ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Elections) ಜೆಡಿಎಸ್ (JDS) ಪಕ್ಷ ನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶವನ್ನು ಪಡೆದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ (State President) ಸಿ.ಎಂ ಇಬ್ರಾಹಿಂ (CM Ibrahim), ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ದೇವೇಗೌಡರ (Devegowda) ಸಮ್ಮುಖದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಇಬ್ರಾಹಿಂ ಅವರು, ಚುನಾವಣೆಯ ಸೋಲಿನ ಹೊಣೆ ಹೊತ್ತು ಫಲಿತಾಂಶ ಬಂದ ಮೂರು ದಿನಗಳ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ
ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾತನಾಡಿದ ಇಬ್ರಾಹಿಂ ಅವರು, ಇವತ್ತು ದೇವೇಗೌಡರು ಪಕ್ಷದ ಹಿರಿಯರು, ಮುಖಂಡರು ಎಲ್ಲರನ್ನು ಕರೆದಿದ್ದಾರೆ. ಫಲಿತಾಂಶ ಬಂದ ಮೂರನೇ ದಿನ ಸೋಲಿನ ನೈತಿಕ ಹೊಣೆ ಹೊತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಹೊಸ ಸರ್ಕಾರ ರಚನೆಯಾಗಿದೆ ಶುಭವಾಗಲಿ ಎಂದು ತಿಳಿಸಿದರು.
ಇದನ್ನೂ ಓದಿ: Puttur: ದುಷ್ಕರ್ಮಿಗಳಿಂದ ಭಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರ್ನಿಂದ ದಾಳಿ
ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಇದ್ದಿದ್ದರೆ ಮಂತ್ರಿಯಾಗುವ ಅವಕಾಶವಿತ್ತು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಇಬ್ರಾಹಿಂ ಅವರು, ಗೌರವ ಇಲ್ಲದ ಕಡೆ ಸ್ಥಾನಕ್ಕೆ ಹೋಗಲ್ಲ, ಮಾನಕ್ಕೆ ಹೋಗುತ್ತೇವೆ. ಯು.ಟಿ ಖಾದರ್ ಅವರನ್ನು ಕಾಂಗ್ರೆಸ್ ಪಕ್ಷ ಡಿಸಿಎಂ ಮಾಡಬಹುದಿತ್ತು ಅಲ್ವಾ? ಈಗ ಅವರು ಎದ್ದೇಳಂಗು ಇಲ್ಲ, ಮಾತನಾಡುವಂತೆಯೂ ಇಲ್ಲ ಎಂದು ಯು.ಟಿ ಖಾದರ್ ಸ್ಪೀಕರ್ ಮಾಡಿದ ಕಾಂಗ್ರೆಸ್ ನಡೆಗೆ ಟೀಕೆ ಮಾಡಿದರು.
ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಅಲೆ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೂ ನಾವು ರಾಜ್ಯದಲ್ಲಿ 60 ಲಕ್ಷ ಮತ ಪಡೆದಿದ್ದೇವೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಸಜ್ಜಾಗಿ ಅಂತ ಕಾರ್ಯಕರ್ತರಿಗೆ ಹೇಳಿದ್ದೇವೆ. ಈ ಸರ್ಕಾರದ ಮೂರು ತಿಂಗಳ ಹನಿಮೂನ್ ಪಿರಿಯಡ್ ನೋಡುತ್ತೇವೆ. ನಮ್ಮಲ್ಲಿ ಮತ ಪರಿವರ್ತನೆಗಾಗಿ ಸಿದ್ದತೆ ಮಾಡಿಕೊಳ್ಳುವಲ್ಲಿ ವಿಫಲವಾದ್ದೇವು, ಕೊನೆಯ ನಾಲ್ಕು ದಿನದ ತಂತ್ರಗಾರಿಕೆಯಲ್ಲಿ ವಿಫಲ ಆಗಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು, ಸಭೆಯಲ್ಲಿ ಜೆಡಿಎಸ್ ನಾಯಕರಿಗೆ ಕಿವಿಮಾತು ಹೇಳಿರುವ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು, ಈ ಜೆಡಿಎಸ್ ಪಕ್ಷ ಉಳಿಯಬೇಕು. ಲೀಡರ್ಗಳಿಂದ ಪಕ್ಷ ಉಳಿಯುವುದಿಲ್ಲ, ಕಾರ್ಯಕರ್ತರಿಂದ ಪಕ್ಷ ಉಳಿಯಬೇಕು. ಬಿಜೆಪಿಯವರ ಮೇಲೆ, ನಮ್ಮಗಳ ಮೇಲೆ ತನಿಖೆ ಮಾಡಿದರೆ ಮಾಡಲಿ ಎಂದು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ