ಶಿವಮೊಗ್ಗ (ಜೂ. 12): ಸಿಎಂ ಬಿಎಸ್ ಯಡಿಯೂರಪ್ಪ ಅವರ ಕನಸಿನ ಕೂಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯನ್ನು ಮುಂದಿನ ವರ್ಷಕ್ಕೆ ಸಿದ್ಧವಾಗುವ ಸಾಧ್ಯತೆ ಇದೆ. ಇಂದು ಇಲ್ಲಿನ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮುಂದಿನ ಜೂನ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಇದೇ ವೇಳೇ ಮಾತನಾಡಿದ ಅವರು 2022ರ ಜೂನ್ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಆಗುವುದರಿಂದ ದೊಡ್ಡ ದೊಡ್ಡ ಕೈಗಾರಿಕೆಗಳು ನಗರಕ್ಕೆ ಬರಲಿದೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶ ದೊರೆಯಲಿದ್ದು, ಅಭಿವೃದ್ಧಿ ಸಾಕಾರವಾಗಲಿದೆ ಎಂದರು
ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು. ಬಳಿಕ ಮಾತನಾಡಿದ ಅವರು, ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು.
ಮುಖ್ಯಮಂತ್ರಿ @BSYBJP ರವರು ಇಂದು ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. (1/2) pic.twitter.com/tSGzJ5p08P
— CM of Karnataka (@CMofKarnataka) June 12, 2021
ಇದನ್ನು ಓದಿ: ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬಿಜೆಪಿ ಕೆಲ ನಾಯಕರಿಂದ ಅರುಣ್ ಸಿಂಗ್ ಮೇಲೆ ಒತ್ತಡ
ಇದೇ ವೇಳೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಕುರಿತು ಮಾತನಾಡಿದ ಅವರು, ಅಲ್ಲೂ ಕೂಡ ಶೀಘ್ರವಾಗಿ ಕಾಮಗಾರಿ ನಡೆಯಲಿದೆ. ಇಲ್ಲಿ ಕಾಮಗಾರಿ ನಡೆಸುತ್ತಿರುವವರೆ ಅಲ್ಲೂ ಆರಂಭಿಸಲು ಆಸಕ್ತಿ ತೋರಿದರೆ ಅವಕಾಶ ನೀಡಲಾಗುವುದು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೊಂದಿಗೆ ವೀಕ್ಷಸಲು ಸದ್ಯದಲ್ಲಿಯೇ ಹಾಸನಕ್ಕೆ ಭೇಟಿ ನೀಡಿ ಶೀಘ್ರದಲ್ಲಿ ಆರಂಭ ಮಾಡುತ್ತೇವೆ. ವಿಮಾನ ನಿಲ್ದಾಣಕ್ಕೆ ಜಮೀನು ಕೊಟ್ಟ ರೈತರು ಆತಂಕ ಪಡುವ ಹಾಗೆ ಇಲ್ಲ. ನಿಮಗೆ ಮನೆ ನಿರ್ಮಾಣಕ್ಕೆ ಜಾಗ ಹಾಗೂ ಇತರೆ ಸವಲತ್ತುಕೊಡುವ ಭರವಸೆಯನ್ನ ಈಡೇರಿಸಲಿದ್ದೇವೆ ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಶಿಕಾರಿಪುರ ಸಮೀಪವಿರುವ ಶಿವ ಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ರಾಘವೇಂದ್ರ ಹಾಗೂ ಮಲೆನಾಡು ಮಠಾಧೀಶರ ಪರಿಷತ್ತಿನ ಸ್ವಾಮೀಜಿಗಳು ಹಾಜರಿದ್ದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ