ಮಹಾರಾಷ್ಟ್ರ ಚುನಾವಣೆ; ಬಿಜೆಪಿ ಪರವಾಗಿ ಇಂದು ಸಿಎಂ ಬಿಎಸ್​ ಯಡಿಯೂರಪ್ಪ ಪ್ರಚಾರ

Maharashtra Assembly Election: ಮಹಾರಾಷ್ಟ್ರದಲ್ಲಿ 1.20 ಕೋಟಿಗೂ ಹೆಚ್ಚು ಲಿಂಗಾಯತ ಮತಗಳಿದ್ದು, ಅವುಗಳನ್ನು ತಮ್ಮತ್ತ ಸೆಳೆಯಲು ಯಡಿಯೂರಪ್ಪ ಇಂದು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು ಇಲ್ಲಿನ 13 ಜಿಲ್ಲೆಗಳಲ್ಲಿ ಲಿಂಗಾಯತ ಮತದಾರರ ಪ್ರಾಬಲ್ಯವಿದೆ.

Sushma Chakre | news18-kannada
Updated:October 16, 2019, 8:07 AM IST
ಮಹಾರಾಷ್ಟ್ರ ಚುನಾವಣೆ; ಬಿಜೆಪಿ ಪರವಾಗಿ ಇಂದು ಸಿಎಂ ಬಿಎಸ್​ ಯಡಿಯೂರಪ್ಪ ಪ್ರಚಾರ
ಬಿ.ಎಸ್​. ಯಡಿಯೂರಪ್ಪ
  • Share this:
ಮುಂಬೈ (ಅ. 16): ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಇಂದಿನಿಂದ ಬಿಎಸ್​ವೈ ಅಧಿಕೃತವಾಗಿ ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ.

ಕರ್ನಾಟಕದ ಅತೃಪ್ತ ಶಾಸಕರು ಕಾಂಗ್ರೆಸ್​-ಜೆಡಿಎಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಐಷಾರಾಮಿ ಹೋಟೆಲ್​ನಲ್ಲಿ ನೆಲೆಸಿದ್ದರು. ಈ ವೇಳೆ ಅಲ್ಲಿನ ಸಿಎಂ ದೇವೇಂದ್ರ ಫಡ್ನವಿಸ್ ಬೆಂಬಲದಿಂದ ಕಾಂಗ್ರೆಸ್- ಜೆಡಿಎಸ್ ಪಕ್ಷದ ಯಾವ ನಾಯಕರೂ ಅಲ್ಲಿದ್ದ ಶಾಸಕರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಆಗ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರೇ ಮುಂಬೈ ಹೋಟೆಲ್​ ಮುಂದೆ ದಿನವಿಡೀ ಕಾದು ಕುಳಿತರೂ ಶಾಸಕರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವಿಸ್ ಕೂಡ ಪರೋಕ್ಷವಾಗಿ ಸಹಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ನಾಯಕರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಕೊಡಗಿನಲ್ಲಿ ವ್ಯಾಪಕ ಮಳೆ; ಕೆಆರ್​ಎಸ್​ ಜಲಾನಯನ ಪ್ರದೇಶದಲ್ಲಿ ಮತ್ತೆ ಪ್ರವಾಹ ಭೀತಿ; ನದಿ ಸಮೀಪ ಸುಳಿಯದಂತೆ ಜನರಿಗೆ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ 1.20 ಕೋಟಿಗೂ ಹೆಚ್ಚು ಲಿಂಗಾಯತ ಮತಗಳಿದ್ದು, ಅವುಗಳನ್ನು ತಮ್ಮತ್ತ ಸೆಳೆಯಲು ಯಡಿಯೂರಪ್ಪ ಇಂದು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು ಇಲ್ಲಿನ 13 ಜಿಲ್ಲೆಗಳಲ್ಲಿ ಲಿಂಗಾಯತ ಮತದಾರರ ಪ್ರಾಬಲ್ಯವಿದೆ. ಸುಮಾರು 1.20 ಕೋಟಿ ಲಿಂಗಾಯತ ಮತದಾರರಿದ್ದಾರೆ ಎನ್ನುತ್ತಿವೆ ಬಿಜೆಪಿ ಮೂಲಗಳು.

ಹೀಗಾಗಿ, ಇಂದು ಮಹಾರಾಷ್ಟ್ರದ ಸಾಂಗ್ಲಿ, ಸೊಲ್ಲಾಪುರ, ಅಕ್ಕಲಕೋಟ್, ಚಕೂರ್, ಲಾತೂರ್ ಈ 5 ಕಡೆಗಳಲ್ಲಿ ಯಡಿಯೂರಪ್ಪ ಚುನಾವಣಾ ಪ್ರಚಾರ ಮಾಡಲಿದ್ದಾರೆ. 5 ಕಡೆಗಳಲ್ಲೂ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಂಡು ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ.

ಇಂದು ಬೆಳಗ್ಗೆ ಬೆಳಗಾವಿಯಿಂದ ಮುಂಬೈಗೆ ಹೊರಡಲಿರುವ ಸಿಎಂ ಬಿಎಸ್​ವೈ ಹೆಲಿಕಾಪ್ಟರ್ ಮೂಲಕ ಸಾಂಗ್ಲಿಯ ಸಂಖ್​ಗೆ ತೆರಳಲಿದ್ದಾರೆ. ಇಂದು ದಿನಪೂರ್ತಿ ಪ್ರಚಾರ ನಡೆಸಲಿದ್ದಾರೆ. ನಂತರ ರಾತ್ರಿ ಲಾತೂರ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

(ವರದಿ: ಕೃಷ್ಣ ಜಿ.ವಿ)
First published:October 16, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading