ಬೆಳಗಾವಿಯಲ್ಲಿ ಲಸಿಕೆ ಪಡೆದ ಮೂರು‌ ಮಕ್ಕಳ ಸಾವು ಪ್ರಕರಣ; ವರದಿ ಕೇಳಿದ CM Bommai

ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ಬಸವರಾಜ್ ಬೊಮ್ಮಾಯಿ

  • Share this:
ಬೆಳಗಾವಿ (ಜನವರಿ,16) : ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ. ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಏನಿದು ಘಟನೆ

ಲಸಿಕೆ ಪಡೆದ ಮೂವರು ಪುಟ್ಟ ಕಂದಮ್ಮಗಳು ನಿಗೂಢವಾಗಿ ಸಾವನ್ನಪ್ಪಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿಯ ಪ್ರಮಾದವೇ ಮಕ್ಕಳ ಸಾವಿಗೆ ಕಾರಣ ಅಂತಾ ಗ್ರಾಮಸ್ಥರು ಆರೋಪಿಸಿದ್ದು, ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆ ಹೆತ್ತವರ ಅಕ್ರಂದನ ಮುಗಿಲು ಮುಟ್ಟಿತು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ್ 13 ತಿಂಗಳು, ಮಧು ಉಮೇಶ್ ಕುರಗುಂದಿ 14 ತಿಂಗಳ ಮಗು ಹಾಗೂ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಒಂದೂವರೆ ವರ್ಷದ ಚೇತನ ಸಾವಿಗೀಡಾದ ಮಕ್ಕಳಾಗಿದ್ದಾರೆ. ರಾಮದುರ್ಗದ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ  ಆಗಮಿಸಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಮಕ್ಕಳಿಗೆ ಲಸಿಕೆ ನೀಡಿದ ಬಳಿಕ ಮಕ್ಕಳಲ್ಲಿ ವಾಂತಿ ಭೇದಿ ಶುರುವಾಗಿದೆ. ತಕ್ಷಣವೇ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜ 13 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೂರು ಕಂದಮ್ಮಗಳು ಉಸಿರು ನಿಲ್ಲಿಸಿವೆ.

ಕೋವಿಡ್ ಲಸಿಕೆ ನೀಡಿದ ಅನುಮಾನ ವ್ಯಕ್ತಪಡಿಸಿದ ಪೋಷಕರು

ಮಕ್ಕಳಿಗೆ ಲಸಿಕೆ ನೀಡಿದ ದಿನವೇ ಆರೋಗ್ಯ ಇಲಾಖೆಯವರು ಕೋವಿಡ್ ಲಸಿಕಾಕರಣ ಅಭಿಯಾನ ಮಾಡಿದ್ದಾರೆ. ಈ ವೇಳೆ ಗೊಂದಲದಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿರುವ ಅನುಮಾನ ಇದೆಯೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮೂವರು ಕಂದಮ್ಮಗಳ ನಿಗೂಢ ಸಾವು ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಡಿ ಎಚ್ ಒ ಡಾ.ಎಸ್.ವಿ.ಮುನ್ಯಾಳ ಈಗಾಗಲೇಮಕ್ಕಳ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ್ದೇ‌ನೆ.

ಇದನ್ನು ಓದಿ: ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ: ಅರ್ಜಿ ಸಲ್ಲಿಸಲು ಜ.21 ಕೊನೆ ದಿನ

ಸಿಬ್ಬಂದಿ ನಿರ್ಲಕ್ಷ್ಯ

ಜನವರಿ 12ರಂದು 21 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. ಅದರಲ್ಲಿ ನಾಲ್ವರು ಮಕ್ಕಳಿಗೆ ದಡಾರ್ ರುಬೆಲ್ಲಾ ವ್ಯಾಕ್ಸಿನ್ ನೀಡಲಾಗಿದೆ. ಆ ನಾಲ್ಕು ಮಕ್ಕಳಲ್ಲಿ ಪ್ರತಿಕೂಲ ಪರಿಣಾಮ ಕಾಣಿಸಿಕೊಂಡಿದೆ. ಬಳಿಕ ಅವರನ್ನು ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಎಂದ್ರು. ಒಂದೇ ಕೇಂದ್ರದಲ್ಲಿ ವಯಸ್ಕರಿಗೆ ಕೋವಿಡ್ ಲಸಿಕೆ ಹಾಗೂ ಮಕ್ಕಳಿಗೆ ಲಸಿಕೆ ನೀಡಲಾಗಿದೆ, ಸಿಬ್ಬಂದಿ ನಿರ್ಲಕ್ಷ್ಯದಿಂದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂಬಪೋಷಕರ ಆರೋಪ ಅಲ್ಲಗಳೆದಿರುವ ಡಿಹೆಚ್‌ಒ ಶಶಿಕಾಂತ ಮುನ್ಯಾಳ್.

ಇದನ್ನು ಓದಿ: ದ್ವೈವಾರ್ಷಿಕ ಪರ್ಯಾಯಕ್ಕೆ Uduupi ಸಜ್ಜು; ಕೃಷ್ಣಾಪುರ ಮಠದ ಪರ್ಯಾಯ ಇತಿಹಾಸ ಇದು

ತಪ್ಪು ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಯಾವುದೇ ಲಸಿಕೆ ಪ್ರತಿಕೂಲ ಪರಿಣಾಮ ಬೀರಿದ್ರೆ ಆ ಬಗ್ಗೆ ಪರಿಶೀಲನೆಗೆ ಸಮಿತಿ ಇದೆ. ಆ ಸಮಿತಿಯ ವರದಿಯಂತೆ ಪ್ರಾಥಮಿಕವಾಗಿ ಲಸಿಕೆಯಿಂದ ಅಡ್ಡ ಪರಿಣಾಮ ಬೀರಿದ ಬಗ್ಗೆ ಗೊತ್ತಾಗಿದೆ. ಈಗಾಗಲೇ ಮೃತ ಮಕ್ಕಳ ರಕ್ತದ ಮಾದರಿ, ಮಲಮೂತ್ರದ ಮಾದರಿ ರವಾನೆ ಮಾಡಿದ್ದೇವೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಪರಿಶೀಲಿಸಿ ಕ್ರ‌ಮ ಕೈಗೊಳ್ಳುತ್ತೇವೆ, ಇದರಲ್ಲಿ ಯಾರೇ ಸಿಬ್ಬಂದಿ ತಪ್ಪು ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಒಂದೆಡೆ ಮೂವರು ಎಳೆ ಮಕ್ಕಳನ್ನು ಕಳೆದುಕೊಂಡ ಪೋಷಕರ ಅಕ್ರಂದನ ಮುಗಿಲು ಮುಟ್ಟಿದ್ದು ಮತ್ತೊಂದೆಡೆ ಮೂರು ಮಕ್ಕಳ ಸಾವು ಪ್ರಕರಣ ಬೆಳಗಾವಿ ಜಿಲ್ಲೆಯ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಮರಣೋತ್ತರ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗಿದೆ. ನಂತರವೇ‌ ಮಕ್ಕಳ‌‌ ಸಾವಿಗೆ ಖಚಿತ ಮಾಹಿತಿ ಸಿಗಬೇಕಿದೆ.
Published by:Seema R
First published: