ಚಾಮರಾಜನಗರ(ನವೆಂಬರ್. 25): ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು. ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದ ಸಭಾಂಗಣದಲ್ಲಿಂದು ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಯವರು ಪ್ರಾಧಿಕಾರದ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ವೈ ಈ ವಿಷಯ ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಇಂದು ಪ್ರಾಧಿಕಾರದ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಧಿಕಾರದ ವತಿಯಿಂದ 15 ಶಾಲೆಗಳನ್ನು ಗುರುತಿಸಲಾಗಿದೆ. ಈ ಶಾಲೆಗಳನ್ನು ದತ್ತು ತೆಗೆದುಕೊಂಡು ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿ ಶಾಲೆಗಳ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಲಾಗುವುದು ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಡಲಾಗುವುದು. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದೇನೆ. ಇದರಲ್ಲಿ ಈಗಾಗಲೇ ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ಇವೆ. ಇನ್ನು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.
ಇದನ್ನೂ ಓದಿ : ಅಹ್ಮದ್ ಪಟೇಲ್ ಕಾಂಗ್ರೆಸ್ ಗೆ ಕರೆ ತಂದಿದ್ದರಿಂದ ಸಿಎಂ ಆದೆ ; ಭಾವುಕರಾದ ಸಿದ್ಧರಾಮಯ್ಯ
ಈ ಸಭೆಯಲ್ಲಿ ಉಪಮುಖ್ಯಮಂತ್ರಿಯವರಾದ ಗೋವಿಂದ ಕಾರಜೋಳ, ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಸುರೇಶ್ ಕುಮಾರ್, ಸಾಲೂರು ಮಠದ ಶ್ರೀಗಳಾದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಶಾಸಕರಾದ ಆರ್ ನರೇಂದ್ರ, ಎನ್ ಮಹೇಶ್, ಸಿ ಪುಟ್ಟರಂಗಶೆಟ್ಟಿ, ಸಿ .ಎಸ್. ನಿರಂಜನ್ ಕುಮಾರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ