Basavaraj Bommai| ಬಹುಗ್ರಾಮ ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಪ್ರತಿ 15 ದಿನಕ್ಕೊಮ್ಮೆ ಬಹುಗ್ರಾಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಸವರಾಜ ಬೊಮ್ಮಾಯಿ.

ಬಸವರಾಜ ಬೊಮ್ಮಾಯಿ.

  • Share this:
    ಬೆಂಗಳೂರು (ಆಗಸ್ಟ್ 24);  ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಜಲಜೀವನ್ ಮಿಷನ್ (Jala Jeevan Mission) ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಉದ್ದೇಶದಿಂದ ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಅಧಿಕಾರಿಗಳಿಗೆ ಇಂದು ಸೂಚನೆ ನೀಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಜಲಜೀವನ್ ಮಿಷನ್ ಭಾರತ ಸರ್ಕಾರದ (Indian Government) ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ತಿಳಿಸಿದರು.

    "ಪ್ರತಿ 15 ದಿನಕ್ಕೊಮ್ಮೆ ಬಹುಗ್ರಾಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಪ್ರತಿ ತಿಂಗಳು ತಾವು ಖುದ್ದು ಪ್ರಗತಿ ಪರಿಶೀಲನೆ ಮಾಡುವುದಾಗಿ" ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮೇಲ್ಮೈ ಜಲ ಮೂಲ ಇಲ್ಲದ ಜಿಲ್ಲೆಗಳಿಗೆ ನೀರು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

    2022-23ರ ಸಾಲಿಗೆ ಯೋಜನೆ ರೂಪಿಸಿ, ಅನುಮೋದನೆ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸಕ್ತ ಸಾಲಿನ ಎಲ್ಲ ಡಿಪಿಆರ್ ಗಳ ಅನುಮೋದನಾ ಪ್ರಕ್ರಿಯೆ ಅಕ್ಟೋಬರ್ ಒಳಗೆ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಅನುಮೋದನೆ ಯಲ್ಲಿನ ತೊಡಕುಗಳ ನಿವಾರಣೆಗೆ ತಾವೇ ಖುದ್ದು ಕ್ರಮ ವಹಿಸುವ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಇದನ್ನೂ ಓದಿ: Basanagouda Patil Yatnal| ಶಾಸಕರ ಭವನದ ಯತ್ನಾಳ್ ಕೊಠಡಿ ಬಾಗಿಲಿಗೆ ಅಶ್ಲೀಲ ಭಿತ್ತಿಪತ್ರ; ಆರೋಪಿಗಾಗಿ ಪೊಲೀಸರ ಶೋಧ

    ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: