ಗೋವಾ ವಿಚಾರ ಪ್ರಸ್ತಾಪಿಸಿ ಸರ್ಕಾರ ರಚನೆಗೆ ಜೆಡಿಎಸ್-ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ಮನವಿ


Updated:May 16, 2018, 6:21 PM IST
ಗೋವಾ ವಿಚಾರ ಪ್ರಸ್ತಾಪಿಸಿ ಸರ್ಕಾರ ರಚನೆಗೆ ಜೆಡಿಎಸ್-ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

Updated: May 16, 2018, 6:21 PM IST
-ನ್ಯೂಸ್ 18 ಕನ್ನಡ

ಬೆಂಗಳೂರು(ಮೇ.16): ಸರ್ಕಾರ ರಚನೆಗೆ ರಾಜ್ಯದ ಮೂರೂ ಪ್ರಮುಖ ಪಕ್ಷಗಳು ಕದಸರತ್ತು ನಡೆಸಿವೆ. ನಿಗದಿಯಂತೆ ರಾಜ್ಯಪಾಲರನ್ನ ಭೇಟಿಯಾದ ಕುಮಾರಸ್ವಾಮಿ ಮತ್ತು ಕಜಿ. ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಿಯೋಗ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದ್ಧಅರೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಸಾಂವಿಧಾನಬದ್ಧವಾಗಿ ಮತ್ತು ಕಾನೂನಾತ್ಮಕವಾಗಿ ನಿರ್ಧಾರ ಕೈಗೊಂಡಿರುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ. ಗೋವಾ, ಮಣಿಪುರ, ಮೀಜೋರಾಂಗಲಲ್ಲಿ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಅನುಮತಿ ನೀಡಿದ ವಿಷಯವನ್ನೂ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ನಮ್ಮ ಮನವಿ ಪುರಸ್ಕರಿಸಿರುವ ರಾಜ್ಯಪಾಲರು ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನಿಡಿದ್ದಾರೆ ಎಂದು ತಿಳಿಸಿದ್ದಾರೆ.

ಇದೇವೇಳೆ, ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಎರಡೂ ಪಕ್ಷಗಳು ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನ ರಾಜ್ಯಪಾಲರಿಗೆ ನೀಡಲಾಗಿದೆ. ಎರಡೂ ಪಕ್ಷಗಳು ನಾಯಕರೂ ರಾಜ್ಯಪಾಲರನ್ನ ಭೇಟಿ ಮಾಡಿ ಶಾಸಕರ ಪಟ್ಟಿಯನ್ನ ರಾಜ್ಯಪಾಲರಿಗೆ ನೀಡಿದ್ದೇವೆ. 117ಶಾಸಕರ ಪಟ್ಟಿಯನ್ನ ರಾಜ್ಯಪಾಲರಿಗೆ ಕೊಟ್ಟಿದ್ದೇವೆ‌. ರಾಜ್ಯದಲ್ಲಿ ಬಹುಮತ ಇರುವ ಪಕ್ಷಗಳಿಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಾಂವಿಧಾನಿಕವಾಗಿ ಸರ್ಕಾರ ರಚನೆ ಮಾಡುವ ಕುರಿತಂತೆ ದೆಹಲಿ ನಾಯಕರು ರಾಜ್ಯಪಾಲರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸಾಂವಿಧಾನಿಕವಾಗಿ ಸರ್ಕಾತ ರಚನೆ ಮಾಡುವ ಭರವಸೆಯನ್ನ ರಾಜ್ಯಪಾಲರು ನೀಡಿರುವುದಾಗಿ ತಿಳಿಸಿದ್ದಾರೆ.

ದೇಶದ ಹಲವು ರಾಜ್ಯಗಳಲ್ಲಿ ಏಕೈಕ ದೊಡ್ಡ ಪಕ್ಷಕ್ಕೆ ಸರ್ಕಾರ ರಚನೆಗೆ ಅವಕಾಶ ನೀಡಿಲ್ಲ. ಮೈತ್ರಿಕೂಟದ ಬಹುಮತಕ್ಕೆ ಮನ್ನಣೆ ನೀಡಲಾಗಿದೆ. ಗೋವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ರಾಜ್ಯಪಾಲರಿಗೆ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕಾನೂನಿನ ಆಧಾರದ ಮೇಲೆ ನಿರ್ಧಾರ  ಮಾಡುವುದಾಗಿ ರಾಜ್ಯಪಾಲರು ಭರವಸೆ ನಿಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
First published:May 16, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ