• Home
  • »
  • News
  • »
  • state
  • »
  • CM Basavaraj Bommai: ಯೋಗೇಶ್ವರ್​ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದು ಸರಿಯಲ್ಲ, ಕಟುವಾಗಿ ಖಂಡಿಸುತ್ತೇನೆ; CM ಟ್ವೀಟ್​

CM Basavaraj Bommai: ಯೋಗೇಶ್ವರ್​ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದು ಸರಿಯಲ್ಲ, ಕಟುವಾಗಿ ಖಂಡಿಸುತ್ತೇನೆ; CM ಟ್ವೀಟ್​

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

  • Share this:

ಚನ್ನಪಟ್ಟಣದಲ್ಲಿ ಸರ್ಕಾರದ ಯೋಜನೆಗಳ (Government Schemes) ಶಂಕುಸ್ಥಾಪನೆಗೆ ವೇಳೆ ಜೆಡಿಎಸ್​ ಕಾರ್ಯಕರ್ತರು (JDS Activist) ಗಲಾಟೆ ಮಾಡಿದ್ರು. ಕ್ಷೇತ್ರದ ಶಾಸಕರ (MLAS) ಗಮನಕ್ಕೂ ತರದೇ, ಅವರಿಗೆ ಆಹ್ವಾನ (Invitation) ನೀಡದೆ ಕಾರ್ಯಕ್ರಮ ಉದ್ಘಾಟಿಸಿದ ಸರ್ಕಾರದ ಧೋರಣೆ ವಿರುದ್ಧ ಮಾಜಿ ಸಿಎಂ ಮಾಜಿ ಸಿಎಂ ಕುಮಾರಸ್ವಾಮಿ (H D Kumaraswamy) ಹಾಗೂ ಕಾರ್ಯಕರ್ತರು ಕಿಡಿಕಾರಿದ್ದಾರೆ. ಚನ್ನಪಟ್ಟಣದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ (C P Yogeshwar)​ ಕಾರಿಗೆ ಜೆಡಿಎಸ್​ ಕಾರ್ಯಕರ್ತರು ಮೊಟ್ಟೆ ಎಸೆದರು ಇದ್ರಿಂದ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಘಟನೆಯನ್ನು ಕಟುವಾಗಿ ಖಂಡಿಸಿದ್ದಾರೆ.  


ಕಲ್ಲು , ಮೊಟ್ಟೆ ಎಸೆದಿರುವುದು ಸರಿಯಲ್ಲ


ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗೇಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.ನಾನು ಕಟುವಾಗಿ ಖಂಡಿಸುತ್ತೇನೆ


ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಟ್ವೀಟ್​ ಮಾಡಿದ್ದಾರೆ. ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಲು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಬೆಳಿಗ್ಗೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮಕ್ಕೆ ಆಗಮಿಸಿದ್ದರು.


ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು


ಸ್ಥಳೀಯ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನೇ ದೂರ ಇಟ್ಟು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದರು. ಕಲ್ಲು ಹಾಗೂ ಮೊಟ್ಟೆ ಎಸೆದರು. ನೆರೆದಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.


ಇದನ್ನೂ ಓದಿ: H D Kumaraswamy: ಅವ್ರು 50 ಕೋಟಿ ಕೊಟ್ಟಿರೋದು ನನ್ನನ್ನು ಕಟ್ಟಿ ಹಾಕಲು; ನಮ್ಮ ಕಾರ್ಯಕರ್ತರನ್ನು ಕೆಣಕಬೇಡಿ ಎಂದ್ರು ಕುಮಾರಸ್ವಾಮಿ


ಜೆಡಿಎಸ್ ಕಾರ್ಯಕರ್ತರ ಗಲಾಟೆಗೆ ಕಾರಣ ಏನು?

 ಸಿಪಿ ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಸಂಭಾವ್ಯ ಅಭ್ಯರ್ಥಿ. ಈ ಹಿನ್ನೆಲೆ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 50 ಕೋಟಿ ಹಣ ತಂದಿರುವ ಯೋಗೇಶ್ವರ್ ಇಂದು ಕ್ಷೇತ್ರದ ಗ್ರಾಮೀಣ ರಸ್ತೆಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಆಯೋಜನೆ ಮಾಡಿದ್ದರು. ಕಾರ್ಯಕ್ರಮ ಹಿನ್ನೆಲೆ ರಾಂಪುರದಲ್ಲಿ ವೇದಿಕೆ ಸಹ ನಿರ್ಮಾಣ ಮಾಡಲಾಗಿತ್ತು.


ಇದನ್ನೂ ಓದಿ:  Davanagere: ಶಾಲೆಯಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು


ಆದ್ರೆ ಸ್ಥಳೀಯ ಶಾಸಕರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕಾರ್ಯಕ್ರಮಕ್ಕೆ ಕರೆಯದೇ ಕಡೆಗಣನೆ ಮಾಡಲಾಗಿದೆ. ಶಾಸಕರ ಗಮನಕ್ಕೆ ತರದೇ ಅನುದಾನ ತಂದು ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು. ಪ್ರತಿಭಟನಾ ನಿರತ ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

Published by:ಪಾವನ ಎಚ್ ಎಸ್
First published: