ಇಂದು ದೆಹಲಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ; ಡೊನಾಲ್ಡ್ ಟ್ರಂಪ್ ಜೊತೆ ಔತಣ ಕೂಟದಲ್ಲಿ ಭಾಗಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 11.30ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಾಹ್ನ ದೆಹಲಿಯ ಕನ್ನಡ ಭವನದಲ್ಲಿ ಉಳಿಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಭವನದಲ್ಲಿ ಡೊನಾಲ್ಡ್ ಟ್ರಂಪ್ ಜೊತೆಗಿನ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು (ಫೆಬ್ರವರಿ 24); ಮಂಗಳವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಡೊನಾಲ್ಡ್ ಟ್ರಂಪ್ ಜೊತೆಗೆ ದೇಶದ ನಾಯಕರ ಔತಣ ಕೂಟ ಏರ್ಪಡಿಸಲಾಗಿದ್ದು, ಈ ಕೂಟದಲ್ಲಿ ಭಾಗಿಯಾಗುವಂತೆ ರಾಷ್ಟ್ರಪತಿ ಭವನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ವೈ ಇಂದು ದೆಹಲಿಗೆ ಹೊರಡಲಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 11.30ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಾಹ್ನ ದೆಹಲಿಯ ಕನ್ನಡ ಭವನದಲ್ಲಿ ಉಳಿಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಭವನದಲ್ಲಿ ಡೊನಾಲ್ಡ್ ಟ್ರಂಪ್ ಜೊತೆಗಿನ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಮುಖ್ಯಮಂತ್ರಿ ಕಚೇರಿ ಹೊರಡಿಸಿರುವ ನಾಳಿನ ಸಿಎಂ ವೇಳಾಪಟ್ಟಿ.
ರಾಷ್ಟ್ರಪತಿ ಭವನದಲ್ಲಿ ಸಂಜೆ 8 ಗಂಟೆಗೆ ಔತಣ ಕೂಟ ಆರಂಭವಾಗಲಿದೆ. ಅಲ್ಲದೆ ನಾಳೆ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ಫೆ.26 ರಂದು ಬೆಂಗಳೂರಿಗೆ ಆಗಮಿಸಿದ್ದಾರೆ.