news18-kannada Updated:October 24, 2020, 12:44 PM IST
ಮಳೆಯಿಂದ ಜಲಾವೃತವಾದ ಬೆಂಗಳೂರು
ಬೆಂಗಳೂರು(ಅ.24): ಇಂದು ಮಧ್ಯಾಹ್ನ ಸಿಎಂ ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಬಗ್ಗೆ, ಸಂತ್ರಸ್ತರಿಗೆ ನೆರವು ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸೂಕ್ತ ಪರಿಹಾರ ಘೋಷಣೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡವರಿಗೆ, ಮನೆ ಕಳೆದುಕೊಂಡವರಿಗೆ ಪರಿಹಾರ ಹಾಗೂ ಆಹಾರ ಪದಾರ್ಥಗಳ ವಿತರಣೆ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸಭೆ ಬಳಿಕ, ಸಿಎಂ ಬಿಎಸ್ ಯಡಿಯೂರಪ್ಪ ಮಳೆಯಿಂದ ಹಾನಿಗೊಳಗಾದ ಪ್ರತೀ ಕುಟುಂಬಕ್ಕೆ ತಲಾ 25 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಭಾಗಿಯಾಗಿದ್ದರು. ಮಳೆಯಿಂದ ಹಾನಿಗೊಳಗಾದವರಿಗೆ ಸ್ಥಳದಲ್ಲೇ 25 ಸಾವಿರ ರೂ.ಚೆಕ್ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯ ಹಿನ್ನಲೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಬಿಎಂಪಿ ಆಯುಕ್ತರಾದ ಮಂಜುನಾಥ ಪ್ರಸಾದ್ ಅವರಿಗೆ ಕರೆ ಮಾಡಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ಮಾಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ. ಇಂದು ಮತ್ತು ನಾಳೆ ಸಹ ಬಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಕಟ್ಟೆಚ್ಚರವಾಗಿ ಇರುವಂತೆ ಸಿಎಂ ಬಿಎಸ್ವೈ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
Bangalore Rain: ಮಳೆ ಹಾನಿ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ; ರಾಜಕಾಲುವೆ ಒತ್ತುವರಿ ಮಾಡಿದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಬೆಂಗಳೂರಲ್ಲಿ ಮಳೆಯಿಂದ ಅವಾಂತರ ಹಿನ್ನಲೆ, ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್ವೈ ಭೇಟಿ ನೀಡಲು ಮುಂದಾಗಿದ್ದಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಲು ಸಿಟಿ ರೌಂಟ್ ನಡೆಸಲು ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಆಗಿರುವ ಮಳೆ ಹಾನಿ ಬಗ್ಗೆ ಸಿಎಂ ಬಿಎಸ್ವೈ ಸಚಿವರಿಂದ ಮಾಹಿತಿ ಪಡೆದಿದ್ದಾರೆ.
ಎಲ್ಲೆಲ್ಲಿ ಮಳೆ ಸುರಿದಿದೆ, ಅಲ್ಲಿ ಮಳೆಯಿಂದ ಯಾವ ರೀತಿ ಅವಾಂತರ ಸೃಷ್ಟಿ ಯಾಗಿದೆ, ಮಳೆಯಿಂದ ಹಾನಿಯಾಗಿರುವ ಪ್ರಮಾಣ, ನಿರಾಶ್ರಿತರ ಪರಿಸ್ಥಿತಿ, ನಿರಾಶ್ರಿತರಿಗೆ ಒದಗಿಸುವ ಸೌಲಭ್ಯ ಹಾಗೂ ಮುಂದೆ ಏನು ಕ್ರಮ ಮಾಡಬೇಕು ಎಂಬುದರ ಬಗ್ಗೆ ಸಿಎಂ ಅಧಿಕಾರಿಗಳು ಮತ್ತು ಸಚಿವರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ.
Published by:
Latha CG
First published:
October 24, 2020, 12:44 PM IST