‘ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ: ಸೋತವರಿಗಿಲ್ಲ ಮಂತ್ರಿಗಿರಿ‘; ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಇನ್ನು, ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೀಗ ಸಿಎಂ ಬಿ.ಎಸ್​​ ಯಡಿಯೂರಪ್ಪ ನೀಡಿರುವ ಹೇಳಿಯೂ ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್ ಹಾಗೂ ಎಚ್‌. ವಿಶ್ವನಾಥ್ ಮಂತ್ರಿಯಾಗಬೇಕೆಂಬ ಆಸೆಗೆ ತಣ್ಣೀರು ಎರಚಿದಂತಾಗಿದೆ.

news18-kannada
Updated:January 24, 2020, 4:52 PM IST
‘ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ: ಸೋತವರಿಗಿಲ್ಲ ಮಂತ್ರಿಗಿರಿ‘; ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಸಿಎಂ ಬಿ.ಎಸ್​. ಯಡಿಯೂರಪ್ಪ
  • Share this:
ಬೆಂಗಳೂರು(ಜ.24): ಮೂರು ದಿನದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಇಂದು ದಾವೋಸ್​​ನಿಂದ ಬೆಂಗಳೂರಿಗೆ ಬಂದಿಳಿದ ಕೂಡಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿ.ಎಸ್​​ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್​​ ಶಾರೊಂದಿಗೆ ಚರ್ಚಿಸಲಾಗುವುದು. ಬಳಿಕ ಮೂರೇ ದಿನಗಳಲ್ಲಿ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಭೇಟಿ ನೀಡಲಿದ್ದಾರೆ. ಅವರೊಂದಿಗೆ ಚರ್ಚಿಸಿದ ಬಳಿಕವೇ ಸಚಿವ ಸಂಪುಟ ವಿಸ್ತರಣೆ ಅಂತಿಮ ಪಟ್ಟಿ ಸಿದ್ದಪಡಿಸಲಾಗುವುದು. ಕರ್ನಾಟಕ ವಿಧಾನಸಭೆ ಉಪಚುನಾವಣೆಯಲ್ಲಿ ಗೆದ್ದವರಿಗೆ ಮಾತ್ರ ಮಂತ್ರಿಸ್ಥಾನ ನೀಡಲಾಗುವುದು. ಆದರೆ, ಸೋತವರಿಗೆ ಸಚಿವ ಸ್ಥಾನ ನೀಡುವ ಮಾತೇ ಇಲ್ಲ ಎಂದು ಸಿಎಂ ಬಿ.ಎಸ್​​ ಯಡಿಯೂರಪ್ಪ ಖಡಕ್​​​ ಆಗಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇದೆ. ಈಗಾಗಲೇ ಬಿಜೆಪಿ ನೂತನ ಶಾಸಕರು ಬಿ.ಎಸ್​​ ಯಡಿಯೂರಪ್ಪರನ್ನು ಭೇಟಿ ಮಾಡಿ ಈ ಕುರಿತಂತೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಆದಷ್ಟೂ ಬೇಗ ಸಂಪುಟ ವಿಸ್ತರಣೆ ಆಗಬೇಕೆಂದು ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಬಿಜೆಪಿ ನೂತನ ಶಾಸಕರು ಒತ್ತಡ ಹಾಕಿದ್ದಾರೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ವಿಳಂಬಕ್ಕೆ ಬಿಸಿ ಪಾಟೀಲ್ ಬೇಸರ‌; ಲಕ್ಷ್ಮಣ್ ಸವದಿ ರಾಜೀನಾಮೆ ಪಡೆಯಲು ಆರ್.ಶಂಕರ್ ಆಗ್ರಹ

ಸದ್ಯ ನಾಳೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್​​​ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ. ಈ ಮಧ್ಯೆ ನೂತನ ಶಾಸಕರಿಂದ ಒತ್ತಡ ಹೆಚ್ಚುತ್ತಿರುವ ಕಾರಣ ಇನ್ನು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂಬ ಭರವಸೆ ಸಿಎಂ ನೀಡಿದ್ದಾರೆ.

ಇನ್ನು, ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೀಗ ಸಿಎಂ ಬಿ.ಎಸ್​​ ಯಡಿಯೂರಪ್ಪ ನೀಡಿರುವ ಹೇಳಿಯೂ ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್ ಹಾಗೂ ಎಚ್‌. ವಿಶ್ವನಾಥ್ ಮಂತ್ರಿಯಾಗಬೇಕೆಂಬ ಆಸೆಗೆ ತಣ್ಣೀರು ಎರಚಿದಂತಾಗಿದೆ.
First published:January 24, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ