ಬೆಂಗಳೂರು: ರಾಜ್ಯದ ಹಿರಿಯ ರಾಜಕಾರಣಿ (Senior Politician), ಜೆಡಿಎಸ್ ರಾಜ್ಯಾಧ್ಯಕ್ಷ (JDS State President) ಸಿಎಂ ಇಬ್ರಾಹಿಂ (CM Ibrahim) ಅವರು ರಾಜ್ಯ ಬಿಜೆಪಿ ಸರ್ಕಾರದ (State BJP Government) ವಿರುದ್ಧ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿರುವ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಿರಿ ಅಂತ ಕರೆ ನೀಡಿದ್ದಾರೆ. ರಾಜ್ಯ ಸರ್ಕಾರವನ್ನು ಮಂಗಳಮುಖಿಯರಿಗೆ ಹೋಲಿಸಿರುವ ಸಿಎಂ ಇಬ್ರಾಹಿಂ, ಗಂಡಸೂ (Gents) ಅಲ್ಲ ಹೆಂಗಸೂ (Ladies) ಅಲ್ಲದ ಸರ್ಕಾರ ಇದು ಅಂತ್ಯ ವ್ಯಂಗ್ಯವಾಡಿದ್ದಾರೆ. ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಟಿಕೆಟ್ (Ticket) ವಿಚಾರವಾಗಿ ಮಾತನಾಡಿ,ನಾನು ಆಕಾಂಕ್ಷಿ ಆಗಿರಲಿಲ್ಲ. ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು. ಬಡಿಸೋ ಜಾಗದಲ್ಲಿ ಇದ್ದು ನಾವೇ ಊಟ ಮಾಡೋಕೆ ಕೂತರೆ ಹೆಂಗೆ? ಎಂದು ಮರು ಪ್ರಶ್ನೆ ಹಾಕಿದ್ದಾರೆ.
“ಇದು ಮಂಗಳಮುಖಿ ಸರ್ಕಾರ” ಎಂದ ಸಿಎಂ ಇಬ್ರಾಹಿಂ
ರಾಜ್ಯ ಬಿಜೆಪಿ ಸರ್ಕಾರ ಮಂಗಳಮುಖಿ ಇದ್ದಂತೆ ಅಂತ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಆದಷ್ಟು ಬೇಗ ಮಂಗಳಮುಖಿ ರೀತಿ ಇರುವ ಸರ್ಕಾರ ತೆಗೆಯಬೇಕು. ಗಂಡಸೂ ಅಲ್ಲ, ಹೆಂಗಸೂ ಅಲ್ಲದ ಸರ್ಕಾರ ಇದು ಎಂದು ಕಿಡಿಕಾರಿದರು. ಈ ಸರ್ಕಾರದ ಜೊತೆಗೆ ಹೋರಾಡೋಕೂ ಆಗಲ್ಲ, ಸುಮ್ಮನಿರಲೂ ಆಗಲ್ಲ. ಹೆಂಗಸರಾದರೆ ಹೆಂಗಸರನ್ನು ಕಳಿಸಬಹುದು. ಗಂಡಸರಾದರೆ ಗಂಡಸರನ್ನು ಕಳಿಸಬಹುದು. ಆದರೆ, ಇವರು ಎರಡೂ ಅಲ್ಲ, ಚಪ್ಪಾಳೆ ತಟ್ಟಿ ಬಿಡ್ತಾರೆ, ನಕ್ಕು ಬಿಡ್ತಾರೆ, ಏನು ಮಾಡೋಣ ಎಂದು ಅವರು ವ್ಯಂಗ್ಯವಾಡಿದರು.
“ಬಡಿಸೋ ಜಾಗದಲ್ಲಿ ಇದ್ದು ಊಟ ಮಾಡಬಾರದು”
ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ಬಗ್ಗೆಯೂ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದರು. ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು. ಬಡಿಸೋ ಜಾಗದಲ್ಲಿ ಇದ್ದು ನಾವೇ ಊಟ ಮಾಡೋಕೆ ಕೂತರೆ ಹೆಂಗೆ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: MLC Elections: ವಿಜಯೇಂದ್ರಗೆ ತಪ್ಪಿದ ಟಿಕೆಟ್; ಬಿಜೆಪಿಯ ಟಿಕೆಟ್ ಸಿಕ್ಕಿದ್ದು ಯಾರಿಗೆ?
ಜೆಡಿಎಸ್ ವಿಧಾನ ಪರಿಷತ್ ಅಭ್ಯರ್ಥಿಯಾದ ಶರವಣ
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ. ಶರವಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ಜೊತೆಗೆ ಶರವಣ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಟಿಎ ಶರವಣ
ಚುನಾವಣಾಧಿಕಾರಿ ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಕ್ಷ್ಮಿ ಅವರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ವಿಧಾನ ಪರಿಷತ್ ಜೆಡಿಎಸ್ ಅಭ್ಯರ್ಥಿ ಶರವಣ ಮಾತನಾಡಿ, ಪಕ್ಷ ನಿಷ್ಠೆ ಗಮನ ಹರಿಸಿ ಎರಡನೇ ಬಾರಿ ವಿಧಾನಪರಿಷತ್ ನಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ಇದಕ್ಕಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಇದನ್ನೂ ಓದಿ: MLC Election; ಲಕ್ಷ್ಮಣ ಸವದಿಗೆ ಜಾಕ್ ಪಾಟ್: ಬಿಜೆಪಿ ಪಟ್ಟಿ ರಿಲೀಸ್
ಜೂನ್ 3ರಂದು ವಿಧಾನ ಪರಿಷತ್ ಚುನಾವಣೆ
ಜೂನ್ 3 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಒಟ್ಟು ಏಳು ಸ್ಥಾನಗಳ ಪೈಕಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್‌ಗೆ 2 ಹಾಗೂ ಜೆಡಿಎಸ್‌ಗೆ 1 ಸ್ಥಾನ ಸಿಗಲಿದೆ. ಕಾಂಗ್ರೆಸ್‌ನಿಂದ ಅಚ್ಚರಿಯ ಆಯ್ಕೆ ಎಂಬಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ