ಬೆಂಗಳೂರು (ಫೆ. 18): ರಾಜ್ಯ ಬಜೆಟ್ ಅಧಿವೇಶವನ್ನು ಮಾರ್ಚ್ 4ರಿಂದ ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಮಾರ್ಚ್ 8ರಂದು ಮುಖ್ಯಮಂತ್ರಿಗಳು 2021-22ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವ ಬಸವರಾಜ್ ಬೊಮ್ಮಾಯಿ, ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುವುದು. ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಹಣಕಾಸ ಸಚಿವರೂ ಆಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಬಜೆಟ್ಗೆ ಸಿದ್ಧತೆ ನಡೆಸಿದ್ದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಸಂಪುಟ ಸಭೆಯಲ್ಲಿ ಕೊವೀಡ್ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆ ಗಳಿಗೆ ಸುವರ್ಣ ಕರ್ನಾಟಕ ಆರೋಗ್ಯ ಯೋಜನೆಯಡಿ 700 ಕೋಟಿ ಹಣ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವ ಕುರಿತು ಅವರು ತಿಳಿಸಿದರು.
ಸಂಪುಟ ಸಭೆಯಲ್ಲಿ ವಿವಿಧ ಸಮುದಾಯಗಳು ಹೊಂದಿರುವ ಮೀಸಲಾತಿ ಬಗ್ಗೆ ಮುಖ್ಯಮಂತ್ರಿಗಳು ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಬಗ್ಗೆ ಹಲವು ಸಲಹೆ ಗಳನ್ನು ಕೇಳಿದ್ದರು. ಈ ಸಂಬಂಧಿಸಿದಂತೆ ಸಚಿವರುಗಳು ಸಿಎಂಗೆ ಸಲಹೆ ಕೊಟ್ಟಿದ್ದಾರೆ. ಆ ಸಲಹೆಗಳ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಚರ್ಚೆ ನಡೆಸಲಾಗುವುದು. ಆ ನಂತರ ಸಂವಿಧಾನದ ಚೌಕಟ್ಟಿನೊಳಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.
ಬಜೆಟ್ ಕುರಿತು ಕಳೆದ ವಾರ ಪ್ರತಿಕ್ರಿಯಿಸಿದ್ದ ಸಿಎಂ ಬಿಎಸ್ ಯಡಿಯೂರಪ್ಪ, ಕಳೆದೊಂದು ವರ್ಷದಿಂದ ಕೊರೋನಾ ಸೋಂಕಿನಿಂದ ರಾಜ್ಯದ ಆದಾಯಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಕಳೆದ ಮೂರು ತಿಂಗಳಿನಿಂದ ಆರ್ಥಿಕತೆ ಚೇತರಿಕೆ ಹಾದಿ ಕಂಡಿದ್ದು, ಉತ್ತಮ ಬಜೆಟ್ ಮಂಡಿಸುವ ಸಿದ್ಧತೆ ನಡೆಸಲಾಗಿದೆ ಎಂದಿದ್ದರು.
Published by:Seema R
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ