ಬೆಂಗಳೂರು: ದೇಶಾದ್ಯಂತ ಮಹಾಮಾರಿ ಕೊರೋನಾ ಸೋಂಕಿಗೆ ಲಸಿಕೆ ಅಭಿಯಾನ ನಡೆಯುತ್ತಿದೆ. ಜನಸಾಮಾನ್ಯರಲ್ಲಿ ಲಸಿಕೆ ಬಗ್ಗೆ ಅರಿವು ಮತ್ತು ಭಯ ಹೋಗಲಾಡಿಸಲುಮ ಜನಪ್ರತಿನಿಧಿಗಳು ಕೊರೋನಾ ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಹಲವು ರಾಜಕಾರಣಿಗಳು ಲಸಿಕೆ ಪಡೆದುಕೊಂಡಿದ್ದಾರೆ. ಅದರಂತೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಸ್ಎಸ್ವೈ ಆಸ್ಪತ್ರೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಹ ಕೊರೋನಾ ಲಸಿಕೆ ಪಡೆದರು.
ಲಸಿಕೆ ಪಡೆದುಕೊಳ್ಳಲು ಆಸ್ಪತ್ರೆಗೆ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಇಂದು ನಾನು ಕೊರೋನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದೇನೆ. ಪ್ರಧಾನಿಗಳು ಅಲ್ಲದೇ ಅವರ ತಾಯಿ ಕೂಡ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಹೀಗಾಗಿ ನಾನು ರಾಜ್ಯದ ಜನತೆಗೆ ಕರೆ ಕೊಡುತ್ತೇನೆ. ಕೊರೋನಾ ಲಸಿಕೆ ಪಡೆಯುವುದರಿಂದ ಯಾವುದೇ ವ್ಯತಿರಿಕ್ತ ಸಮಸ್ಯೆ ಆಗುವುದಿಲ್ಲ ಎಂದು ಜನರಿಗೆ ಕರೆ ನೀಡಿದರು.
ಕೊರೋನಾ ಲಸಿಕೆ ಪಡೆದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು 30 ನಿಮಿಷಗಳ ಕಾಲ ವೈದ್ಯರು ಅಬ್ಸರ್ವೇಷನ್ ನಲ್ಲಿ ಇರಿಸಿದರು. ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಅಗೋದಿಲ್ಲ. ನಾನು ದೇಸಿ ಲಸಿಕೆ ಕೋ ವ್ಯಾಸಿಕೊಂ
ಕ್ಸಿನೇಷನ್ ಹಾಕಿಸಿಕೊಂಡಿದ್ದೇನೆ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬಹುದು. ಯಾವುದೇ ಸೈಡ್ ಎಫೆಕ್ಟ್ ಇರೋದಿಲ್ಲ. ಲಸಿಕೆ ಹಾಕಿಸಿಕೊಂಡ ಬಳಿಕ ಒಂದು ಇಪ್ಪತ್ತು ನಿಮಿಷ ಕೂರಲು ವೈದ್ಯರು ಹೇಳ್ತಾರೆ ಅಷ್ಟೇ ಎಂದು ಹೇಳಿದರು.
ಸಿಎಂ ಜೊತೆಗೆ ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರು ಸಹ ಕೊರೋನಾ ಲಸಿಕೆ ಪಡೆದರು. ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಜಾಸ್ತಿಯಾಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಕೊರೋನಾ ತಡೆಗೆ ಶೀಘ್ರವೇ ಸಿಎಂ ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಭೆ ನಡೆಸಿ, ಅಗತ್ಯ ಕ್ರಮ ವಹಿಸುವ ಬಗ್ಗೆ ಸೂಚನೆ ಕೊಡಲಿದ್ದಾರೆ. ಕೊರೋನಾ ತಡೆಗೆ ರಾಜ್ಯದಲ್ಲಿ ಬಿಗಿ ಕ್ರಮ ಅವಶ್ಯವಾಗಿದೆ. ಹೀಗಾಗಿ ಸಿಎಂ ವೀಡಿಯೋ ಕಾನ್ಪೆರೆನ್ಸ್ ಮೂಲಕ ಡಿಸಿಗಳಿಗೆ ಅಗತ್ಯ ಸೂಚನೆ ಕೊಡಲಿದ್ದಾರೆ ನೈಟ್ ಕರ್ಪ್ಯೂ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದು ಹೇಳಿದರು.
ಇದನ್ನು ಓದಿ: Explainer: ಕೋವಿಡ್- 19ಗಿಂತ ಯುಕೆ ರೂಪಾಂತರ ವೈರಸ್ ಎರಡು ಪಟ್ಟು ಹೆಚ್ಚು ಮಾರಕ: ನೂತನ ಅಧ್ಯಯನದಲ್ಲಿ ಬಯಲು
ಸಿಎಂ ಬಿಎಸ್ ಯಡಿಯೂರಪ್ಪ ಅವರು ದೇಶೀಯ ಲಸಿಕೆಯನ್ನು ಪಡೆದಿದ್ದಾರೆ. ವೈದ್ಯರ ಸಲಹೆಯಂತೆ ಅರ್ಧ ಗಂಟೆ ವಿಶ್ರಾಂತಿ ಪಡೆದಿದ್ದಾರೆ. ಬಿಪಿ, ಶುಗರ್ ಯಾವುದೂ ಹೆಚ್ಚಿಲ್ಲ. ಯಾವುದೇ ಅಡ್ಡ ಪರಿಣಾಮ ಇಲ್ಲ. ವ್ಯಾಕ್ಸಿನ್ ಪಡೆದು ರಾಜ್ಯದ ಜನತೆಗೂ ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ರಾಜ್ಯದಲ್ಲಿ 60ವರ್ಷ ಮೇಲ್ಪಟ್ಟವರು 50 ಲಕ್ಷ ಜನ ಇದ್ದಾರೆ. 45 ವರ್ಷ ಮೇಲ್ಪಟ್ಟವರು ಅನಾರೋಗ್ಯಕ್ಕೆ ಒಳಗಾಗಿದ್ದರೆ ಅವರೂ ಲಸಿಕೆ ಪಡೆಯಿರಿ ಎಂದು ಸಲಹೆ ನೀಡಿದರು.
ಪ್ರತಿದಿನ 300 ರಿಂದ 400 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದೆ. ಸದ್ಯ ಸೋಂಕು ಬಹಳ ನಿಯಂತ್ರಣದಲ್ಲಿದೆ. ನೆರೆಯ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಕಡಿಮೆ ಇದೆ. ಕಡ್ಡಾಯವಾಗಿ ಮಾಸ್ಕ್ ಬಳಸಿ, ಅಂತರ ಕಾಪಾಡಿ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಸಲಹೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ