಾ (D Roopa) ಅವರಿಗೆ ನೋಟಿಸ್ ನೀಡಲು ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಬ್ಬರು ಅಧಿಕಾರಿಗಳಿಂದ ವರದಿ ಪಡೆದು ಕ್ರಮ ತೆಗೆದುಕೊಳ್ಳಲು ಸಿಎಂ ಬೊಮ್ಮಾಯಿ, ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾಗೆ (CS Vandita Sharm) ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅಧಿಕಾರಿಗಳು ನೋಟಿಸ್ಗೆ ಉತ್ತರ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ.
ಐಎಎಸ್ ಹಾಗೂ ಐಪಿಎಸ್ (IAS Vs IPS) ಬೀದಿ ರಂಪಾಂಟದಿಂದ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ. ಅಧಿವೇಶನದ ಸಂದರ್ಭದಲ್ಲಿ ವಿಪಕ್ಷ ನಾಯಕರು ಇದನ್ನೇ ದೊಡ್ಡ ವಿಷಯವನ್ನಾಗಿ ಚರ್ಚೆ ನಡೆಸಬಹುದು.
ಅಧಿಕಾರಿಗಳಾದವರು ಸಾರ್ವಜನಿಕರಿಗೆ ಮಾದರಿಯಾಗಬೇಕು. ಈ ರೀತಿಯಲ್ಲಿ ಬೀದಿಯಲ್ಲಿ ರಂಪಾಟ ಮಾಡ್ತಿರೋದು ಸರಿಯಲ್ಲ.ಇವರಿಂದ ಎಲ್ಲ ಐಎಎಸ್, ಐಪಿಎಸ್ ಅಧಿಕಾರಿಗಳಿಗೂ ಅಪಮಾನ ಆದಂತೆ. ಹಾಗಾಗಿ ಇಬ್ಬರಿಗೂ ಸ್ಪಷ್ಟನೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇಬ್ಬರಿಂದ ಎಲ್ಲಾ ಅಧಿಕಾರಿಗಳಿಗೆ ಅಪಮಾನ
ಇನ್ನು ರೋಹಿಣಿ ಸಿಂಧೂರಿ ಮತ್ತು ಡಿ ರೂಪಾ ಕಿತ್ತಾಟಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಮಾನ್ಯ ಜನರು ಈ ರೀತಿ ಮಾತಡಲ್ಲ. ಬಹಳ ಕೆಟ್ಟದಾಗಿ ವರ್ತನೆ ಮಾಡಿರೋದು ಗಮನಕ್ಕೆ ಬಂದಿದೆ. ಜನರು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ದೇವ ಮಾನವರು ಅಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲ ಅಧಿಕಾರಿಗಳಿಗೂ ಅಪಮಾನ ಆಗಿದೆ ಎಂದು ಬೇಸರ ಹೊರ ಹಾಕಿದರು.
ಈ ಸಂಬಂಧ ಈಗಾಗಲೇ ಡಿಜಿ ಹಾಗೂ ಸಿಎಸ್ ಜೊತೆಗೂ ಮಾತಾಡಿದ್ದೇನೆ. ಇದೆಲ್ಲವೂ ಅವರ ವೈಯಕ್ತಿಕ ವಿಚಾರಗಳಾಗಿದ್ದು, ಏನೇನೋ ಮಾತನಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರಿಂದ ನನಗೂ ತುಂಬಾ ನೋವು ಆಗಿದೆ. ಕಾನೂನು ಚೌಕಟ್ಟಿನೊಳಗೆ ಏನು ಕ್ರಮ ತಗೊಬೇಕೋ ಅದನ್ನು ಸಿಎಂ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಆರಗ ಜ್ಞಾನೇಂದ್ರ ಆಕ್ರೋಶ
ಇಂತಹ ಅಧಿಕಾರಿಗಳ ವರ್ತನೆಯನ್ನು ನಿಜಕ್ಕೂ ಸಹಿಸೋಕೆ ಸಾಧ್ಯ ಇಲ್ಲ. ಇವರದ್ದು ಪರ್ಸನಲ್ ಏನಾದರೂ ಇರಬಹುದು. ಆದರೆ ವ್ಯೆಯಕ್ತಿಕ ಕಾರಣದಿಂದ ಬೀದಿ ರಂಪಾಟ ಸರಿಯಲ್ಲ ಎಂದು ಡಿ ರೂಪಾ ಹಾಗೂ ರೋಹಿಣಿ ಸಿಂಧೂರಿ ವಿರುದ್ಧ ಆರಗ ಜ್ಞಾನೇಂದ್ರ ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ: Rohini Sindhuri Vs D Roopa: ನಾನು ಕನ್ನಡಿಗ, ಡಿ ರೂಪಾಗೆ ಹೊಟ್ಟೆ ಕಿಚ್ಚು; ರೋಹಿಣಿ ಸಿಂಧೂರಿ ಪತಿ ಕೆಂಡ
ಇವರಿಬ್ಬರೂ ಆಡ್ತಿರುವ ಆಟ, ನಡವಳಿಕೆ ಸರಿಯಲ್ಲ. ಐಪಿಎಸ್, ಐಎಎಸ್ ವಲಯಕ್ಕೆ ಅವಮಾನ. ನಾನು ಡಿಜಿಪಿ ಜತೆ ಮಾತಾಡಿದ್ದೇನೆ ಎಂದರು. ಇನ್ನು ಅಧಿಕಾರಿಗಳ ಜಗಳದ ಕುರಿತ ಮಾತನಾಡಲು ಸಿಎಂ ಬಸವರಾಜ್ ಬೊಮ್ಮಾಯಿ ಹಿಂದೇಟು ಹಾಕಿದರು.
ಡಿ ರೂಪಾಗೆ ರೋಹಿಣಿ ಸಿಂಧೂರಿ ಪತಿ ಸವಾಲ್
ನಮ್ಮ ಕುಟುಂಬದ ಬಗ್ಗೆ ಅನಗತ್ಯವಾಗಿ ಮಾತನಾಡಬಾರದು. ರೂಪಾ ವಿರುದ್ಧ ದೂರು ನೀಡುತ್ತೇನೆ ಎಂದು ಸುಧೀರ್ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ರೋಹಿಣಿ ಸಿಂಧೂರಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಹಜವಾಗಿ ರಾಜ್ಯದಲ್ಲಿ ಅವರಿಗೆ ಒಳ್ಳೆಯ ಹೆಸರು ಇದೆ. ಆದರೆ ಅವರ ಹೆಸರಿಗೆ ಮಸಿ ಬಳೆಯುವ ಕೆಲಸಗಳು ನಡೆಯುತ್ತಿವೆ. ರೋಹಿಣಿ ಸಿಂಧೂರಿ ಯಾರಿಗೆ ಫೋಟೋ ಕಳುಹಿಸಿದ್ದಾರೆ ಎಂಬುದನ್ನು ರೂಪಾ ಅವರು ಹೇಳಲಿ ಎಂದು ಸುಧೀರ್ ರೆಡ್ಡಿ ಸವಾಲು ಹಾಕಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ