News18 India World Cup 2019

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ

ರಾಜ್ಯಾದ್ಯಂತ ಮೊದಲ ಹಂತವಾಗಿ 176 ಪಬ್ಲಿಕ್ ಸ್ಕೂಲ್ ಪ್ರಾರಂಭ ಮಾಡಲಾಗಿತ್ತು‌. ಎರಡನೇ ಹಂತವಾಗಿ 100 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಈ ವರ್ಷದಿಂದ ಪ್ರಾರಂಭ ಮಾಡಲಾಗಿದೆ.

Latha CG | news18
Updated:June 14, 2019, 12:18 PM IST
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ
Latha CG | news18
Updated: June 14, 2019, 12:18 PM IST
ಬೆಂಗಳೂರು,(ಜೂ.14): ಈ ವರ್ಷದಿಂದ ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿಯೂ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಅನುಮತಿ ನೀಡಿತ್ತು. ಇಂದು ಸಿಎಂ ಎಚ್​.ಡಿ.ಕುಮಾರಸ್ವಾಮಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ, 1 ಸಾವಿರ ಶಾಲೆಗಳ 1ನೇ ತರಗತಿಯಿಂದ ಆಂಗ್ಲ ಮಾಧ್ಯಮಕ್ಕೆ ಚಾಲನೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭವಾಗಿದೆ. ರಾಜ್ಯಾದ್ಯಂತ ಮೊದಲ ಹಂತವಾಗಿ 176 ಪಬ್ಲಿಕ್ ಸ್ಕೂಲ್ ಪ್ರಾರಂಭ ಮಾಡಲಾಗಿತ್ತು‌. ಎರಡನೇ ಹಂತವಾಗಿ 100 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಈ ವರ್ಷದಿಂದ ಪ್ರಾರಂಭ ಮಾಡಲಾಗಿದೆ.

ಇದನ್ನೂ ಓದಿ: ಪಾಲಕರಿಗೆ ತಪ್ಪಲಿದೆ ಡೊನೇಷನ್​ ಹೊರೆ; ಈ ವರ್ಷದಿಂದ ಸರ್ಕಾರಿ ಶಾಲೆಗಳಲ್ಲೇ ಪ್ರೀ ನರ್ಸರಿ

ಪೋಷಕರು ತಮ್ಮ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳ ಕಡೆ ಮುಖ ಮಾಡುತ್ತಿದ್ದರು. ಇದರಿಂದಾಗಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕುಸಿಯುತಿತ್ತು. ಸರ್ಕಾರಿ ಶಾಲೆಗಳ ಉಳಿವಿಗಾಗಿ ಸರ್ಕಾರ ಪ್ರೀ ನರ್ಸರಿ ಆರಂಭಿಸುವ ಮಹತ್ವದ ನಿರ್ಧಾರ ಮಾಡಿತ್ತು.

ಒಂದು ಸಾವಿರ ಸರ್ಕಾರಿ ಶಾಲೆಯಲ್ಲಿ 1 ನೇ ತರಗತಿಯಿಂದ ಇಂಗ್ಲೀಷ್ ಮಾಧ್ಯಮ ಪ್ರಾರಂಭಿಸಲಾಗಿದೆ. ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ ಮತ್ತು ಯುಕೆಜಿ ತರಗತಿಗಳು ಇರಲಿವೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಪರಮೇಶ್ವರ್, ಶಾಸಕ ರೋಷನ್ ಬೇಗ್ ಸೇರಿ ಹಲವರು ಭಾಗಿಯಾಗಿದ್ದರು.

First published:June 14, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...