ಬರ ನಿರ್ವಹಣೆಗೆ ಮುಂದಾದ ಸಿಎಂ; ಮೇ.15ಕ್ಕೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ

ಮೇ.15ರಂದು ಕಲಬುರಗಿ ಹಾಗೂ ಧಾರವಾಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಲಿರುವ ಮುಖ್ಯಮಂತ್ರಿ, ಬರದ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೆ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕುರಿತು ಸೂಚನೆ ನೀಡಲಿದ್ದಾರೆ.

MAshok Kumar | news18
Updated:May 15, 2019, 11:01 PM IST
ಬರ ನಿರ್ವಹಣೆಗೆ ಮುಂದಾದ ಸಿಎಂ; ಮೇ.15ಕ್ಕೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ
ಮುಖ್ಯಮಂತ್ರಿ ಕುಮಾರಸ್ವಾಮಿ
  • News18
  • Last Updated: May 15, 2019, 11:01 PM IST
  • Share this:
ಬೆಂಗಳೂರು (ಮೇ.14) : ಕಳೆದ ಎರಡು ತಿಂಗಳಿನಿಂದ ಚುನಾವಣಾ ಪ್ರಚಾರ ಹಾಗೂ ರೆಸಾರ್ಟ್, ರೆಸ್ಟ್ ಎಂದು ಜನರ ಹಾಗೂ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಗೂ ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗೆ ಮುಂದಾಗಿದ್ದಾರೆ.

ಮೇ.15ರಂದು ಕಲಬುರಗಿ ಹಾಗೂ ಧಾರವಾಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಲಿರುವ ಮುಖ್ಯಮಂತ್ರಿ, ಬರದ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೆ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳ ರಕ್ಷಣೆಗೆ ಮೇವು ಬ್ಯಾಂಕ್, ಉದ್ಯೋಗ ಸೃಜನೆ ಕಾಮಗಾರಿಗಳ ಪ್ರಗತಿ ಸೇರಿದಂತೆ ಹಲವಾರು ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.

ಇದನ್ನೂ ಓದಿ : ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯ; ಬಿಬಿಎಂಪಿ ಬಜೆಟ್, ‘ಫನಿ’ ಗೆ ಪರಿಹಾರ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆ

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರ ಹಾಗೂ ಧಾರವಾಡದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಮೇ.19ರಂದು ಉಪ ಚುನಾವಣೆ ಇದೆ. ಹೀಗಾಗಿ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ನೀತಿ ಸಂಹಿತೆ ತಡೆಯಾಗಿರುವ ಕಾರಣ ಸಿಎಂ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ನಡೆಸುತ್ತಿಲ್ಲ.

ರಾಜ್ಯದಲ್ಲಿ ಬರ ಭೀಕರವಾದ ಪರಿಸ್ಥಿತಿಯನ್ನು ಮುಟ್ಟಿದೆ. ಜನ ಕುಡಿಯಲು ಸಹ ನೀರಿಲ್ಲದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಆದರೆ ಈ ಕುರಿತು ಹೆಚ್ಚು ಗಮನವಹಿಸದ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣಾ ಪ್ರಚಾರ ಹಾಗೂ ಪ್ರಕೃತಿ ಚಿಕಿತ್ಸೆ, ವಿಶ್ರಾಂತಿ ಎಂದು ರೆಸಾರ್ಟ್ ಮೊರೆ ಹೋಗಿದ್ದಾರೆ ಎಂಬುದು ವಿರೋಧ ಪಕ್ಷಗಳ ಪ್ರಮುಖ ಟೀಕೆಯಾಗಿತ್ತು. ಆದರೆ, ಕಳೆದ ವಾರ ಸಚಿವ ಸಂಪುಟ ಸಭೆ ನಡೆಸಿದ್ದ ಕುಮಾರಸ್ವಾಮಿ ಬರಪೀಡಿತ ಪ್ರದೇಶಗಳಲ್ಲಿ ತುರ್ತಾಗಿ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಲ್ಲದೆ ಈ ಕೆಲಸಕ್ಕಾಗಿ ಹಣವನ್ನೂ ಮೀಸಲಿಟ್ಟಿದ್ದಾರೆ.

'ನಿಮ್ಮ ನ್ಯೂಸ್ 18 ಕನ್ನಡವನ್ನು ಶೇರ್​​ಚಾಟ್ ನಲ್ಲೂ ಹಿಂಬಾಲಿಸಿ'

First published:May 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ