PM Modi @Bengaluru: ಪ್ರಧಾನಿಗಳಿಗೆ ಮುತ್ತಿಗೆ ಹಾಕಲು ಹೊರಟ್ಟಿದ್ದವರ ಬಂಧನ; ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ರು ಮೋದಿ

10ಕ್ಕೂ ಹೆಚ್ಚು ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು (Congress Activist) ಬೆಂಗಳೂರಿನತ್ತ ಹೊರಡಲು ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಸೇರಿದ್ದರು.

ಪ್ರಧಾನಿ ಮೋದಿ

ಪ್ರಧಾನಿ ಮೋದಿ

  • Share this:
ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಮುತ್ತಿಗೆ ಹಾಕಲು ಹೊರಟಿದ್ದವರನ್ನು ಚಿಕ್ಕಮಗಳೂರು ಪೊಲೀಸರು (Chikkamagaluru Police) ವಶಕ್ಕೆ ಪಡೆದುಕೊಂಡಿದ್ದಾರೆ. ಕೆಪಿಸಿಸಿ ಕಿಸಾನ್ ಸೆಲ್ (KPCC Kisan Cell) ಅಧ್ಯಕ್ಷ ಸೇರಿದಂತೆ 30ಕ್ಕೂ ಹೆಚ್ಚು ಜನರ ಬಂಧನ ಮಾಡಲಾಗಿ ದೆ. ಈ ಎಲ್ಲಾ ಕಾರ್ಯಕರ್ತರು ಮೋದಿ ಗೋ ಬ್ಯಾಕ್ (Modi Go Back) ಘೋಷಣೆ ಕೂಗಲು ಪ್ಲಾನ್ ಮಾಡಿಕೊಂಡಿದ್ದರು. 10ಕ್ಕೂ ಹೆಚ್ಚು ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು (Congress Activist) ಬೆಂಗಳೂರಿನತ್ತ ಹೊರಡಲು ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಸೇರಿದ್ದರು. ವಿಷಯ ತಿಳಿದ ಪೊಲೀಸರು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ತಮ್ಮ ಬಂಧನ ಮಾಡಿದ್ದಕ್ಕೆ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ರು ಮೋದಿ

ಇನ್ನೂ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಪ್ರಧಾನಿಗಳು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಐಐಎಸ್ ಸಿ ಬೆಂಗಳೂರಿನಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ 'ಸುಗಮ ಜೀವನ'ಕ್ಕೆ ನೆರವಾಗಲಿದೆ.

ಇದನ್ನೂ ಓದಿ:  PM Modi: ಕಾಂಗ್ರೆಸ್ ಸಾಧನೆ ಹೇಳಿ ಪ್ರಧಾನಿಗಳನ್ನು ಸಿದ್ದರಾಮಯ್ಯ ಸ್ವಾಗತಿಸಿದ್ದು ಹೀಗೆ ನೋಡಿ

ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ ಎಂದು ಹೇಳಿದ್ದಾರೆ.

ಸಂಜೆ 6 ಗಂಟೆಗೆ ಸಂವಾದ

ಬೆಂಗಳೂರಿನಿಂದ ನೇರವಾಗಿ ಪ್ರಧಾನಿಗಳು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ನರೇಂದ್ರ ಮೋದಿ ಅವರನ್ನ ಸ್ವಾಗತಿಸಲು ಸಾಂಸ್ಕೃತಿಕ ನಗರಿ ಸಿದ್ಧವಾಗಿದೆ. ಸಂಜೆ 6 ಗಂಟೆ ವೇಳೆ ನಗರದ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಲಿದ್ದ್ದು, ಅಲ್ಲಿ ಕೇಂದ್ರ ಸರ್ಕಾರದ ಪಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ. ಬಳಿಕ 7:30ಕ್ಕೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ಕೊಡಲಿದ್ದಾರೆ.

ನಂತರ ರಾತ್ರಿ 8:15ರ ವೇಳೆಗೆ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆಯಲಿದ್ದಾರೆ. ಚಾಮುಂಡಿ ತಾಯಿಯ ದರ್ಶನ ಬಳಿಕ ಎಂ. ಜಿ ರಸ್ತೆಯ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ ಯೋಗ ದಿನದಲ್ಲಿ ಭಾಗಿ

ನಾಳೆ ಬೆಳಗ್ಗೆ 6:30ಕ್ಕೆ ಅರಮನೆ ಅಂಗಳದಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ 8 ಗಂಟೆಗೆ ದಸರಾ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಯೋಗಕ್ಕೆ ಸಂಬಂಧಿಸಿದ ವಸ್ತುಗಳ ವೀಕ್ಷಣೆ ಮಾಡಲಿದ್ದಾರೆ. ತದನಂತರ ಬಳಿಕ ರಾಜ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿ ಉಪಹಾರ ಸೇವಿಸಲಿದ್ದಾರೆ. ನಾಳೆ ಬೆಳಗ್ಗೆ 9:5ಕ್ಕೆ ಅರಮನೆಯಿಂದ ಹೊರಬಂದು ನಂತರ ಮೈಸೂರು ಏರ್ ಪೋರ್ಟ್ ನಿಂದ ಬೆಳಗ್ಗೆ 9:20ಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಕಾರ್, ಬಸ್ ನಡುವೆ ಅಪಘಾತ, ಇಬ್ಬರ ಸಾವು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಕೆರೆ ಏರಿ ಮೇಲೆ ಕಾರ್ ಮತ್ತು ಸಾರಿಗೆ ಬಸ್ ನಡುವೆ ಬೆಳಗಿನ ಜಾವ ಸುಮಾರು 5.30ಕ್ಕೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದು, ಗಾಯಾಳುಗಳನ್ನು ಗುಬ್ಬಿ ಹಾಗೂ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಗಿರೀಶ್(37), ಮಾನ್ಯ(17) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:  PM Modi: ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ ಸೂಚಿಸಿದ ಪೊಲೀಸರು

ಮೃತರು ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದವರು ಎಂದು ತಿಳಿದು ಬಂದಿದೆ. 21 ವರ್ಷ ರಾಕೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Published by:Mahmadrafik K
First published: