ನವದೆಹಲಿ; ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಳೆದ ಒಂದೂವರೆ ವರ್ಷದಿಂದ ಮುಂದೂಡಲ್ಪಡುತ್ತಲೇ ಇದೆ. ಒಂದೆಡೆ ಸಚಿವಾಕಾಂಕ್ಷಿಗಳ ಸಂಖ್ಯೆ ಏರುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಹೈಕಮಾಂಡ್ ಈವರೆಗೆ ಸಂಪುಟವನ್ನು ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅವಕಾಶ ನೀಡಿಲ್ಲ. ಪರಿಣಾಮ ಬಿಎಸ್ವೈ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ. ಈ ನಡುವೆ ಕಳೆದ ವಾರ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ತಮಗೆ ಖಚಿತವಾಗಿ ಸಚಿವ ಸ್ಥಾನ ನೀಡುವುದಾಗಿ ಬಿಎಸ್ವೈ ಮಾತು ನೀಡಿದ್ದಾರೆ ಎಂದು ತಿಳಿಸಿದ್ದರು. ಪರಿಣಾಮ ಸಂಕ್ರಾಂತಿ ಹಬ್ಬಕ್ಕೂ ಮುನ್ನವೇ ಈ ಬಾರಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಇಂಬು ನೀಡುವಂತೆ ಅಮಿತ್ ಶಾ ಸ್ವತಃ ಇಂದು ಬಿಎಸ್ವೈ ಅವರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ರಾಜ್ಯ ಸಂಪುಟ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ.
ಇದನ್ನು ಓದಿ: Siddaramaiah: ಬಿಜೆಪಿಯ ದರಿದ್ರ ಸರ್ಕಾರದ ಜನ ವಿರೋಧಿ ಕಾಯ್ದೆಗಳ ವಿರುದ್ಧ ಬೀದಿಗಿಳಿದು ಹೋರಾಟ; ಸಿದ್ದರಾಮಯ್ಯ ಕಿಡಿ
ಕೇಂದ್ರ ಸಚಿವ ಅಮಿತ್ ಶಾ ದೆಹಲಿಗೆ ಆಹ್ವಾನಿಸುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮಗ ವಿಜಯೇಂದ್ರ ಜೊತೆಗೂಡಿ ಇಂದು ದೆಹಲಿಗೆ ಹೊರಟಿದ್ದಾರೆ. ಬೆಳಗ್ಗೆಯೇ ಬೆಂಗಳೂರಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:20 ರ ವಿಸ್ತಾರ್ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ