ಬೆಂಗಳೂರು(ನ.18): ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿರುವ ವಿಚಾರವೆಂದರೆ ಅದು ಸಚಿವ ಸಂಪುಟ ಪುನಾರಚನೆ. ಸಚಿವ ಸ್ಥಾನದ ಆಕಾಂಕ್ಷಿಗಳು ತಮಗೂ ಮಂತ್ರಿ ಸ್ಥಾನ ಬೇಕೆಂದು ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ದುಂಬಾಲು ಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ ಮಾಜಿ ಸಚಿವ ಎಚ್.ವಿಶ್ವನಾಥ್ ಕೂಡ ತನಗೆ ಸಚಿವ ಸ್ಥಾನ ಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದರು. ಈಗ ಆ ಸಾಲಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕೂಡ ಸೇರಿದ್ದಾರೆ. ನ್ಯೂಸ್ 18 ಕನ್ನಡದ ಜೊತೆ ಮಾತನಾಡಿದ ಅವರು, ಹಾಲಿ ಸಚಿವರ ಕೈ ಬಿಡಿ, ನಮಗೂ ಅವಕಾಶ ಕೊಡಿ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ರೇಣುಕಾಚಾರ್ಯ, ಇಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ್ದೆ. ರಾಜಕೀಯ ವಿದ್ಯಾಮಾನಗಳು ಹಾಗೂ ವಾಸ್ತವ ಸ್ಥಿತಿಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಹಾಲಿ ಸಚಿವರ ಕೈ ಬಿಟ್ಟು, ಹೊಸಬರಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇನೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ನೋಡೋಣ ಎಲ್ಲವೂ ಭಗವಂತನ ಇಚ್ಚೆ. ಈ ಬಗ್ಗೆ ರಾಜ್ಯಾಧ್ಯಕ್ಷರು, ಹಾಗೂ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಮಂಡ್ಯದಲ್ಲಿ ಯುವತಿಯನ್ನು ಕೊಂದು ದೇಹವನ್ನು ಕತ್ತರಿಸಿ ನಾಲೆಗೆ ಎಸೆದ ದುಷ್ಕರ್ಮಿಗಳು
ಮೂರು ಬಾರಿ ಶಾಸಕನಾಗಿದ್ದೇನೆ ನನಗೂ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಒಂದು ಗಂಟೆ ಕಾಲ ನಳೀನ್ ಕುಮಾರ್ ಕಟೀಲ್ ಚರ್ಚೆ ಮಾಡಿದ್ದಾರೆ. ನನಗೆ ಅವರು ಯಾವುದೇ ನೋಟಿಸ್ ಕೊಟ್ಟಿಲ್ಲ. ನಾನೇ ಬಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದರು ರೇಣುಕಾಚಾರ್ಯ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ