ಡಿ.ಜೆ ಹಳ್ಳಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಸಂಬಂಧ ಸಿಎಂ ಸಭೆ: ಮಹತ್ವದ ನಿರ್ಧಾರಗಳು ಕೈಗೊಂಡ ಯಡಿಯೂರಪ್ಪ

ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪನವರ ನೇತೃತ್ವದಲ್ಲಿ ಹಿರಿಯ ಪೊಲೀಸ್​ ಅಧಿಕಾರಿಳೊಂದಿಗೆ ಸಭೆಯೂ ನಡೆಯುತ್ತಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

 • Share this:
  ಬೆಂಗಳೂರು(ಆ.17): ಇತ್ತೀಚೆಗೆ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿಯಲ್ಲಿ ಕಿಡಿಗೇಡಿಗಳು ಗಲಾಟೆ ನೆಪದಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದ್ದರು. ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಬೇಕೆಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಈ ಸಂಬಂಧ ಈಗ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪನವರ ನೇತೃತ್ವದಲ್ಲಿ ಹಿರಿಯ ಪೊಲೀಸ್​ ಅಧಿಕಾರಿಳ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ತೆಗೆದುಕೊಳ್ಳಲಾಗದ ನಿರ್ಧಾರಗಳ ಬಗ್ಗೆ ಸಿಎಂ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

  ಸರ್ಕಾರ ದೇಶದ ಉಚ್ಛ ನ್ಯಾಯಾಲಯದ ಆದೇಶದಂತೆ ಕ್ಲೇಮ್ ಕಮಿಷನರ್ ನೇಮಿಸಲು ಕೋರುವ ಬಗ್ಗೆ ತೀರ್ಮಾನಿಸಲಾಗಿದೆ. ಇಂದಿನ ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ವಿವರಿಸಿದರು ಎಂದು ಸಿಎಂ ಕಚೇರಿ ಪತ್ರಿಕಾ ಹೇಳಿಯಲ್ಲಿ ಉಲ್ಲೇಖಿಸಲಾಗಿದೆ.

  ಅಲ್ಲದೇ, ಈ ಪ್ರಕರಣಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA)ಯನ್ನು ಸಹ ಅಳವಡಿಸಿರುವುದರ ಬಗ್ಗೆ ತಿಳಿಸಲಾಯಿತು. ಈ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ ಎಂದು ತಿಳಿಸಲಾಗಿದೆ.

  ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು. ಈ ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯ ಕಂಡವರನ್ನು ಗುಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಿರುವುದಾಗಿ ಸಿಎಂ ಕಚೇರಿ ಪತ್ರಿಕಾ ಹೇಳಿಕೆ ಹೇಳಿದೆ.

  ಇದನ್ನೂ ಓದಿ: ಕೃಷ್ಣಾ ನದಿಯಲ್ಲಿ ಮಹಾಪೂರ – ವಿಜಯಪುರದ ಹಲವು ಗ್ರಾಮಗಳಿಗೆ ಮುಳುಗಡೆ ಭೀತಿ; ಪರಿಹಾರಕ್ಕೆ ಅನ್ನದಾತರ ಆಗ್ರಹ
  Published by:Ganesh Nachikethu
  First published: