ಬೆಂಗಳೂರು(ಜೂ. 04): ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ ಎಂದು ಘೋಷಿಸಿದ್ದಾರೆ. ಆದರೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುತ್ತೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಸುರೇಶ್ ಕುಮಾರ್ ಹೇಳಿದ್ದಾರೆ. ಆದರೆ ಇದು ತಾತ್ಕಾಲಿಕ ನಿರ್ಧಾರವಾಗಿದೆ. ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ ಕೊರೋನಾ ಪ್ರಕರಣಗಳು ಹೆಚ್ಚಾದರೆ, ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಡಲಾಗುತ್ತದೆ. ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಬಿಎಸ್ವೈ ಸ್ಪಷ್ಟನೆ ನೀಡಿದ್ದಾರೆ.
ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದರು. ಅಂದರೆ ಜುಲೈ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಆದರೆ ಪರೀಕ್ಷೆ ನಡೆಸುವ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಕೊರೋನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಈ ಬಾರಿ 6000 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕಳೆದ ವರ್ಷ ಮೂರು ಸಾವಿರ ಮಾತ್ರ ಇದ್ದವು. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದೆ. ಒಂದು ರೂಮ್ ನಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:Karnataka Board Exams Cancelled: ರಾಜ್ಯದಲ್ಲಿ ದ್ವಿತೀಯ PUC ಪರೀಕ್ಷೆ ರದ್ದು, SSLC ವಿದ್ಯಾರ್ಥಿಗಳಿಗೆ ಎಕ್ಸಾಂ ಇರುತ್ತೆ..!
ಆರೋಗ್ಯ ಇಲಾಖೆಯಿಂದ SOP ಬಿಡುಗಡೆ ಆಗುತ್ತೆ. ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡುತ್ತೇವೆ. ಬಿಇಒಗಳ ಮೂಲಕ ಬಹು ಆಯ್ಕೆ ಪ್ರಶ್ನೆಗಳ ಪರೀಕ್ಷೆ ಮಾಡುತ್ತಿದ್ದಾರೆ. ವಾಟ್ಸಪ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬಗ್ಗೆ ತುಂಬಾ ಚರ್ಚೆ ಆಗ್ತಿದೆ. ಕಳೆದ ವರ್ಷ ಬೇರೆ ಸವಾಲನ್ನು ಎದುರಿಸಿ ಪರೀಕ್ಷೆ ಮಾಡಿದ್ದೇವೆ. ಆದ್ರೆ ಈ ವರ್ಷ ತುಂಬಾ ಗಂಭೀರ ಪರಿಸ್ಥಿತಿ ಇದೆ. ಪರೀಕ್ಷೆ ಮಾಡಿ ಎಂದು ವರ್ಗ, ಮಾಡಬೇಡಿ ಎಂಬುವುದು ಮೊತ್ತೊಂದು ವರ್ಗ ಇದೆ. ತಜ್ಞ ಬಳಿ ಅಭಿಪ್ರಾಯ, ಪೋಷಕರ ಅಭಿಪ್ರಾಯ, ಮಕ್ಕಳ ಅಭಿಪ್ರಾಯ ಕೇಳಿದ್ದೇನೆ. ನಮ್ಮ ಇಲಾಖೆ ಜೊತೆ ಮೂರು ಸುತ್ತಿನ ಸಭೆ ನಡೆಸಿದ್ದೇನೆ. ಯಾವುದೇ ನಿರ್ಧಾರ ತಗೊಂಡ್ರು, ಟೀಕೆ, ಅಸಮಾಧಾನ ಆಗುತ್ತೆ. ಮಕ್ಕಳ ಆರೋಗ್ಯ ಹಿತದೃಷ್ಟಿ, ಮಕ್ಕಳ ಮುಂದಿನ ಭವಿಷ್ಯ ಬಗ್ಗೆ ತುಂಬ ಚಿಂತನೆ ನಡೆಸಿದ್ದೇನೆ ಎಂದು ಸುರೇಶ್ ಕುಮಾರ್ ಹೇಳಿದ್ದರು..
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ