• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • 6 ತಿಂಗಳಿಗೊಮ್ಮೆ ಕಾಂಗ್ರೆಸ್​ನವರು ಅವಿಶ್ವಾಸ ನಿರ್ಣಯ ಮಂಡಿಸಿದರೆ ನನಗೆ ವಿಶ್ವಾಸ ಹೆಚ್ಚುತ್ತದೆ; ಸಿಎಂ ಯಡಿಯೂರಪ್ಪ

6 ತಿಂಗಳಿಗೊಮ್ಮೆ ಕಾಂಗ್ರೆಸ್​ನವರು ಅವಿಶ್ವಾಸ ನಿರ್ಣಯ ಮಂಡಿಸಿದರೆ ನನಗೆ ವಿಶ್ವಾಸ ಹೆಚ್ಚುತ್ತದೆ; ಸಿಎಂ ಯಡಿಯೂರಪ್ಪ

ಬಿಎಸ್​ ಯಡಿಯೂರಪ್ಪ

ಬಿಎಸ್​ ಯಡಿಯೂರಪ್ಪ

ಕಾಂಗ್ರೆಸ್​ಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಂಗ್ರೆಸ್​ನವರು ನನಗೆ ವಿಶ್ವಾಸ ಮೂಡಿಸೋ ಕೆಲಸ ಮಾಡುತ್ತಿದ್ದಾರೆ. ಅವರು ಪ್ರತಿ 6 ತಿಂಗಳಿಗೊಮ್ಮೆ ಹೀಗೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿದ್ದರೆ ನನಗೆ ಸರ್ಕಾರದ ಮೇಲೆ ವಿಶ್ವಾಸ ಬರುತ್ತದೆ ಎಂದಿದ್ದಾರೆ. 

  • Share this:

ಬೆಂಗಳೂರು (ಸೆ. 25): ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ನಿನ್ನೆ ಅವಿಶ್ವಾಸ ನಿರ್ಣಯ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ನವರು ಹೀಗೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ.  ಹೀಗೆ ಮಾಡುವುದರಿಂದ ನನಗೆ ಆರು ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇದಕ್ಕೆ ಕಾಂಗ್ರೆಸ್​ನ 23 ಶಾಸಕರು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.


ಈ ಬಗ್ಗೆ ಕಾಂಗ್ರೆಸ್​ಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಂಗ್ರೆಸ್​ನವರು ನನಗೆ ವಿಶ್ವಾಸ ಮೂಡಿಸೋ ಕೆಲಸ ಮಾಡುತ್ತಿದ್ದಾರೆ. ಅವರು ಪ್ರತಿ 6 ತಿಂಗಳಿಗೊಮ್ಮೆ ಹೀಗೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿದ್ದರೆ ನನಗೆ ಸರ್ಕಾರದ ಮೇಲೆ ವಿಶ್ವಾಸ ಬರುತ್ತದೆ ಎಂದಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ; ನಟ ಚೇತನ್ ಸೇರಿ 300 ಪ್ರತಿಭಟನಾಕಾರರ ಬಂಧನ


ಇದೇ ವೇಳೆ ರೈತರ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇವತ್ತು ರೈತರನ್ನು ಕರೆದು ಅವರ ಜೊತೆ ಚರ್ಚೆ ಮಾಡುತ್ತೇನೆ. ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆ ಆಗುವುದಿಲ್ಲ. ನೀರಾವರಿ ಜಮೀನು ಖರೀದಿ ಮಾಡಿದವರು ಅದನ್ನ ನೀರಾವರಿಗೆ ಬಳಸಬೇಕು ಎಂಬ ಷರತ್ತು ಹಾಕಿದ್ದೇವೆ. ಕೈಗಾರಿಕೆಗಳಿಗೋಸ್ಕರ ನಮ್ಮ ರಾಜ್ಯದಲ್ಲಿ ಬಳಸಿರೋದು ಕೇವಲ ಶೇ.2 ರಷ್ಟು ಜಮೀನು ಮಾತ್ರ ಎಂದು ತಿಳಿಸಿದರು.


ಮಂತ್ರಿ ಮಂಡಲದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕ  ಸಿದ್ದರಾಮಯ್ಯ ಅವಿಶ್ವಾಸ ಮಂಡನೆಗೆ ನೋಟೀಸ್ ಕೊಟ್ಟಿದ್ದರು. ಬಳಿಕ ನಿನ್ನೆ ಸಂಜೆ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಅವಿಶ್ವಾಸ ನಿರ್ಣಯ ಮಂಡನೆ ಹಿನ್ನೆಲೆಯಲ್ಲಿ ಯಾವುದೇ ಬಿಲ್ ಪಾಸ್ ಮಾಡದಂತೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರು.

Published by:Sushma Chakre
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು