ಬೆಂಗಳೂರು: ರಾಜ್ಯದಾದ್ಯಂತ ಇಂದು ಮೊದಲ ದಿನದ SSLC ಪರೀಕ್ಷೆ ಮುಕ್ತಾಯಗೊಂಡಿದೆ. ವಿದ್ಯಾರ್ಥಿಗಳ (Karnataka) ಪಾಲಿಗೆ SSLC ಪರೀಕ್ಷೆ ಮಹತ್ವದ ಘಟ್ಟವಾಗಿದೆ. ಎಲ್ಲರೂ ಉತ್ಸುಕರಾಗಿ ಪರೀಕ್ಷೆಗೆ ಹಾಜರಾಗಿದ್ರು. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ರು. ಇದರಲ್ಲಿ 8,48,405 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೆಲ ಕಾರಣಗಳಿಂದ ಇಂದಿನ ಪರೀಕ್ಷೆಯಲ್ಲಿ 20 ಸಾವಿರ 994 ವಿದ್ಯಾರ್ಥಿಗಳು ಗೈರಾಗಿದ್ದಾರೆ. (Absent) ಇನ್ನು ಹಿಜಾಬ್ ವಿಚಾರವಾಗಿ ಹಲವೆಡೆ ಕೆಲ ಕಾಲ ಗೊಂದಲ ಕೂಡ ಏರ್ಪಟ್ಟಿತ್ತು. ಶಿಕ್ಷಣ ಇಲಾಖೆ ಕೂಡ ಯಶಸ್ವಿಯಾಗಿ ಕೋವಿಡ್ ನಿಯಮಾವಳಿಗಳೊಂದಿಗೆ (Covid19 Rules) ಮೊದಲ ದಿನದ ಪರೀಕ್ಷೆ ನಡೆಸಿದೆ.
ಹೃದಯಾಘಾತದಿಂದ ವಿದ್ಯಾರ್ಥಿ ಸಾವು
ಮೈಸೂರಿನ ಟಿ ನರಸೀಪುರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಮುಂದಾಗಿದ್ದಳು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾಳೆ. ತಕ್ಷಣ ಆಕೆಗೆ ಚಿಕಿತ್ಸೆ ನೀಡಿದ್ರು ಅದು ಪ್ರಯೋಜವಾಗಿಲ್ಲ. ವಿದ್ಯಾರ್ಥಿನಿ ಅನುಶ್ರೀ ಟಿ ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದವಳಾಗಿದ್ದು, ಈಕೆ ಮಾದಾಪುರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಆಗಮಿಸಿದ್ದಳು.
ವಿದ್ಯಾರ್ಥಿನಿ ಆರೋಗ್ಯವಾಗಿದ್ದು, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪರೀಕ್ಷೆ ಬರೆಯಲು ಆರಂಭಿಸಿದ್ದಳು. ಪರೀಕ್ಷೆ ಬರೆಯುವ ವೇಳೆ ಆಕೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಸಿಬ್ಬಂದಿಗಳು ಆಕೆಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: SSLC Student ಫೋಟೋಗೆ ಹಾರ ಹಾಕಿ ತಿಥಿ ಕಾರ್ಯ! ಇದೇನು ವಾಮಾಚಾರವೋ? ಕಿಡಿಗೇಡಿಗಳ ಕೃತ್ಯವೋ?
ಹಿಜಾಬ್ ಧರಿಸಿಯೇ ಪರೀಕ್ಷೆ ಬರೆದ ವಿದ್ಯಾರ್ಥಿ
ಕೆಲವೆಡೆ ಕೆಲವು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಹಿಜಾಬ್ ಧರಿಸಿಯೇ ಪ್ರವೇಶಿಸಿದ್ದು ಬಳಿಕ ಹಿಜಾಬ್ ತೆಗೆಸಲಾಗಿದೆ. ಇನ್ನು ಬಾಗಲಕೋಟೆಯಲ್ಲಿ ಹಿಜಾಬ್ ಹಾಕಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇನ್ನು ಕೆಲವೆಡೆ ಮನೆಯಿಂದ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿಗಳು ಶಾಲೆಗೆ ಪ್ರವೇಶಿಸುತ್ತಿದ್ದಂತೆ ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ಒಳಗೆ ಹೋಗಿದ್ದಾರೆ
4 ತಿಂಗಳ ಮಗುವಿನೊಂದಿಗೆ ಪರೀಕ್ಷೆಗೆ ಹಾಜರು
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆಯೊಬ್ಬರು ನಾಲ್ಕು ತಿಂಗಳ ಹಸುಗೂಸಿನೊಂದಿಗೆ ಪರೀಕ್ಷೆಗೆ ಹಾಜರಾದ್ರು. ಬಾಹ್ಯ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷಾ ಕೇಂದ್ರದ ವ್ಯವಸ್ಥೆ ಮಾಡಲಾಗಿತ್ತು. ತಸ್ಲಿಮಾ ಮಕಾನದಾರ ಎಂಬ ಮಹಿಳೆ ನಾಲ್ಕು ತಿಂಗಳ ಮಗುವಿನೊಂದಿಗೆ ಪರೀಕ್ಷೆಗೆ ಹಾಜರಾದ್ರು. ಇತ್ತ ಕೊಠಡಿಯಲ್ಲಿ ಕೂತು ಪರೀಕ್ಷೆ ಬರೆದ್ರು. ಪರೀಕ್ಷಾ ಕೊಠಡಿಯ ಹೊರಗೆ ಆಶಾ ಕಾರ್ಯಕರ್ತೆ ಹಾಗೂ ಸ್ಕೌಟ್ಸ್ ಗೈಡ್ಸ್ ಸಿಬ್ಬಂದಿ ಮಗುವಿನ ಆರೈಕೆ ಮಾಡಿದ್ರು.
ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ
ಇನ್ನು ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಮೇರಿ ಇನ್ ಮಾಕ್ಯುಲೆಟ್ ಹೈಸ್ಕೂಲ್ ಬಳಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವೇಳೆ ಜೇನು ದಾಳಿ ನಡೆಸಿದೆ. ಘಟನೆಯಲ್ಲಿ ಆರು ಜನ ವಿದ್ಯಾರ್ಥಿಗಳಿಗೆ ಹಾಗೂ 12 ಜನ ಪೋಷಕರಿಗೆ ಜೇನು ದಾಳಿ ಒಳಗಾಗಿದ್ದಾರೆ. ಅವರು ತಕ್ಷಣಕ್ಕೆ ಚಿಕಿತ್ಸೆ ಪಡೆದು ಪರೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಪೋಷಕರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ SSLC ಪರೀಕ್ಷೆ ಆರಂಭ: Hijab ಧರಿಸಿ ಬಂದ್ರೆ ನೋ ಎಂಟ್ರಿ
ನಕಲಿ ವಿದ್ಯಾರ್ಥಿಗಳು ವಶ
ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ಅಕ್ರಮ ನಡೆಸಲು ಮುಂದಾಗಿದ್ದ ಆರು ಜನರನ್ನು ಚಿಕ್ಕೋಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಭ್ಯರ್ಥಿಗಳ ಪರವಾಗಿ ಬೇರೆಯವರು ಪರೀಕ್ಷೆ ಬರೆಯಲು ಆಗಮಿಸಿದ್ದರು. ಇದನ್ನು ತಿಳಿದು ಈ ಕೃತ್ಯ ಎಸಗಿದ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್.ಡಿ ಕಾಲೇಜಿನ ಪರೀಕ್ಷೆ ಹಾಜರಾಗಿದ್ದರು ಈ ಆರು ಜನ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಪರಿಶೀಲನೆ ನಡೆಸಿದಾಗ ಇವರು ಅಕ್ರಮ ಎಸಗಿದ್ದು ಬಯಲಾಗಿದೆ. ತಕ್ಷಣಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಅವರನ್ನು ವಿಚಾರಣೆ ನಡೆಸಲಾಗಿದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ