ಅಮೆರಿಕಾಗೆ ಪ್ರಯಾಣ ಬೆಳೆಸಿದ ಸಿಎಂ ಎಚ್​ಡಿ ಕುಮಾರಸ್ವಾಮಿ; 30ರಂದು ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇಗುಲಕ್ಕೆ ಶಿಲಾನ್ಯಾಸ

ಜುಲೈ 5ರಂದು ಒಕ್ಕಲಿಗರ ಪರಿಷತ್ ಅಮೆರಿಕಾದ ಸಮಾವೇಶದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಸಿಎಂ ಅವರ ಈ ಪ್ರವಾಸ ಸಂಪೂರ್ಣ ಖಾಸಗಿಯಾಗಿದ್ದು, ಸರ್ಕಾರ ಯಾವುದೇ ವೆಚ್ಚ ಭರಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟಣೆ ಮೂಲಕ ‌ಮಾಹಿತಿ ನೀಡಿದೆ.

HR Ramesh | news18
Updated:June 29, 2019, 9:33 AM IST
ಅಮೆರಿಕಾಗೆ ಪ್ರಯಾಣ ಬೆಳೆಸಿದ ಸಿಎಂ ಎಚ್​ಡಿ ಕುಮಾರಸ್ವಾಮಿ; 30ರಂದು ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇಗುಲಕ್ಕೆ ಶಿಲಾನ್ಯಾಸ
ಸಿಎಂ ಕುಮಾರಸ್ವಾಮಿ
  • News18
  • Last Updated: June 29, 2019, 9:33 AM IST
  • Share this:
ಬೆಂಗಳೂರು: ಅಮೆರಿಕಾದಲ್ಲಿ ಒಕ್ಕಲಿಗರ ಪರಿಷತ್ ಸಮ್ಮೇಳನದಲ್ಲಿ ಭಾಗಿಯಾಗುವ ಸಲುವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಅಮೆರಿಕಾಗೆ ಪ್ರಯಾಣ ಬೆಳೆಸಿದರು.

ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಮಾರಸ್ವಾಮಿ ಅವರು ಅಮೆರಿಕಾಗೆ ತೆರಳಿದರು. ಆದಿ ಚುಂಚನಗಿರಿ ಮಠದ ಶಿವನ ದೇವಸ್ಥಾನ ಶಿಲಾನ್ಯಾಸ ಹಾಗೂ ಜುಲೈ 4,5,6ರಂದು ನಡೆಯುವ ಒಕ್ಕಲಿಗ ಪರಿಷತ್ತಿನ ಸಮ್ಮೇಳನ ನಡೆಯಲಿದೆ.

ಇದನ್ನು ಓದಿ: ಗ್ರಾಮವಾಸ್ತವ್ಯ ಮುಗಿಯುತ್ತಿದ್ದಂತೆ ಅಮೆರಿಕ ಪ್ರವಾಸಕ್ಕೆ ಸಿದ್ಧರಾದ ಸಿಎಂ ಎಚ್​ಡಿಕೆ

ಸಿಎಂ ಎಚ್​ಡಿಕೆ ಅವರು ಆದಿ ಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಹ್ವಾನದ ಮೇರೆಗೆ ಜೂನ್ 30 ರಂದು ನ್ಯೂ ಜೆರ್ಸಿಯಲ್ಲಿ ಶ್ರೀ ಕಾಲ ಭೈರವೇಶ್ವರಸ್ವಾಮಿ ದೇವಾಲಯದ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಜುಲೈ 5ರಂದು ಒಕ್ಕಲಿಗರ ಪರಿಷತ್ ಅಮೆರಿಕಾದ ಸಮಾವೇಶದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಸಿಎಂ ಅವರ ಈ ಪ್ರವಾಸ ಸಂಪೂರ್ಣ ಖಾಸಗಿಯಾಗಿದ್ದು, ಸರ್ಕಾರ ಯಾವುದೇ ವೆಚ್ಚ ಭರಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟಣೆ ಮೂಲಕ ‌ಮಾಹಿತಿ ನೀಡಿದೆ.

First published: June 28, 2019, 10:13 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading