ಜ.18ಕ್ಕೆ ರಾಜ್ಯಕ್ಕೆ ಅಮಿತ್​​ ಶಾ: ಸಂಪುಟ ವಿಸ್ತರಣೆಗೆ ಸಿಗುತ್ತಾ ಹಸಿರು ನಿಶಾನೆ?

ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

news18-kannada
Updated:January 16, 2020, 12:46 PM IST
ಜ.18ಕ್ಕೆ ರಾಜ್ಯಕ್ಕೆ ಅಮಿತ್​​ ಶಾ: ಸಂಪುಟ ವಿಸ್ತರಣೆಗೆ ಸಿಗುತ್ತಾ ಹಸಿರು ನಿಶಾನೆ?
ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
  • Share this:
ಬೆಂಗಳೂರು(ಜ.16): ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವಿಳಂಬವೂ ನೂತನ ಬಿಜೆಪಿ ಶಾಸಕರಲ್ಲಿ ಅಸಮಾಧಾನ ಮೂಡಿಸಿದೆ. ಈಗಾಗಲೇ ಬಿಜೆಪಿ ನೂತನ ಶಾಸಕರು ಬಿ.ಎಸ್​​ ಯಡಿಯೂರಪ್ಪರನ್ನು ಭೇಟಿ ಮಾಡಿ ಅಸಮಾಧಾನ ತೋಡಿಕೊಂಡಿದ್ದಾರೆ. ಫೆಬ್ರವರಿ 17ನೇ ತಾರೀಕಿನಂದು ವಿಧಾನಸಭಾ ಜಂಟಿ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಬೇಕೆಂದು ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಬಿಜೆಪಿ ನೂತನ ಶಾಸಕರು ಒತ್ತಡ ಹಾಕಿದ್ದಾರೆ. ಈ ಮಧ್ಯೆ ಜನವರಿ 18ನೇ ತಾರೀಕು ಕೇಂದ್ರ ಗೃಹ ಸಚಿವ ಅಮಿತ್​​ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಸಿಗುತ್ತಾ? ಇಲ್ಲವೋ ಎಂಬ ಪ್ರಶ್ನೆ ಶುರುವಾಗಿದೆ. ಅಮಿತ್​​ ಶಾ ಅವರು ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಪೌರತ್ವ ತಿದ್ದುಪಡಿ ಕಾಯ್ದೆ ವಿವಾದ ಮತ್ತು ಪಕ್ಷ ಸಂಘಟನೆ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದೇಳಲಾಗುತ್ತಿದೆ.

ಜ.18ಕ್ಕೆ ಅಮಿತ್​​​ ಶಾ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿ ಸಂಜೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ಪೌರತ್ವ ಕಾಯ್ದೆ ಕುರಿತಾದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು.

ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ: ನಳಿನ್​​ ಕುಮಾರ್​​ ಕಟೀಲ್​​ ಔಪಚಾರಿಕ ಆಯ್ಕೆ

ಈಗಾಗಲೇ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ದೆಹಲಿಗೆ ಹೋಗುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್​​ ಶಾರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಹೇಗಿದ್ದರೂ ಜನವರಿ 18ನೇ ತಾರೀಕು ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಬಂದಾಗಲೇ ಭೇಟಿ ಮಾಡಿ ಚರ್ಚಿಸಿ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ಯಡಿಯೂರಪ್ಪ ಜ. 18ರ ಬಳಿಕವೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಕಳೆದ ವರ್ಷ ನಡೆದಿದ್ದ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ಗೊಂಡ 11 ಶಾಸಕರ ಪೈಕಿ ಏಳು ಮಂದಿಗೆ ಮಾತ್ರ ಮಂತ್ರಿ ಸ್ಥಾನ ನೀಡಲು ಬಿಎಸ್​ವೈ ಯೋಜಿಸಿದ್ದರೆನ್ನಲಾಗಿದೆ. ಇದು ತಿಳಿದ ರಮೇಶ್ ಜಾರಕಿಹೊಳಿ ಸತತ ಒತ್ತಡಗಳನ್ನು ಹಾಕಿದ ಪರಿಣಾಮ, ಸಂಪುಟದಲ್ಲಿ ‘ಅರ್ಹ’ರ ಸಂಖ್ಯೆಯನ್ನು 9ಕ್ಕೆ ಏರಿಸಲು ನಿರ್ಧರಿಸಿದ್ದಾರೆ. ಆದರೂ ಕೂಡ ರಮೇಶ್ ಜಾರಕಿಹೊಳಿ ಪಟ್ಟು ಸಡಿಲಿಸಿಲ್ಲ.
First published:January 16, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading