news18-kannada Updated:January 27, 2021, 11:08 PM IST
ಸುಪ್ರೀಂಕೋರ್ಟ್
ನವದೆಹಲಿ; 2010-11ರಲ್ಲಿ ನಡೆದಿದ್ದ ಡಿನೋಟಿಫೈ ಪ್ರಕರಣ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಲೋಕಾಯುಕ್ತದಲ್ಲಿ ವಿರುದ್ಧ ದೂರು ದಾಖಲಾಗಿತ್ತು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ತನಿಖೆಗೆ ವಹಿಸಿ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ, ನ್ಯಾಯಮೂರ್ತಿ ಎಎಸ್ ಬೋಪಣ್ಣ, ನ್ಯಾಯಮೂರ್ತಿ ವಿ. ರಾಮಸುಬ್ರಹ್ಮಣ್ಯಂ ಅವರ ನ್ಯಾಯಪೀಠ ಬಿಎಸ್ವೈ ಹಾಗೂ ನಿರಾಣಿ ಬಂಧನಕ್ಕೆ ತಡೆ ನೀಡುವ ಮೂಲಕ ತಾತ್ಕಾಲಿಕ ರಿಲೀಫ್ ನೀಡಿದೆ.
ಯಡಿಯೂರಪ್ಪ ಹಾಗೂ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ ಜನವರಿ 5ರಂದು ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಹಾಗೂ ನಿರಾಣಿ ಸುಪ್ರಿಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗ; ಮುಂದಿನ ವಾರ ವಿಚಾರಣೆ
ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿದ ಪ್ರಕರಣ ಇದಾಗಿದೆ. 2010-11ರಲ್ಲಿ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಭೂಮಿ ವಾಪಸ್ ಪಡೆದ ಬಗ್ಗೆ ಉದ್ಯಮಿ ಎ.ಆಲಂ ಪಾಷಾ ಅವರು ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ತಮ್ಮ ವಿರುದ್ಧದ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಜ. 5ರಂದು ಹೈಕೋರ್ಟ್ ವಜಾಗೊಳಿಸಿತ್ತು. ಅರ್ಜಿ ವಜಾ ಜೊತೆಗೆ ವಿಚಾರಣೆಗೆ ಆದೇಶ ನೀಡಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದರು. ಇಂದು ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ನ್ಯಾಯಪೀಠ ವಾದಿ-ಪ್ರತಿವಾದಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚನೆ ನೀಡುವ ಮೂಲಕ ಸಿಎಂ ಬಿಎಸ್ವೈ ಹಾಗೂ ನಿರಾಣಿಗೆ ತಾತ್ಕಾಲಿಗೆ ರಿಲೀಫ್ ನೀಡಿದೆ.
Published by:
HR Ramesh
First published:
January 27, 2021, 5:38 PM IST