HR RameshHR Ramesh
|
news18-kannada Updated:January 19, 2020, 7:42 AM IST
ಸಿಎಂ ಯಡಿಯೂರಪ್ಪ
ಬೆಂಗಳೂರು(ಜ.19): ವಿಶ್ವ ಆರ್ಥಿಕ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದಿನಿಂದ ಆರು ದಿನಗಳ ಕಾಲ ಸಿಎಂ ಬಿಎಸ್ವೈ ದಾವೋಸ್ನಲ್ಲಿ ಇರಲಿದ್ದಾರೆ.
ಬಿಎಸ್ವೈ ಅವರೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಪ್ರಿನ್ಸಿಪಲ್ ಸೆಕ್ರೆಟರಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಆಯುಕ್ತ ಗುಂಜಾನ್ ಕೃಷ್ಣ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಎಂ.ಬಿ.ಮರಂಕಲ್, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಪಿ. ರುದ್ರಪ್ಪಯ್ಯ ತೆರಳಲಿದ್ದಾರೆ.
ಇಂದು ಬೆಳಗ್ಗೆ 10.25ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಿ, ಅಲ್ಲಿಂದ ಜುರಿಚ್ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಮಾರ್ಗವಾಗಿ ದಾವೋಸ್ಗೆ ತೆರಳಲಿದ್ದಾರೆ.
ನಾಳೆ ನಡೆಯಲಿರುವ ವಿಶ್ವ ಆರ್ಥಿಕ ವಾರ್ಷಿಕ ಸಮ್ಮೇಳನದಲ್ಲಿ ಸಿಎಂ ಬಿಎಸ್ವೈ ನಿಯೋಗ ಪಾಲ್ಗೊಳ್ಳಲಿದೆ. ನಂತರ ಕರ್ನಾಟಕದಲ್ಲಿ ಹೂಡಿಕೆಗಾಗಿ ಜಾಗತಿಕ ಹೂಡಿಕೆದಾರರೊಂದಿಗೆ ಸಿಎಂ ಮತ್ತು ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ದಿನಾಂಕ 24ರಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಇದನ್ನು ಓದಿ: ವಿದೇಶ ಪ್ರವಾಸದ ಬಳಿಕ ಸಂಪುಟ ವಿಸ್ತರಿಸುವಂತೆ ಸಿಎಂ ಬಿಎಸ್ವೈಗೆ ಅಮಿತ್ ಶಾ ಅಭಯ
First published:
January 19, 2020, 7:05 AM IST