ಕಾಂಗ್ರೆಸ್​​-ಜೆಡಿಎಸ್​​ಗೆ ಜನ ತಕ್ಕ ಪಾಠ ಕಲಿಸುತ್ತಾರೆ; 15 ಕ್ಷೇತ್ರಗಳಲ್ಲೂ ಬಿಜೆಪಿಯೇ ಗೆಲ್ಲಲಿದೆ; ಸಿಎಂ ಬಿಎಸ್​​ವೈ ವಿಶ್ವಾಸ

ಬಿಜೆಪಿ ಅಭ್ಯರ್ಥಿಗಳ ಪರವಾಗಿ ಎರಡು ದಿನಗಳ ಪ್ರಚಾರ ಮಾಡಿದ್ದೇನೆ. ನಾನೋದ ಮೂರು ಕ್ಷೇತ್ರಗಳಲ್ಲೂ ಉತ್ತಮ ಸ್ಪಂದನೆ ಸಿಕ್ಕಿದೆ. ನಾಳೆ ಮಹಾಲಕ್ಷ್ಮೀ ಲೇಔಟ್​​​ ಮತ್ತು ಯಶವಂತಪುರದಲ್ಲಿ ಪ್ರಚಾರ ಮಾಡಲಿದ್ದೇವೆ ಎಂದು ಸಿಎಂ ತಿಳಿಸಿದರು.

news18-kannada
Updated:November 29, 2019, 7:29 PM IST
ಕಾಂಗ್ರೆಸ್​​-ಜೆಡಿಎಸ್​​ಗೆ ಜನ ತಕ್ಕ ಪಾಠ ಕಲಿಸುತ್ತಾರೆ; 15 ಕ್ಷೇತ್ರಗಳಲ್ಲೂ ಬಿಜೆಪಿಯೇ ಗೆಲ್ಲಲಿದೆ; ಸಿಎಂ ಬಿಎಸ್​​ವೈ ವಿಶ್ವಾಸ
ಸಿಎಂ ಯಡಿಯೂರಪ್ಪ
  • Share this:
ಬೆಂಗಳೂರು(ನ.29): ಕರ್ನಾಟಕ ಉಪಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​ ಮತ್ತು ಜಾತ್ಯತೀತ ಜನತಾ ದಳಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯದ 15 ಕ್ಷೇತ್ರಗಳಲ್ಲೂ ಭಾರತೀಯ ಜನತಾ ಪಕ್ಷವೇ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿರುವ ಡಾಲರ್ಸ್ ಕಾಲೋನಿ ನಿವಾಸದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಬಿ.ಎಸ್​​ ಯಡಿಯೂರಪ್ಪ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಭಾವನಾತ್ಮಕ ವ್ಯಕ್ತಿ. ಹಾಗಾಗಿಯೇ ದೇಹ ತ್ಯಾಗದ ಮಾತುಗಳನ್ನಾಡಿದ್ದಾರೆ ಎಂದರು. ಇದೇ ವೇಳೆ ವಿ. ಸೋಮಣ್ಣರನ್ನು ಬಚ್ಚಾ ಎಂದ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ವಿ. ಸೋಮಣ್ಣ ಉತ್ತರ ರಾಜಕಾರಣಿ. ಇಂತಹವರ ಬಗ್ಗೆ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಹೇಳಿಕೆ ಖಂಡನೀಯ. ಯಾರೇ ಆಗಲಿ ಈ ರೀತಿ ಹೇಳಿಕೆ ನೀಡಬಾರದು. ಕುಮಾರಸ್ವಾಮಿ ಯೋಗ್ಯತೆ ಎಲ್ಲರಿಗೂ ಗೊತ್ತಿದೆ. ಈ ಕುರಿತು ಇನ್ನೂ ಹೆಚ್ಚು ಮಾತಾಡಲು ಇಷ್ಟ ಪಡುವುದಿಲ್ಲ ಎಂದರು.

ಬಿಜೆಪಿ ಅಭ್ಯರ್ಥಿಗಳ ಪರವಾಗಿ ಎರಡು ದಿನಗಳ ಪ್ರಚಾರ ಮಾಡಿದ್ದೇನೆ. ನಾನೋದ ಮೂರು ಕ್ಷೇತ್ರಗಳಲ್ಲೂ ಉತ್ತಮ ಸ್ಪಂದನೆ ಸಿಕ್ಕಿದೆ. ನಾಳೆ ಮಹಾಲಕ್ಷ್ಮೀ ಲೇಔಟ್​​​ ಮತ್ತು ಯಶವಂತಪುರದಲ್ಲಿ ಪ್ರಚಾರ ಮಾಡಲಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ ಬೆನ್ನಲ್ಲೀಗ ಗೋವಾದಲ್ಲೂ ಬಿಜೆಪಿ ಸರ್ಕಾರಕ್ಕೆ ಕಾದಿದೆಯಾ ಕಂಟಕ: ಅನುಮಾನ ಮೂಡಿಸಿದ ಶಿವಸೇನೆ ನಡೆ

ಕರ್ನಾಟಕ ವಿಧಾನಸಭಾ ಉಪಚುನಾವಣೆ ಸಮೀಪಿಸುತ್ತಿದೆ. ಈಗಾಗಲೇ ಕೇಂದ್ರ ಚುನಾವಣೆ ಆಯೋಗವು ದಿನಾಂಕ ನಿಗದಿ ಮಾಡಿದ್ದು, ಮುಂಬರುವ ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದೆ. ಚುನಾವಣಾ ಕಣದಲ್ಲಿರುವ ಕಾಂಗ್ರೆಸ್​​ ಮತ್ತು ಜೆಡಿಎಸ್​​ ಸೇರಿದಂತೆ ಆಡಳಿತರೂಢ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೂರು ಪಕ್ಷಗಳು ಈ ಚುನಾವಣೆ ಗೆಲ್ಲಲು ಭಾರೀ ಸರ್ಕಸ್​​ ನಡೆಸುತ್ತಿವೆ. ಇತ್ತ ಕಾಂಗ್ರೆಸ್​​ ಜೆಡಿಎಸ್​​ ಜೊತೆಗಿನ ಮೈತ್ರಿ ತೊರೆದು ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ. ಅತ್ತ ಜೆಡಿಎಸ್​​ ಪ್ರತ್ಯೇಕವಾಗಿ ಚುನಾವಣೆ ಎದುರಿಸುತ್ತಿದೆ. ಈ ಮಧ್ಯೆ ಹೇಗಾದರೂ ಮಾಡಿ ಉಪಚುನಾವಣೆ ಗೆದ್ದು ರಾಜ್ಯಾಧಿಕಾರ ಉಳಿಸಿಕೊಳ್ಳಬೇಕೆಂದು ಸಿಎಂ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಜಿದ್ದಿಗೆ ಬಿದ್ದಿದೆ.
First published: November 29, 2019, 7:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading