ಕಾಂಗ್ರೆಸ್​​-ಜೆಡಿಎಸ್​​​​ ವರ್ಸಸ್​ ಬಿಜೆಪಿ: ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಪರ ನಾಳೆ ಸಿಎಂ ಎಚ್​ಡಿಕೆ ಪ್ರಚಾರ!

ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿದರೆ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎನ್ನುವ ಭರವಸೆ ನೀಡಿದ್ದಾರೆ. ಅಲ್ಲದೇ ಇದರಿಂದಾಗಿ ಕಾಗೋಡು ತಿಮ್ಮಪ್ಪ ಹೋರಾಟಕ್ಕೆ ಜಯ ಸಿಕ್ಕಂತಾಗುತ್ತದೆ. ಈ ಮೂಲಕ ಅರಣ್ಯ ಕಾಯ್ದೆ ಸೇರಿದಂತೆ ಮಲೆನಾಡಿನ ಇತರೆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ- ಸಿಎಂ

Ganesh Nachikethu | news18
Updated:April 17, 2019, 1:47 PM IST
ಕಾಂಗ್ರೆಸ್​​-ಜೆಡಿಎಸ್​​​​ ವರ್ಸಸ್​ ಬಿಜೆಪಿ: ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಪರ ನಾಳೆ ಸಿಎಂ ಎಚ್​ಡಿಕೆ ಪ್ರಚಾರ!
ಮಧು ಬಂಗಾರಪ್ಪ
Ganesh Nachikethu | news18
Updated: April 17, 2019, 1:47 PM IST
ಬೆಂಗಳೂರು(ಏ.16): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಎರಡನೇ ಹಂತದ ಮತದಾನಕ್ಕೆ ಇನ್ನೊಂದು ವಾರ ಬಾಕಿ ಇರುವಾಗಲೇ ಶಿವಮೊಗ್ಗದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರ ನಡುವೇ ನೇರ ಹಣಾಹಣಿ ಏರ್ಪಟ್ಟಿದೆ. ಅಲ್ಲದೇ ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪನವರಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಈ ಮಧ್ಯೆ ಮೈತ್ರಿ ಸರ್ಕಾರದ ಟ್ರಬಲ್​ ಶೂಟರ್​​ ಡಿ.ಕೆ ಶಿವಕುಮಾರ್​​ ಕೂಡ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಲು ಮುಂದಾಗಿದ್ದು, ಇವರಿಗೆ ಸಿಎಂ ಎಚ್​​.ಡಿ ಕುಮಾರಸ್ವಾಮಿಯವರು ಕೈಜೋಡಿಸಿದ್ದಾರೆ.

ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಪ್ರಚಾರ ಮಾಡಲು ನಾಳೆಯಿಂದ ಶಿವಮೊಗ್ಗದಲ್ಲಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಬೀಡುಬಿಡಲಿದ್ದಾರೆ. ಜತೆಗೆ ಎರಡನೇ ಹಂತದಲ್ಲಿ ಮತದಾನ ನಡೆಯುವ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಇಂದಿನವರೆಗೂ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ, ನಾಳೆ ಶಿವಮೊಗ್ಗದಲ್ಲಿ ಮತಬೇಟೆ ಮಾಡಲಿದ್ದಾರೆ.

ಇನ್ನು ಇಲ್ಲಿನ ಲೋಕಸಭಾ ವ್ಯಾಪ್ತಿಗೆ ಸೇರಿದ ಸೊರಬ, ಭದ್ರಾವತಿ, ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಸಿಎಂ ಎಚ್​​.ಡಿ ಕುಮಾರಸ್ವಾಮಿಯವರಿಗೆ ಸ್ಥಳೀಯ ಕಾಂಗ್ರೆಸ್​​-ಜೆಡಿಎಸ್​​ ನಾಯಕರು ಸಾಥ್​​ ನೀಡಲಿದ್ದಾರೆ. ನಂತರ ಉತ್ತರ ಕನ್ನಡದಲ್ಲಿ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಧು ಬಂಗಾರಪ್ಪ ಗೆಲ್ಲಿಸಿದ್ರೆ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ; ಶಿವಮೊಗ್ಗ ಜನತೆಗೆ ಸಿಎಂ ಭರವಸೆ

ಈಗಾಗಲೇ ಸಿಎಂ ಕುಮಾರಸ್ವಾಮಿ ಅವರು, ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿದರೆ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎನ್ನುವ ಭರವಸೆ ನೀಡಿದ್ದಾರೆ. ಅಲ್ಲದೇ ಇದರಿಂದಾಗಿ ಕಾಗೋಡು ತಿಮ್ಮಪ್ಪ ಹೋರಾಟಕ್ಕೆ ಜಯ ಸಿಕ್ಕಂತಾಗುತ್ತದೆ. ಈ ಮೂಲಕ ಅರಣ್ಯ ಕಾಯ್ದೆ ಸೇರಿದಂತೆ ಮಲೆನಾಡಿನ ಇತರೆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಕೇರಳದಲ್ಲಿ ರಾಹುಲ್​​ ಇಂದಿನಿಂದ ಅಬ್ಬರದ ಪ್ರಚಾರ; ಕಾಂಗ್ರೆಸ್​​ ಪರ ಮತಬೇಟೆ
Loading...

ಹಾಗೆಯೇ ಸಹೋದರಿ ಗೀತಾ ಶಿವರಾಜ್​​ ಕುಮಾರ್​​ ಕೂಡ ಮಧು ಬಂಗಾರಪ್ಪ ಪರ ಪ್ರಚಾರ ಮಾಡುತ್ತಿದ್ದಾರೆ. ಜನರ ಒಡನಾಡಿ ಆಗಿ ಕೆಲಸ ಮಾಡಿದ ಬಂಗಾರಪ್ಪ ಅವರ ಬಗ್ಗೆ ಇಂದಿಗೂ ಅಭಿಮಾನ ಜನರಲ್ಲಿದೆ. ಮಧು ಬಂಗಾರಪ್ಪ ಅವರಿಗೆ ಬಡವರ ಪರವಾಗಿ ಕೆಲಸ ಮಾಡುವ ಗುಣವಿದೆ. ಸೊರಬ ಕ್ಷೇತ್ರದಲ್ಲಿ ಮಧುಬಂಗಾರಪ್ಪ ಮಾಡಿದ ಜನಪರ ಕೆಲಸ ಗುರುತಿಸುವಂತಿದೆ. ಮಧುಬಂಗಾರಪ್ಪ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರು ಈ ಬಾರಿ ಅವಕಾಶ ಕೊಡಬೇಕೆಂದು ಗೀತಾ ಶಿವರಾಜಕುಮಾರ್‌ ಮನವಿ ಮಾಡುತ್ತಿದ್ದಾರೆ.
-------------
First published:April 16, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626