HOME » NEWS » State » CM IS IN HOSPITAL BJP GOVERNMENT IS IN ICU SAYS SIDDARAMAIAH RHHSN

ಸಿಎಂ ಆಸ್ಪತ್ರೆಯಲ್ಲಿದ್ದಾರೆ, ಸರ್ಕಾರ ಐಸಿಯುನಲ್ಲಿದೆ; ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ

ರಾಜ್ಯ ಬಿಜೆಪಿ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ಹರಿಹಾಯ್ದಿದ್ದಾರೆ.

news18-kannada
Updated:April 19, 2021, 2:43 PM IST
ಸಿಎಂ ಆಸ್ಪತ್ರೆಯಲ್ಲಿದ್ದಾರೆ, ಸರ್ಕಾರ ಐಸಿಯುನಲ್ಲಿದೆ; ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ
ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ.
  • Share this:
ಬೆಂಗಳೂರು: ದಿನದಿಂದ ದಿನಕ್ಕೆ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ವಿಷಯವಾಗಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೋನಾ ತಡೆಗಟ್ಟುವಿಕೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಐಸಿಯುನಲ್ಲಿದೆ ಎಂದು ಹರಿಹಾಯ್ದಿದ್ದಾರೆ.

ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು ಬಿಜೆಪಿ ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು. ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ ಎಂದು ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ. ಸಿಎಂ ಆಸ್ಪತ್ರೆಯಲ್ಲಿದ್ದಾರೆ,‌ ರಾಜ್ಯ ಸರ್ಕಾರ ಐಸಿಯು ನಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು @BJP4Karnataka ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು.

ಇದನ್ನು ಓದಿ: Curfew in Delhi: ದೆಹಲಿಯಲ್ಲಿ ಇಂದು ರಾತ್ರಿಯಿಂದಲೇ 6 ದಿನ ಲಾಕ್​ಡೌನ್​ ಜಾರಿ; ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
Youtube Video

ವರ್ಷದ ಹಿಂದೆ ಮೊದಲ ಬಾರಿ‌ ಕೊರೊನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೊನಾವನ್ನೂ‌ ತನ್ನ ಭ್ರಷ್ಟತೆಗೆ ಬಳಸಿಕೊಂಡ ಬಿಜೆಪಿ ಸರ್ಕಾರ ಈಗ ಕೈಚೆಲ್ಲಿ ಕೂತಿದೆ. ರಾಜ್ಯ ಬಿಜೆಪಿ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ಹರಿಹಾಯ್ದಿದ್ದಾರೆ.
Published by: HR Ramesh
First published: April 19, 2021, 2:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories