ಇಂದು ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್​ವೈ ಭೇಟಿ; ಪರಿಶೀಲನೆ

ಸಿಎಂ ಸುರೇಬಾನ್ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಆಲಿಸಲಿದ್ದಾರೆ. ಬಳಿಕ ಪರಿಹಾರ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

news18
Updated:September 10, 2019, 11:18 AM IST
ಇಂದು ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್​ವೈ ಭೇಟಿ; ಪರಿಶೀಲನೆ
ಬಿಎಸ್ ಯಡಿಯೂರಪ್ಪ
  • News18
  • Last Updated: September 10, 2019, 11:18 AM IST
  • Share this:
ಬೆಂಗಳೂರು(ಸೆ.10): ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಉತ್ತರ ಕರ್ನಾಟಕದ ನದಿಗಳು ತುಂಬಿ ಹರಿಯುತ್ತಿವೆ. ಬೆಳಗಾವಿಯಲ್ಲಂತೂ ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ. ಹೀಗಾಗಿ ನೆರೆ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯ ವೀಕ್ಷಿಸಲು ಸಿಎಂ ಬಿ.ಎಸ್‌ ಯಡಿಯೂರಪ್ಪ ಇಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಈ ವೇಳೆ ಡಿಸಿಎಂ ಲಕ್ಷ್ಮಣ್ ಸವದಿ, ಗೃಹ ಸಚಿವ ‌ಬಸವರಾಜ್ ಬೊಮ್ಮಾಯಿ ಸಹ ಮುಖ್ಯಮಂತ್ರಿಗಳ ಜೊತೆಗೂಡಲಿದ್ದಾರೆ.

ರಾಮದುರ್ಗ ತಾಲೂಕಿನ ಚಿಕ್ಕ ಹಂಪಿಹೊಳಿ ಮತ್ತು ಹೀರೆ ಹಂಪಿಹೊಳಿ ಗ್ರಾಮಕ್ಕೆ ಸಿಎಂ ಬಿ.ಎಸ್​​ ಯಡಿಯೂರಪ್ಪ ಭೇಟಿ ನೀಡಿ ಇಲ್ಲಿನ ನೆರೆಪೀಡಿತ ಪ್ರದೇಶದಲ್ಲಿ ಪರಿಶೀಲನೆ ನಡೆಲಿದ್ದಾರೆ. ಹಾಗೆಯೇ ಸುರೇಬಾನ್ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಆಲಿಸಲಿದ್ದಾರೆ. ಬಳಿಕ ಪರಿಹಾರ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ನ್ಯೂಸ್​-18ಗೆ ತಿಳಿದು ಬಂದಿದೆ.

ಇತ್ತೀಚೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ತುಂಗಭದ್ರಾ ನದಿಗಳು ಉಕ್ಕಿ ಹರಿಯುತ್ತಿದ ಕಾರಣ ಬೆಳಗಾವಿ, ಗದಗ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮತ್ತೆ ಪ್ರವಾಹ ಸ್ಥಿತಿ ಎದುರಾಗಿತ್ತು. ಹೀಗಾಗಿ ಕೂಡಲೇ ಎಚ್ಚೆತ್ತ ಸರ್ಕಾರವೂ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿತ್ತು.

ಬೆಳಗಾವಿಯಲ್ಲಿ ಧಾರಾಕಾರ ಮಳೆಯಾದ್ದರಿಂದ ಶಾಲಾ-ಕಾಲೇಜುಗಳಿಗೆ ಕೆಲವು ದಿನಗಳ ಕಾಲ ರಜೆ ಘೋಷಿಸಲಾಗಿತ್ತು. ಆಗಸ್ಟ್‌ನಲ್ಲಿ ಪ್ರವಾಹ ಉಂಟಾದಾಗ ನೀಡಲಾಗಿದ್ದ ರಜೆ ಸರಿದೂಗಿಸಲು ಭಾನುವಾರವೂ ತರಗತಿಗಳನ್ನು ನಡೆಸಲಾಗುತ್ತಿತ್ತು.

ಇದನ್ನೂ ಓದಿ: ಹೈಕಮಾಂಡ್​​ ಕೃಪೆಯಿದ್ದರೂ ತಪ್ಪದ ಬವಣೆ; ರಾಜ್ಯ ಬಿಜೆಪಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಏಕಾಂಗಿ?

ಸಿಂಧನೂರು- ಹೆಮ್ಮಡಗಾ, ಜಾಂಬೋಟಿ- ಜತ್ತ, ಖಾನಾಪುರ- ಮಿಲಾವಡೆ ರಸ್ತೆ ಸಂಪರ್ಕ ಕಡಿತಗೊಂಡಿವೆ. ಕೃಷ್ಣಾ ನದಿಯಿಂದ ಜಲಾವೃತಗೊಂಡಿರುವ ಚಿಕ್ಕೋಡಿ, ನಿಪ್ಪಾಣಿ ಹಾಗೂ ರಾಯಬಾಗದ 7 ಸೇತುವೆಗಳು ಯಥಾಸ್ಥಿತಿಯಲ್ಲಿವೆ. ಜಮಖಂಡಿ ತಾಲ್ಲೂಕಿನ ಜಂಬಗಿ-ಶೂರ್ಪಾಲಿ ನಡುವಿನ ಸಂಚಾರ ಬಂದ್‌ ಆಗಿವೆ. ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿತ್ತು. ಅಲ್ಲಿನ ರಾಜಾಪುರ ಬ್ಯಾರೇಜ್‌ನಿಂದ 1.26 ಲಕ್ಷ ಕ್ಯುಸೆಕ್ ಹಾಗೂ ದೂಧ್ ಗಂಗಾ ನದಿಯ 24,000 ಕ್ಯುಸೆಕ್ ಸೇರಿ ಕೃಷ್ಣಾ ನದಿಗೆ 1.50 ಲಕ್ಷ ಕ್ಯುಸೆಕ್ ನೀರು ಹರಿದು ಬಂದಿತ್ತು.

ಮಲಪ್ರಭಾ ನದಿ ತೀರದ ಲಕಮಾಪುರ ಗ್ರಾಮದ 120 ಹಾಗೂ ಕೊಣ್ಣೂರಿನ 200 ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ, ಬೂದಿಹಾಳ ಮತ್ತು ಕುರುವಿನಕೊಪ್ಪ ಗ್ರಾಮಸ್ಥರನ್ನು ನವಗ್ರಾಮಕ್ಕೆ ಸ್ಥಳಾಂತರಿಸಲಾಗಿತ್ತು. ವಾಸನ, ಮೆಣಸಗಿ, ಗುಳಗುಂದಿ, ಅಮರಗೋಳ, ಬಸರಕೋಡ, ಹೊಳೆಹಡಗಲಿ, ಗಾಡಗೋಳಿ, ಹೊಳೆಮಣ್ಣೂರು, ಬಿ.ಎಸ್.ಬೇಲೇರಿ ಗ್ರಾಮಗಳ ಜನರಿಗೆ ನವಗ್ರಾಮ ಅಥವಾ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದ್ದರು.ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಹಂಪಿ ಪುರಂದರ ಮಂಟಪ ಸಂಪೂರ್ಣ ಮುಳುಗಡೆಯಾಗಿತ್ತು. ಚಕ್ರತೀರ್ಥ, ರಾಮ ಲಕ್ಷ್ಮಣ ದೇವಸ್ಥಾನಕ್ಕೆ ಹೋಗುವ ಮಾರ್ಗ ಜಲಾವೃತವಾಗಿತ್ತು. ವಿಜಯನಗರದ ಕಾಲು ಸೇತುವೆ ಬಹುತೇಕ ಮುಳುಗಡೆಯಾಗಿತ್ತು. ಹಂಪಿ-ವಿರೂಪಾಪುರ ಗಡ್ಡಿ ನಡುವೆ ಸಂಪರ್ಕ ಕಡಿತಗೊಂಡಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ
----------
First published: September 10, 2019, 9:30 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading