Siddaramiah: ಸಿದ್ದರಾಮಯ್ಯ, ಯತೀಂದ್ರ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು!

ಸಿದ್ದರಾಮಯ್ಯ ಕಾರಿನ ಮೇಲೆ ನಿನ್ನೆ ಕೊಡಗಿನಲ್ಲಿ ಮೊಟ್ಟೆ ಎಸೆಯಲಾಗಿತ್ತು. ಇದನ್ನು ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಎಲ್ಲರೂ ಖಂಡಿಸಿದ್ದರು. ನಿನ್ನೆ ಆಕ್ರೋಶದ ಭರದಲ್ಲಿ ಸಿದ್ದರಾಮಯ್ಯ ಪ್ರಚೋದನಾಕಾರಿ ಹೇಳಿಕೆ ಕೊಟ್ಟಿದ್ದರು. ಈ ಹಿನ್ನೆಲೆ ಸಿದ್ದರಾಮಯ್ಯ ಮತ್ತು ಯತೀಂದ್ರ ವಿರುದ್ಧ ದೂರು ದಾಖಲಾಗಿದೆ.

ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

  • Share this:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ನೆರೆಪೀಡಿತ (Flood Effect) ಪ್ರದೇಶಗಳ ಪರಿಶೀಲನೆಗೆ ಕೊಡಗು (Kodagu) ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಕೊಡಗಿನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಮಾತ್ರವಲ್ಲ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯರ (Siddaramiah) ಕಾರಿಗೆ (Car) ಮೊಟ್ಟೆ (Egg) ಎಸೆದಿದ್ದರು. ಬಿಜೆಪಿ ಕಾರ್ಯಕರ್ತರ ನಡೆಗೆ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದರು. ಮಾತ್ರವಲ್ಲದೇ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಕೂಡ ನೀಡಿದ್ದರು. ಯತೀಂದ್ರ ಸಿದ್ದರಾಮಯ್ಯ ಕೂಡ ಮಾತನಾಡಿ ಆಕ್ರೋಶ ಹೊರಹಾಕಿದ್ದರು. ಇದೀಗ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ.

ಸಿದ್ದರಾಮಯ್ಯ ಕಾರಿನ ಮೇಲೆ ನಿನ್ನೆ ಕೊಡಗಿನಲ್ಲಿ ಮೊಟ್ಟೆ ಎಸೆಯಲಾಗಿತ್ತು. ಇದನ್ನು ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಎಲ್ಲರೂ ಖಂಡಿಸಿದ್ದರು. ನಿನ್ನೆ ಆಕ್ರೋಶದ ಭರದಲ್ಲಿ ಸಿದ್ದರಾಮಯ್ಯ ಪ್ರಚೋದನಾಕಾರಿ ಹೇಳಿಕೆ ಕೊಟ್ಟಿದ್ದರು. ಈ ಹಿನ್ನೆಲೆ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ದೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪ್ರಚೋದನಕಾರಿ ಹೇಳಿಕೆಯನ್ನು ಖಂಡಿಸಿ ದೂರು ದಾಖಲಿಸಲಾಗಿದೆ. ಮೈಸೂರಿನ ನರಸೀಪುರ ಪೊಲೀಸ್ ಠಾಣೆಗೆ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ದೂರು ನೀಡಿದ್ದಾರೆ. ಮಾತ್ರವಲ್ಲದೇ ಶಾಸಕ, ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧವೂ ದೂರು ದಾಖಲಿಸಿದ್ದಾರೆ.

ಮುಖ್ಯಮಂತ್ರಿಗೆ ಸವಾಲ್ ಹಾಕೋದು ಸರೀನಾ?

ನಿನ್ನೆ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದನ್ನು ಖಂಡಿಸಿರುವ ತೋಟದಪ್ಪ ಬಸವರಾಜು, ಮುಖ್ಯಮಂತ್ರಿ ಹಾಗೂ ಸಚಿವರು ಓಡಾಡಲು ಆಗುತ್ತದೆಯೇ ಎಂದು ಸವಾಲ್ ಹಾಕುತ್ತಾರೆ. ಒಬ್ಬ ಮುಖ್ಯಮಂತ್ರಿಗಳಿಗೆ ಈ ರೀತಿ ನೇರವಾಗಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ? ಈ ರೀತಿಯ ಪ್ರಚೋದನಕಾರಿ ಹೇಳಿಕೆ ನೀಡುವುದನ್ನ ಸಿದ್ದರಾಮಯ್ಯ ಬಿಡಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​​ನಲ್ಲಿ ಹೇಳಿದ್ದೇನು?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರುಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು ಎಂದಿದ್ದರು.

ಬಿಜೆಪಿ ಕಾರ್ಯಕರ್ತರ ಮೇಲೂ ಎಫ್ಐಆರ್

ನಿನ್ನೆ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದು ಗಲಾಟೆ ಮಾಡಿದ್ದ ಬಿಜೆಪಿ ಕಾರ್ಯಕರ್ತರ ಮೇಲೂ ಎಫ್ಐಆರ್ ದಾಖಲಾಗಿದೆ. ಮಡಿಕೇರಿ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೊಟ್ಟೆ ಎಸೆದಿದ್ದು ಕಾಂಗ್ರೆಸ್​​​ನವರೇ- ಅಪ್ಪಚ್ಚು ರಂಜನ್

ಮಡಿಕೇರಿಯಲ್ಲಿ ಮೊಟ್ಟೆ ಒಡೆದಿದ್ದು ಕಾಂಗ್ರೆಸ್ಸಿಗರೇ ಅಂತಾ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯಗೆ ಕಪ್ಪು ಬಾವುಟ ತೋರಿಸಿದ್ದು ನಮ್ಮ ಬಿಜೆಪಿ ಕಾರ್ಯಕರ್ತರೇ. ಆದರೆ ಮೊಟ್ಟೆ ಎಸೆದಿದ್ದು ನಮ್ಮ ಬಿಜೆಪಿಯ ಕಾರ್ಯಕರ್ತರಲ್ಲ. ಯಾರು ಅಂತ ಈಗಾಗಲೇ ಪೊಲೀಸರಿಗೆ ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದವರೇ ಮೊಟ್ಟೆ ಒಡೆದಿದ್ದಾರೆ ಅಂತಾ ಹೇಳಿದ್ದಾರೆ.

ಸಿದ್ದರಾಮಯ್ಯ ಕೊಡಗಿಗೆ ಬಂದು ಚುನಾವಣೆಗೆ ನಿಲ್ಲಲಿ

ಇನ್ನು ಸಿದ್ದರಾಮಯ್ಯ ಕೊಡಗಿಗೆ ಬಂದು ಚುನಾವಣೆಗೆ ನಿಲ್ಲಲಿ ಅಂತಾ ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಸವಾಲ್ ಹಾಕಿದ್ದಾರೆ. ಸಿದ್ದರಾಮಯ್ಯರ ತುಷ್ಠೀಕರಣ ನೀತಿ, ಟಿಪ್ಪು ಓಲೈಕೆ, ಟಿಪ್ಪು ಜಯಂತಿ ಮಾಡಿದ್ದಾರೆ. ಇದರ ವಿರುದ್ಧ ನಮ್ಮ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಅಷ್ಟೇ. ಬೇಕಾದ್ರೆ ಸಿದ್ದರಾಮಯ್ಯ ಕೊಡಗಿಗೆ ಬಂದು ಚುನಾವಣೆಗೆ ನಿಲ್ಲಲಿ. ಡೆಪಾಸಿಟ್ ಇಲ್ಲದಂತೆ ಅವರನ್ನು ಸೋಲಿಸಿ ಕಳುಹಿಸುತ್ತೇವೆ ಅಂತಾ ಹೇಳಿದ್ರು
Published by:Thara Kemmara
First published: