ತವರು ಕೇತ್ರದ ಅಭಿವೃದ್ಧಿ ಪರಿಶೀಲನೆ ‌ನಡೆಸಿ, ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ

ಜಿಲ್ಲೆಯಲ್ಲಿ ಎಲ್ಲಾ ಹಳ್ಳಿಗಳಲ್ಲೂ ಸ್ಮಶಾನ ಜಾಗ ಗುರುತಿಸಬೇಕು.  ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಫಲಾನುಭವಿ ಮನೆಯವರು ನೀಡಬೇಕಾಗಿರುವ ಕಾಮಗಾರಿಯ  ಶೇ.10 ರಷ್ಟು ಹಣವನ್ನು ಸರಕಾರದಿಂದ ನೇರವಾಗಿ ಪಾವತಿಸುವ ಕುರಿತು ಈ ಬಾರಿಯ ಬಜೆಟ್ ನಲ್ಲಿ ಕ್ರಮ ಕೈಗೊಳ್ಳಲಾಗುವುದು

ಸಭೆಯಲ್ಲಿ ಯಡಿಯೂರಪ್ಪ

ಸಭೆಯಲ್ಲಿ ಯಡಿಯೂರಪ್ಪ

  • Share this:
ಶಿವಮೊಗ್ಗ (ಫೆ. 14): ತವರು ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು,  ಕೇತ್ರದ ಅಭಿವೃದ್ಧಿ ಬಗ್ಗೆ ಪರಿಶೀಲನೆ ‌ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಶಿಕಾರಿಪುರ ಕ್ಷೇತ್ರದಲ್ಲಿ ಮಾರ್ಚ್ ಒಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು‌ ಎಂದು ಸೂಚನೆ ನೀಡಿದ್ದಾರೆ.  ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ,  ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು ಎಂದು  ಶಿಕಾರಿಪುರ ತಾಲೂಕು ಕೆಡಿಪಿ ಸಭೆಯಲ್ಲಿ ತಿಳಿಸಿದರು. ಈ ವೇಳೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು ಎಂದರು. ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ. ಒಂದೆರಡು ಎಕರೆ ಜಮೀನಿನಲ್ಲಿ ಮಾವು, ಬಾಳೆ, ಶುಂಠಿ, ತೆಂಗು ಮೊದಲಾದ ಮಿಶ್ರ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಲಾಭ ಪಡೆಯಲು ಸಾಧ್ಯವಿದೆ ಎಂದು ತಿಳಿಸಿದರು.
ಹನಿ ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಹನಿ ನೀರಾವರಿ ಸೌಲಭ್ಯಕ್ಕಾಗಿ ಬಾಕಿ ಇರುವ ಅರ್ಜಿಗಳ ಮಾಹಿತಿ ಒದಗಿಸಬೇಕು.  ಈಗಾಗಲೇ ಹನಿ ನೀರಾವರಿ ಅಳವಡಿಸಿರುವ ರೈತರಿಗೆ ಸಬ್ಸಿಡಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲೂಕಿನಲ್ಲಿ ಹೆಚ್ಚುವರಿಯಾಗಿಎರಡು ಪಶು ವೈದ್ಯ ಆಸ್ಪತ್ರೆ ಆರಂಭಿಸಲು ಅನುಮೋದನೆ ನೀಡಲಾಗುವುದು.  ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ಆದ್ದರಿಂದ ಕೆರೆ ಹೂಳು ತೆಗೆಯುವ ಕಾಮಗಾರಿಗಳನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳಬಾರದು. ಹೂಳೆತ್ತುವ ಕಾಮಗಾರಿಗಳಿಗೆ ಈಗಾಗಲೆ ಟೆಂಡರ್ ಆಗಿದ್ದರೂ, ನೀರು ಖಾಲಿಯಾದರೆ ಮಾತ್ರ ಕಾಮಗಾರಿ ಆರಂಭಿಸಿ. ಅನುದಾನ ದುರುಪಯೋಗಕ್ಕೆ ಯಾವುದೇ ಇಲಾಖೆಗಳು ಆಸ್ಪದ ನೀಡಬಾರದು ಎಂದು ಹೇಳಿದರು.

ಇದನ್ನು ಓದಿ: ಮದುವೆಯಲ್ಲಿ ಅಪ್ಸರೆಯಂತೆ ಕಂಗೊಳಿಸಿದ ಐಶ್ವರ್ಯಾ ಶಿವಕುಮಾರ್​​

ಜಿಲ್ಲೆಯಲ್ಲಿ ಎಲ್ಲಾ ಹಳ್ಳಿಗಳಲ್ಲೂ ಸ್ಮಶಾನ ಜಾಗ ಗುರುತಿಸಬೇಕು.  ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಫಲಾನುಭವಿ ಮನೆಯವರು ನೀಡಬೇಕಾಗಿರುವ ಕಾಮಗಾರಿಯ  ಶೇ.10 ರಷ್ಟು ಹಣವನ್ನು ಸರಕಾರದಿಂದ ನೇರವಾಗಿ ಪಾವತಿಸುವ ಕುರಿತು ಈ ಬಾರಿಯ ಬಜೆಟ್ ನಲ್ಲಿ ಕ್ರಮ ಕೈಗೊಳ್ಳಲಾಗುವುದು.

ಜಲಜೀವನ್ ಮಿಷನ್ ಅಡಿ ಮನೆ ಮನೆಗೆ ನೀರು ಪೂರೈಕೆ ಮಾಡುವ ಯೋಜನೆಯನ್ನು ತ್ವರಿತವಾಗಿ ಅನುಷ್ಟಾನಗೊಳಿಸಬೇಕು. ನಿಯಮಾನುಸಾರ ಮರಳು ಮತ್ತು ಜಲ್ಲಿ ಸಾಗಾಟಕ್ಕೆ ಅಡ್ಡಿ ಉಂಟು ಮಾಡಬಾರದು.  ಯಾವುದೇ ಕಾರಣಕ್ಕೂ ಮರಳು ಮತ್ತು ಜಲ್ಲಿ ಪೂರೈಕೆಗೆ ತೊಂದರೆಯಾಗಬಾರದು. ಕಾನೂನುಬಾಹಿರವಾಗಿ ನಡೆಯುತ್ತಿರುವ ಚಟುವಟಿಕೆಗಳನ್ನು ಮಾತ್ರ ತಡೆಯಿರಿ ಎಂದು ‌ಸೂಚನೆ ನೀಡಿದರು.
Published by:Seema R
First published: