ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿ ಶಾರದಾಂಬೆ ದರ್ಶನ ಪಡೆಯಲಿರುವ ಯಡಿಯೂರಪ್ಪ

ಈ ಬಾರಿಯ ಲೋಕಸಭಾ ಚುನಾವಣೆಗೂ ಮುನ್ನ ಮಾರ್ಚ್​ ತಿಂಗಳಲ್ಲಿ ಬಿ.ಎಸ್. ಯಡಿಯೂರಪ್ಪನವರು ಸಂಸದೆ ಶೋಭಾ ಕರಂದ್ಲಾಜೆ ಜೊತೆಗೆ ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.

Sushma Chakre | news18-kannada
Updated:September 12, 2019, 7:39 AM IST
ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿ ಶಾರದಾಂಬೆ ದರ್ಶನ ಪಡೆಯಲಿರುವ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
  • Share this:
ಚಿಕ್ಕಮಗಳೂರು (ಸೆ. 12): ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ಇಂದು ಶೃಂಗೇರಿ ಶಾರದಾಂಬೆಯ ದರ್ಶನ ಪಡೆಯಲಿದ್ದಾರೆ. 

ಇಂದು ಬೆಳಗ್ಗೆ 9 ಗಂಟೆಗೆ ಹೆಲಿಕಾಪ್ಟರ್​ನಲ್ಲಿ ಶೃಂಗೇರಿಗೆ ಆಗಮಿಸಲಿರುವ ಸಿಎಂ ಯಡಿಯೂರಪ್ಪ ಶಾರದಾಂಬಾ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ, ಕೊಪ್ಪ ತಾಲೂಕಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಶೃಂಗೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಸಿಎಂ ಯಡಿಯೂರಪ್ಪ ತೆರಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಮತ್ತೆ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

ಆರ್ಥಿಕ ಹಿಂಜರಿತದ ನಡುವೆಯೂ ನಮ್ಮ ರಾಜ್ಯ ಸುಸ್ಥಿತಿಯಲ್ಲಿದೆ; ಇಲಾಖಾವಾರು ತೆರಿಗೆ ಸಂಗ್ರಹ ಮಾಹಿತಿ ಹಂಚಿಕೊಂಡ ಸಿಎಂ

ರಾಜ್ಯದ ಬಹುತೇಕ  ರಾಜಕಾರಣಿಗಳು ಶೃಂಗೇರಿ ಶಾರದಾಂಬಾ ದೇವಸ್ಥಾನದ ಭಕ್ತರೆಂಬುದು ಹೊಸ ವಿಷಯವೇನಲ್ಲ. ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಇಲ್ಲಿಗೆ ಆಗಮಿಸಿ ವಿಶೇಷವಾದ ಹೋಮ ನಡೆಸಿದ್ದರು. ಸಿದ್ದರಾಮಯ್ಯ ಕೂಡ ಶಾರದಾಂಬಾ ದೇವಿಯ ದೇವಸ್ಥಾನದ ಭಕ್ತರು. ಅವರೂ ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬಕ್ಕೂ ಶೃಂಗೇರಿಗೂ ಬಹಳ ಹತ್ತಿರದ ಸಂಬಂಧವಿದೆ. ಗೌಡರ ಕುಟುಂಬದವರು ವರ್ಷಕ್ಕೆ ನಾಲ್ಕೈದು ಬಾರಿಯಾದರೂ ಶೃಂಗೇರಿಗೆ ಭೇಟಿ ನೀಡುತ್ತಿರುತ್ತಾರೆ.

ಮಕ್ಕಳನ್ನು ಕಾಪಾಡಲು ಹೋಗಿ ನೀರಿನಲ್ಲಿ ಕೊಚ್ಚಿಹೋದ ತಂದೆ; ಮಧ್ಯಪ್ರದೇಶದಲ್ಲೊಂದು ದಾರುಣ ಘಟನೆ

ಈ ಬಾರಿಯ ಲೋಕಸಭಾ ಚುನಾವಣೆಗೂ ಮುನ್ನ ಮಾರ್ಚ್​ ತಿಂಗಳಲ್ಲಿ ಬಿ.ಎಸ್. ಯಡಿಯೂರಪ್ಪನವರು ಸಂಸದೆ ಶೋಭಾ ಕರಂದ್ಲಾಜೆ ಜೊತೆಗೆ ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇದೀಗ ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ಬಿಎಸ್​ ಯಡಿಯೂರಪ್ಪ ಶೃಂಗೇರಿಗೆ ಭೇಟಿ ನೀಡಲಿದ್ದಾರೆ.

(ವರದಿ: ವೀರೇಶ್ ಜಿ. ಹೊಸೂರ್)
First published:September 12, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ