• Home
  • »
  • News
  • »
  • state
  • »
  • Jaggi Vasudev: ಜೀವಂತ ಹಾವು ಹಿಡಿದು ಪೂಜೆ; ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಕಂಪ್ಲೇಂಟ್

Jaggi Vasudev: ಜೀವಂತ ಹಾವು ಹಿಡಿದು ಪೂಜೆ; ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಕಂಪ್ಲೇಂಟ್

ಸದ್ಗುರು ಜಗ್ಗಿ ವಾಸುದೇವ್

ಸದ್ಗುರು ಜಗ್ಗಿ ವಾಸುದೇವ್

Case Against Jaggi Vasudev: ಅಕ್ರಮವಾಗಿ ಹಾವನ್ನು ಹಿಡಿದು ಪೂಜೆ ಮಾಡಿದ ಕಾರಣಕ್ಕೆ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಕೇಸ್ ದಾಖಲಾಗಿದೆ. 

  • News18 Kannada
  • 2-MIN READ
  • Last Updated :
  • Chikkaballapura, India
  • Share this:

ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್ ಮುಖ್ಯಸ್ಥ (Isha Foundation Founder) ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗುತ್ತಿರುವ ಆದಿಯೋಗಿ ಧ್ಯಾನ ಕೇಂದ್ರದಲ್ಲಿ (Adiyogi Dhyan Centre Chikkaballapur) ಅಕ್ರಮವಾಗಿ ಹಾವನ್ನು ಹಿಡಿದು ಪೂಜೆ ಮಾಡಿದ ಕಾರಣಕ್ಕೆ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಕೇಸ್ (Case Against Jaggi Vasudev) ದಾಖಲಾಗಿದೆ. ಜೀವಂತ ಹಾವು (Snake) ಹಿಡಿದು ಪೂಜೆ ಸಲ್ಲಿಸಿದ ಕಾರಣ ಪರಿಸರ ಪ್ರೇಮಿಗಳು ಆಕ್ಷೇಪ‌ ವ್ಯಕ್ತಪಡಿಸಿದ್ದು ಅರಣ್ಯ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಉರಗ ಪ್ರೇಮಿ ಪೃಥ್ವಿರಾಜ್ ಎಂಬ ವ್ಯಕ್ತಿ ದೂರು ದಾಖಲಿಸಿದ್ದಾರೆ. ಚಿಕ್ಕಬಳ್ಳಾಪುರ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗಿದೆ.


ಇತ್ತೀಚಿಗಷ್ಟೇ ಸದ್ಗುರು ಜಗ್ಗಿ ವಾಸುದೇವ್ ಚಿಕ್ಕಬಳ್ಳಾಪುರ ತಾಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ  ನಾಗಮಂಟಪ ಪೂಜೆ ನಡೆಸಿದ್ದರು.




ವನ್ಯಜೀವಿಗಳನ್ನು ಹಿಡಿದು ಸಾರ್ವಜನಿಕ ವೇದಿಕೆಗಳಲ್ಲಿ ಪ್ರದರ್ಶನ ಮಾಡಿದ ಆರೋಪದಲ್ಲಿ ದೂರನ್ನು ದಾಖಲಿಸಿದ್ದಾರೆ. ಹೀಗಾಗಿ ಸದ್ಗುರು ಜಗ್ಗಿ ವಾಸುದೇವ್ ಅವರ ವಿರುದ್ಧ`ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ’ (Wildlife Act) ಸ್ಪಷ್ಟ ಉಲ್ಲಂಘನೆ ನಡೆಸಲಾಗಿದೆ ಎಂಬ ಆರೋಪದಲ್ಲಿ ದೂರು ದಾಖಲಿಸಲಾಗಿದೆ.


ಇದು ಪ್ಲಾಸ್ಟಿಕ್ ಅಕ್ಕಿ ಅಲ್ಲ, ಭಯವಿಲ್ಲದೇ ಊಟಮಾಡಿ; ಜಿಲ್ಲಾಧಿಕಾರಿ ಅಭಯ
ವಿಜಯಪುರ : ಜನಸಾಮಾನ್ಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ವಿತರಣೆ ಮಾಡಲಾಗುವ ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೋಷಕಾಂಶ (ವಿಟಾಮಿನ್ ಎ ಮತ್ತು ಡಿ. ಐರನ್, ಫೋಲಿಕ್ ಆಸಿಡ್, ಬಿಕಾಂಪ್ಲೆಕ್ಸ್, ಜಿಂಕ್ ಹಾಗೂ ಐಯೋಡಿನ್) ಭರಿತ ಸಾರವರ್ಧಿತ ಅಕ್ಕಿಯಲ್ಲಿ ಬೆರೆಸಿ 2022ನೇ ಮೇ ತಿಂಗಳಿನಿಂದ ನ್ಯಾಯ ಬೆಲೆ ಅಂಗಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ. ಸಾರವರ್ಧಿತಗೊಳಿಸಿರುವ (ಪೋರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೋಡಲು ಪ್ಲಾಸ್ಟಿಕ್ ರೀತಿಯಲ್ಲಿ (Plastic Rice) ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗದೇ ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು (Nutrition Rice) ಉಪಯೋಗಿಸಿ ಆರೋಗ್ಯ ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.


ಇದನ್ನೂ ಓದಿ: ಹಿಂದೂಗಳು ಒಬ್ಬರನ್ನು ಮದುವೆಯಾಗಿ ಮೂವರನ್ನು ಇಟ್ಟುಕೊಳ್ಳುತ್ತಾರೆ; AIMIM ಮುಖಂಡ


ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದ ಇರುಳುಗುರುಡುತನದಂತಹ ರೋಗಗಳು ಬರಬಹುದಾಗಿದೆ. ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದನ್ನು ತಪ್ಪಿಸಲು ಹೆಚ್ಚಿನ ಪೋಷಕಾಂಶದ ಅಗತ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಈ ಸಾರವರ್ಧಿತ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.


ಇದನ್ನೂ ಓದಿ: Rose Business: ಗುಲಾಬಿ ಬೆಳೆದು ಭರ್ಜರಿ ಆದಾಯ, ಖರ್ಚು ತೀರಾ ಕಡಿಮೆ!


ಸ್ವಂತಕ್ಕೆ ಉಪಯೋಗಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡಬೇಡಿ
ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಡುಗಡೆ ಮಾಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸಲು ಮನವಿ ಮಾಡಲಾಗಿದೆ. ಹೀಗೆ ಸ್ವಂತ ಬಳಕೆಗೆ ಸಾವರ್ಧಿತ ಅಕ್ಕಿಯನ್ನು ಬಳಸದೇ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಅಧಿಕಾರಿಗಳು ನ್ಯೂಸ್ 18ಗೆ ಮಾಹಿತಿ ನೀಡಿದ್ದಾರೆ.


ಕಾಳಸಂತೆಯಲ್ಲಿ ಮಾರಾಟಮಾಡಲು ಮುಂದಾದರೆ ಅಂತವರ ವಿರುದ್ಧ ಸೂಕ್ತ ಕ್ರಮ
ಗರ್ಭಿಣಿಯರಿಗೆ, ಬಾಣಂತಿ ಮಹಿಳೆಯರಿಗೆ, ಚಿಕ್ಕಮಕ್ಕಳಿಗೆ ಈ ಪಡಿತರ ಅಕ್ಕಿ ಪೌಷ್ಟಿಕತೆಯನ್ನು ಹೆಚ್ಚಿಸುತ್ತದೆ. ಜೊತೆಗೆ ದೇಹವನ್ನ ತಂಪಾಗಿಡುತ್ತದೆ. ಪಡಿತರದಲ್ಲಿ ನೀಡುವ ( ವಿಟಾಮಿನ್ ಎ ಮತ್ತು ಡಿ. ಐರನ್, ಫೋಲಿಕ್ ಆಸಿಡ್, ಬಿಕಾಂಪ್ಲೇಕ್ಸ, ಜಿಂಕ್ ಹಾಗೂ ಐಯೋಡಿನ್) ಭರಿತ ಅಕ್ಕಿಯನ್ನ ಪ್ಲಾಸ್ಟಿಕ್ ಅಕ್ಕಿ ಎಂದು ಕಾಳಸಂತೆಯಲ್ಲಿ ಮಾರಾಟಮಾಡಲು ಮುಂದಾದರೆ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದಾಗಿ ವಿಜಯಪುರ ಜಿಲ್ಲಾಧಿಕಾರಿ ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published by:ಗುರುಗಣೇಶ ಡಬ್ಗುಳಿ
First published: