ರಾಜ್ಯಪಾಲರನ್ನು ದಿಢೀರ್‌ ಭೇಟಿಯಾದ ಯಡಿಯೂರಪ್ಪ; ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ?

ಬಲ್ಲ ಮೂಲಗಳ ಪ್ರಕಾರ ಆಗಸ್ಟ್‌ 2ನೇ ವಾರದಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಈ ಕುರಿತು ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆಸುವ ಮುನ್ನವೇ ರಾಜ್ಯಪಾಲ ವಜುಭಾಯಿ ವಾಲಾ ಅವರ ಜೊತೆ ಚರ್ಚಿಸಬೇಕು ಎಂಬ ಕಾರಣಕ್ಕಾಗಿಯೇ ಬಿ.ಎಸ್‌. ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

news18-kannada
Updated:July 31, 2020, 11:55 AM IST
ರಾಜ್ಯಪಾಲರನ್ನು ದಿಢೀರ್‌ ಭೇಟಿಯಾದ ಯಡಿಯೂರಪ್ಪ; ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ?
ಬಿ.ಎಸ್‌. ಯಡಿಯೂರಪ್ಪ.
  • Share this:
ಬೆಂಗಳೂರು (ಜುಲೈ 31); ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಜೊತೆಗೆ ಇಂದು ದಿಢೀರ್‌ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ದಿಢೀರ್‌ ಭೇಟಿ ಅನೇಕ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು, ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುವ ಸಲುವಾಗಿಯೇ ಸಿಎಂ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಗಳೇ ಕಳೆದಿದೆ. ಆದರೂ, ಈವರೆಗೆ ಪೂರ್ಣ ಸಂಪುಟ ರಚಿಸಲಾಗಿಲ್ಲ. ಸಂಪುಟದಲ್ಲಿ ಆರು ಸಚಿವ ಸ್ಥಾನಗಳು ಖಾಲಿಯಾಗಿಯೇ ಇವೆ. ಆದರೆ, ಈ ಆರು ಸ್ಥಾನಗಳಿಗೆ ಕನಿಷ್ಟ 20 ಜನ ಸಚಿವ ಸ್ಥಾನ ಆಕಾಂಕ್ಷಿಗಳಿದ್ದಾರೆ. ಅಲ್ಲದೆ, ಹಲವು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.

ಈ ನಡುವೆ ಕಳೆದ ಹಲವು ದಿನಗಳಿಂದ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕುರಿತ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಿಗೆ ಸಿಎಂ ಯಡಿಯೂರಪ್ಪ ಆಗಸ್ಟ್‌ ತಿಂಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ಮನಸ್ಸು ಮಾಡಿದ್ದಾರೆ. ಹೈಕಮಾಂಡ್‌ ನಾಯಕರ ಇಶಾರೆಗೆ ಕಾಯುತ್ತಿದ್ದು, ಅವರು ಒಪ್ಪಿಗೆ ನೀಡಿದ ಬೆನ್ನಿಗೆ ಸಂಪುಟ ವಿಸ್ತರಣೆ ಖಚಿತ ಎನ್ನಲಾಗುತ್ತಿದೆ.

ಬಲ್ಲ ಮೂಲಗಳ ಪ್ರಕಾರ "ಆಗಸ್ಟ್‌ 2ನೇ ವಾರದಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಈ ಕುರಿತು ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆಸುವ ಮುನ್ನವೇ ರಾಜ್ಯಪಾಲ ವಜುಭಾಯಿ ವಾಲಾ ಅವರ ಜೊತೆ ಚರ್ಚಿಸಬೇಕು ಎಂಬ ಕಾರಣಕ್ಕಾಗಿಯೇ ಬಿ.ಎಸ್‌. ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ" ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಯುವಕರನ್ನೂ ಬಲಿ ಪಡೆಯುತ್ತಿದೆ ಕೊರೋನಾ; ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ

ಈ ಭೇಟಿ ನಂತರ ಮಾತನಾಡಿದ ಗೃಹ ಸಚಿವ, "ಚರ್ಚೆ ವೇಳೆ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾತುಕತೆ ನಡೆಸಲಾಗಿಲ್ಲ. ರಾಜ್ಯ ಸರ್ಕಾರ ಮಾದಕ ವಸ್ತು ಜಾಲದ ಕುರಿತು ಸಮರ ಸಾರಿದ್ದು, ರಾಜ್ಯಪಾಲರು ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ" ಎಂದು ಹೇಳುವ ಮೂಲಕ ಸಂಪುಟ ವಿಸ್ತರಣೆಯ ಕುರಿತ ಚರ್ಚೆಯನ್ನು ತಳ್ಳಿಹಾಕಿದ್ದಾರೆ.
ಆದರೆ, ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಕುರಿತ ಸುದ್ದಿಗಳು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಪಾಲ ವಜುಭಾಯಿ ವಾಲಾ ಅವರ ಭೇಟಿಗೆ ವಿಶೇಷ ಅರ್ಧ ಕಲ್ಪಿಸಲಾಗಿದೆ. ಅಲ್ಲದೆ, ಒಂದು ವರ್ಷದಿಂದ ಸ್ಥಗಿತವಾಗಿದ್ದ ಸಂಪುಟ ವಿಸ್ತರಣೆ ಪ್ರಸರಣ ಕೊನೆಗೂ ಮುಕ್ತಾಯದ ಹಂತ ತಲುಪಿದೆ ಎನ್ನಲಾಗುತ್ತಿದೆ.
Published by: MAshok Kumar
First published: July 31, 2020, 11:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading