Basavaraja Bommai| ಸಿಎಂ ಬೊಮ್ಮಾಯಿ-ಕೇಂದ್ರ ಸಚಿವ ನಿತೀನ್ ಗಡ್ಕರಿ ಭೇಟಿ ಹಲವು ಮಹತ್ವದ ಯೋಜನೆಗಳ ಬಗ್ಗೆ ಚರ್ಚೆ

ಈ ಹಿಂದೆ ಬೊಮ್ಮಾಯಿ ದೆಹಲಿಗೆ ತೆರಳಿದ್ದಾಗ ಮೇಕೆದಾಟು, ಕೃಷ್ಣ ಸೇರಿದಂತೆ ಹಲವು ಅಂತಾರಾಜ್ಯ ನದಿ ವಿವಾದಗಳ ಬಗ್ಗೆ ಚರ್ಚೆ ನಡೆಸಿದ್ದರು. ಆದರೆ, ಈ ಭಾರಿ ಹಲವು ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಸವರಾಜ ಬೊಮ್ಮಾಯಿ.

ಬಸವರಾಜ ಬೊಮ್ಮಾಯಿ.

 • Share this:
  ನವ ದೆಹಲಿ (ಸೆಪ್ಟೆಂಬರ್ 08); ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವರುಗಳಾದ ನಿತೀನ್ ಗಡ್ಕರಿ ಜೀತೇಂದ್ರ ಸಿಂಗದ ಭೇಟಿಯಾಗಿದ್ದು, ಅನೇಕ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಬೊಮ್ಮಾಯಿ ದೆಹಲಿಗೆ ತೆರಳಿದ್ದಾಗ ಮೇಕೆದಾಟು, ಕೃಷ್ಣ ಸೇರಿದಂತೆ ಹಲವು ಅಂತಾರಾಜ್ಯ ನದಿ ವಿವಾದಗಳ ಬಗ್ಗೆ ಚರ್ಚೆ ನಡೆಸಿದ್ದರು. ಆದರೆ, ಈ ಭಾರಿ ಹಲವು ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ ಅನೇಕ ಮಾಹಿತಿಗಳನ್ನು ನೀಡಿದ್ದಾರೆ.

  ಚರ್ಚೆಯ ಬಳಿಕ ನವ ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, "ಇಂದು ಕೇಂದ್ರ ಸಚಿವರಾದ ನಿತೀನ್ ಗಡ್ಕರಿ, ಜೀತೇಂದ್ರ ಸಿಂಗ್ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಆಡಳಿತ್ಮಾಕ ವಿಚಾರಗಳ ಬಗ್ಗೆಯೂ ಚರ್ಚೆ ಮಾಡಿದೆ. ಈ ವೇಳೆ ರಾಜ್ಯದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಉತ್ಪಾದಕ ಘಟಕ ಸ್ಥಾಪನೆ,  ರಾಜ್ಯದಲ್ಲಿ ಆಫ್ಟಿಕಲ್ ಫೈಬರ್ ಇಂಟರ್ ನೆಟ್ ಅಳವಡಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಇದಲ್ಲದೆ,  ರಾಜ್ಯ ಮಟ್ಟದ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭಿಸುವ ಬಗ್ಗೆ ನಡೆಸಲಾಯಿತು" ಎಂದು ಮಾಹಿತಿ ನೀಡಿದ್ದಾರೆ.

  ಸಚಿವ ನಿತೀನ್ ಗಡ್ಕರಿ ಅವರನ್ನೂ ಭೇಟಿ ಮಾಡಿರುವ ಬಸವರಾಜ ಬೊಮ್ಮಾಯಿ, "ಗಡ್ಕರಿ ಅವರನ್ನು ಭೇಟಿಯಾಗಿ ದಾಬಸ್ ಪೇಟೆ ಟು ಹೊಸುರು ರೋಡ್ ರಸ್ತೆ ನಿರ್ಮಾಣದ ಬಗ್ಗೆ ಚರ್ಚೆ ಮಾಡಿ ಯೋಜನೆ ಆರಂಭಿಸಲು ಮನವಿ ಮಾಡಲಾಗಿದೆ. ಈ ರಸ್ತೆಯಿಂದ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಲಿದೆ. ಇದರ ಜೊತೆಗೆ ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸಲು ಮನವಿ ಮಾಡಲಾಗಿದೆ.

  ಬಿಜಾಪುರ ಟು ಸಂಕೇಶ್ವರ 80 ರಿಂದ 120 ಕಿಲೋಮೀಟರ್ ಗೆ ವಿಸ್ತರಿಸಲು ಹಾಗೂ 5 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು, ಭಾರತ ಮಾಲಾ ಎರಡನೇ ಯೋಜನೆಯಲ್ಲಿ ಸೇರಿಸಲು ಮನವಿ ಮಾಡಲಾಗಿದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ವೇಳೆ ಹಾಳಾದ ರಸ್ತೆ ಪರಿಹಾರವಾಗಿ 184 ಕೋಟಿ ಬಿಡುಗಡೆ ಮಾಡಲು ನಿತೀನ್ ಗಡ್ಕರಿ  ಒಪ್ಪಿದ್ದಾರೆ. ನಿಫಾ ವೈರಸ್ ಬಗ್ಗೆಯೂ ಸೂಚನೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.

  ಇದನ್ನೂ ಓದಿ: Kalburgi- ಮೇಯರ್ ಸ್ಥಾನ ಕೊಟ್ಟವರಿಗೆ ಬೆಂಬಲ; ರಾಷ್ಟ್ರೀಯ ಪಕ್ಷಗಳ ಅಂಗಳಕ್ಕೆ ಚೆಂಡೆಸೆದ ಹೆಚ್​ಡಿಕೆ?

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: