ಹುಬ್ಬಳ್ಳಿ: ಗಡಿಯಲ್ಲಿ ಪುಂಡಾಟಿಕೆ ಮುಂದುವರಿಸಿರುವ ಎಂಇಎಸ್ಗೆ (MES) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basvaraj Bommai) ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Union Minister Amit Shah) ಭೇಟಿ ನಂತರವೂ ಎಂಇಎಸ್ ಪುಂಡಾಟ ನಡೆಸಿರುವುದಕ್ಕೆ ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಇಎಸ್ ಮಹಾ ಮೇಳಾವ (MES Maha Melav) ನಡೆಸುತ್ತಿರುವ ವಿಚಾರಕ್ಕೆ ಕಿಡಿಕಾರಿದ ಬೊಮ್ಮಾಯಿ, ಪುಂಡಾಟ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದು ಬಸ್ತಿನಲ್ಲಿಡಬೇಕು ಎಂಬುವುದು ನಮಗೆ ಗೊತ್ತಿದೆ. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ವಿರುದ್ಧ ಸಿಎಂ ಕಿಡಿ
ಕುಕ್ಕರ್ ಬಾಂಬ್ ಸ್ಫೋಟ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಯನ್ನು ಸಮರ್ಥಿಸಿಕೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಿಎಂ ತಿರುಗೇಟು ನೀಡಿದರು.
ಡಿ.ಕೆ ಶಿವಕುಮಾರ್ ಕುಕ್ಕರ್ ಬಾಂಬ್ ವಿಚಾರ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂಬ ಹೇಳಿಕೆಯನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದಾರೆ. ಮೊದಲು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯನ್ನ ಗಮನಿಸಿ ಪ್ರತಿಕ್ರಿಯೆ ನೀಡಬೇಕು. ಅದೊಂದು ಆಕಸ್ಮಿಕ ಘಟನೆ, ಪ್ರೆಶರ್ ಕುಕ್ಕರ್ ನಿಂದ ಆಗಿದ್ದು ಅಂತ ಹೇಳಿದ್ದಾರೆ. ಶಿವಕುಮಾರ್ ಹೇಳಿದ ಮಾತು ಕೇಳಿಸಿಕೊಂಡ ಮಾತನಾಡಲಿ ಎಂದರು.
ಅಧಿವೇಶನದಲ್ಲಿ ಮಹತ್ವದ ಬಿಲ್ಗಳು ಮಂಡನೆ
ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ತರುತ್ತಿದ್ದೇವೆ. ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಜಾರಿ ಬಿಲ್ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಬೆಳಗಾವಿ ಅಧಿವೇಶನದಲ್ಲಿ ಆರ್ಡಿನೆನ್ಸ್ ರೀಪ್ರೇಮೆಂಟ್ ಬಿಲ್ ಬರುತ್ತೆ. ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಚಾರಗಳು ಚೆರ್ಚೆಗೆ ಬರಲಿದ್ದು, ಅದಕ್ಕೆ ಸರ್ಕಾರ ಉತ್ತರ ನೀಡಲಿದೆ ಎಂದರು.
ಸಿಎಂ ಬೆಂಗಾವಲು ವಾಹನ ತಡೆದು ಆಕ್ರೋಶ
ಸಿಎಂ ಬೆಂಗಾವಲು ವಾಹನ ತಡೆದು ಪ್ರತಿಭಟನೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಾರಿಗೆ ಅಡ್ಡ ನಿಂತು ಆಶ್ರಯ ಕಾಲೋನಿ ನಿವಾಸಿಗಳು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲೆಂದು ಆಶ್ರಯ ನಿವಾಸಿಗಳು ಬೆಳಗ್ಗೆ 7 ಗಂಟೆಗೆ ಬಂದು ನಿಂತಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಸಿಎಂ ಬೊಮ್ಮಾಯಿ ಮನವಿ ಸ್ವೀಕರಿಸಿದೇ ತೆರಳಿದ್ದಾರೆ.
ವಿಮಾನ ನಿಲ್ದಾಣಕ್ಕೆ ಮನೆ ಕಳೆದುಕೊಂಡಿದ್ದೇವೆ
ಇದರಿಂದ ಕುಪಿತಗೊಂಡ ಜಗದೀಶ ನಗರ ಆಶ್ರಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಆದರ್ಶ ನಗರದ ಸಿಎಂ ನಿವಾಸದ ಎದುರು ಪ್ರತಿಭಟನೆ ಮಾಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕಾಗಿ ನಮ್ಮ ಮನೆ ಕಳೆದುಕೊಂಡಿದ್ದೇವೆ. ಅದಕ್ಕೆ ಪರ್ಯಾಯವಾಗಿ ಆಶ್ರಯ ಮನೆ ನೀಡೋದಾಗಿ ತಿಳಿಸಿದ್ದರು.
ಇದನ್ನೂ ಓದಿ: Belagavi: ಅಧಿವೇಶನಕ್ಕೆ ಬರುತ್ತಿದ್ದ ವಾಹನದ ಮೇಲೆ ಮರಾಠಿ ಪುಂಡರಿಂದ ಕಲ್ಲು ತೂರಾಟ; ಚಾಲಕನಿಗೆ ಜೀವ ಬೆದರಿಕೆ
ಮನೆ ಹಂಚಿಕೆ ಮಾಡ್ತಿಲ್ಲ
ಆಶ್ರಯ ಮನೆ ನಿರ್ಮಿಸಿದ್ದರೂ ಹಂಚಿಕೆ ಮಾಡ್ತಿಲ್ಲ. 202 ಮನೆಗಳ ಹಂಚಿಕೆ ಹಾಗೂ ಹಕ್ಕು ಪತ್ರ ವಿತರಣೆ ಮಾಡಿ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ತಮ್ಮ ಅಹವಾಲು ಸ್ವೀಕರಿಸಲಿಲ್ಲ ಎಂದು ಕಣ್ಣೀರಿಟ್ಟು ಗೊಳಾಡಿದ ಜನ, ಅಧಿಕಾರಿಗಳು ಕನಿಷ್ಠ ಕನಿಕರ ತೋರಲಿಲ್ಲ ಅಂತ ಕಿಡಿಕಾರಿದರು. ಪೊಲೀಸರ ಕಾರ್ಯವೈಖರಿ ವಿರುದ್ಧವೂ ಆಕ್ರೋಶ ಹೊರಹಾಕಿದರು.
ಡಿಕೆಶಿಗೆ ಸಿದ್ದರಾಮಯ್ಯ ಬೆಂಬಲ
ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು (Cooker Blast Case) ರಾಜಕೀಯಕ್ಕೆ ಬಳಸಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಅವರು ಟೆರರಿಸಂ ಸಪೋರ್ಟ್ ಮಾಡ್ತೀನಿ ಅಂತ ಹೇಳಿದ್ರಾ ಎಂದು ಪ್ರಶ್ನೆ ಮಾಡಿದರು.
ಡಿಕೆ ಶಿವಕುಮಾರ್ ಹೇಳಿಕೆಯನ್ನು ಬಿಜೆಪಿಯವರು (BJP Leaders) ತಿರುಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಭಯೋತ್ಪಾದನೆ ಹತ್ತಿಕೆದ್ಯಾ? ದೇಶದಲ್ಲಿ ಉಗ್ರಗಾಮಿ ಚಟುವಟಿಕೆ ಹತ್ತಿಕ್ಕಿ ಎಂದು ಬಿಜೆಪಿ ಸರ್ಕಾರವನ್ನು ಆಗ್ರಹಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ