ಶಿವಮೊಗ್ಗ: ಎರಡು ಬಸ್ಗಳ (Bus) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ 70ಕ್ಕೂ ಹೆಚ್ಚು ಮಂದಿ ಗಾಯಗೊಂಡು, ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಚೊರಡಿ ಗ್ರಾಮದ ಕುಮದ್ವತಿ ಸೇತುವೆ ಬಳಿ ನಡೆದಿದೆ. ಶ್ರೀನಿವಾಸ ಬಸ್ ಹಾಗೂ ಕಾಳಪ್ಪ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಡಿಕ್ಕಿ ರಭಸಕ್ಕೆ ಎರಡು ಬಸ್ಗಳ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು (Police) ಗಾಯಗೊಂಡಿರುವವರನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ (Hospital) ದಾಖಲಿಸುವ ಕಾರ್ಯ ಮಾಡುತ್ತಿದ್ದಾರೆ. ಈಗಾಗಲೇ ಬಸ್ನಿಂದ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಇನ್ನುಳಿದ ಮೃತ ದೇಹ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಬಂದ್
ಅಪಘಾತದಿಂದಾಗಿ ಶಿವಮೊಗ್ಗ ಮತ್ತು ಸಾಗರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿದೆ. ಶಿವಮೊಗ್ಗದಿಂದ ಆಯನೂರಿಗೆ ಸಂಚರಿಸಿ ಅಲ್ಲಿಂದ ರಿಪ್ಪನ್ ಪೇಟೆ ಆನಂದಪುರ ಮಾರ್ಗದಲ್ಲಿ ಸಾಗರಕ್ಕೆ ವಾಹನಗಳು ಸಂಚಾರ ಮಾಡುತ್ತಿವೆ.
ಇದನ್ನೂ ಓದಿ: Crime News: ಮಚ್ಚಿನಿಂದ ಎರಡೂ ಕಾಲುಗಳನ್ನು ಕತ್ತರಿಸಿ ಕೊಲೆ! ಬರ್ಬರ ಹತ್ಯೆ ನೋಡಿ ಬೆಚ್ಚಿಬಿದ್ದ ಜನರು
ಅಪಘಾತ ನಡೆದ ಸ್ಥಳದಲ್ಲಿ ಜೆಸಿಬಿ ಬಳಸಿ ಅಪಘಾತಕ್ಕೊಳಗಾದ ಬಸ್ಗಳನ್ನು ಬೇರ್ಪಡಿಸುತ್ತಿರುವ ಕಾರ್ಯವನ್ನು ಮಾಡಿದ್ದು, ಎರಡು ಬಸ್ಗಳ ನಡುವಿನ ಅಪಘಾತದಲ್ಲಿ ಏಳು ಜನ ಮೃತಪಟ್ಟಿರುವ ಸಾಧ್ಯತೆ ಇದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚುವ ಅವಕಾಶವಿದೆ.
ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುಗಳು ದಾಖಲು
ಇನ್ನು, ಭೀಕರ ಅಪಘಾತದ ಹಿನ್ನೆಲೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಬಾವಿಗೆ ಇಳಿದಿದ್ದ ಮೂವರು ಸಾವು
ಬಾವಿಯಲ್ಲಿದ್ದ ಪಂಪ್ ರಿಪೇರಿ ಮಾಡಲು ಇಳಿದ ಮೂವರು ಸಾವು ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದಲ್ಲಿ ನಡೆದಿದೆ. ಮೃತರನ್ನು ಗೋವಿಂದ ಪೂಜಾರಿ (60), ಗಣೇಶ ಶೇಟ್(23), ಸುರೇಶ ನಾಯರ್ (40) ಎಂದು ಗುರುತಿಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಬಾವಿಯಿಂದ ಹೊರ ತಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ