Sindagi And Hangal By Election: 2 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್; ಆಪ್ತನಿಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಮೆಲುಗೈ

ವಿಜಯಪುರದ ಸಿಂಧಗಿಗೆ ಅಶೋಕ್ ಮನಗೂಳಿ ಅವರಿಗೆ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಶ್ರೀನಿವಾಸ್ ಮಾನೆಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೋದಲೇ ನಿರ್ಧರಿಸಿದ್ದಂತೆ ಸಿಂಧಗಿಗೆ ಅಶೋಕ್ ಮನಗೂಳಿಗೆ ಟಿಕೆಟ್ ನೀಡಲಾಗಿದೆ. ಇನ್ನು ತಮ್ಮ ಆಪ್ತ ಶ್ರೀನಿವಾಸ ಮಾನೆಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಶ್ರೀನಿವಾಸ್ ಮಾನೆ, ಅಶೋಕ್ ಮನಗೂಳಿ

ಶ್ರೀನಿವಾಸ್ ಮಾನೆ, ಅಶೋಕ್ ಮನಗೂಳಿ

  • Share this:
    Sindagi And Hangal By Election ಬೆಂಗಳೂರು:  ರಾಜ್ಯದ ಹಾನಗಲ್ (Hanagal) ಹಾಗೂ ಸಿಂದಗಿ ಕ್ಷೇತ್ರಗಳ (Sindagi) ಉಪ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದಾಗಿ ಹಾವೇರಿಯ ಹಾನಗಲ್ ಕ್ಷೇತ್ರ ತೆರವಾಗಿತ್ತು. ಇತ್ತ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ (M C Managooli) ನಿಧನದಿಂದಾಗಿ ವಿಜಯಪುರದ ಸಿಂದಗಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು (Political Developments) ಗರಿಗೆದರಿದ್ದು, ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಈಗಾಗಲೇ ಎರಡು ಕ್ಷೇತ್ರಗಳಿಗೆ ಜೆಡಿಎಸ್ ಇಬ್ಬರು ಅಭ್ಯರ್ಥಿಗಳು ಯಾರೆಂದು ಘೋಷಣೆ ಮಾಡಿತ್ತು. ಇದೀಗ ಕಾಂಗ್ರೆಸ್ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.


    ವಿಜಯಪುರದ ಸಿಂದಗಿಗೆ ಅಶೋಕ್ ಮನಗೂಳಿ (Ashok Managoli) ಅವರಿಗೆ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಶ್ರೀನಿವಾಸ್ ಮಾನೆಗೆ (Srinivasa Mane) ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೋದಲೇ ನಿರ್ಧರಿಸಿದ್ದಂತೆ ಸಿಂಧಗಿಗೆ ಅಶೋಕ್ ಮನಗೂಳಿಗೆ ಟಿಕೆಟ್ ನೀಡಲಾಗಿದೆ. ಇನ್ನು ತಮ್ಮ ಆಪ್ತ ಶ್ರೀನಿವಾಸ ಮಾನೆಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದು, ಈ ಮೂಲಕ ಟಿಕೆಟ್ ಹಂಚಿಕೆಯಲ್ಲಿ ಮೆಲುಗೈ ಸಾಧಿಸಿದ್ದಾರೆ. ಹಾನಗಲ್ ಕ್ಷೇತ್ರದಿಂದ ಮನೋಹರ ತಹಶೀಲ್ದಾರ್ ಪರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಲಾಬಿ ಮಾಡಿದ್ದರು. ಆದರೆ, ಸಿದ್ದರಾಮಯ್ಯ ಮಾತಿಗೆ ಹೈಕಮಾಂಡ್ ಅಸ್ತು ಅಂದಿದೆ.

    ವಿಜಯಪುರ ಜಿಲ್ಲೆಯ ಸಿಂದಗಿ ಬೈಎಲೆಕ್ಷನ್​ನಲ್ಲಿ ಶಾಸಕ ಎಂ. ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು 'ಕೈ' ಅಭ್ಯರ್ಥಿಯಾಗಿ ಈ ಹಿಂದೆಯೇ ಘೋಷಣೆ ಮಾಡಿತ್ತು. ಸಿಂದಗಿ ಜೆಡಿಎಸ್ ಶಾಸಕರಾಗಿದ್ದ ಎಂಸಿ ಮನಗೂಳಿ ನಿಧನದ ಬಳಿಕ, ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಜೆಡಿಎಸ್ ಟಿಕೆಟ್ ಫಿಕ್ಸ್ ಎಂದು ಹೇಳಲಾಗಿತ್ತು. ಆದರೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಯಾವುದೇ ಸ್ಪಷ್ಟನೆ ನೀಡಲಿಲ್ಲ. ಇದರಿಂದ ಬೇಸರಗೊಂಡ ಅಶೋಕ ಮನಗೂಳಿ ಮಾರ್ಚ್ 9ರಂದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದರು.

    ಜೆಡಿಎಸ್​ನಿಂದ ಅಲ್ಪಸಂಖ್ಯಾತ ಅಭ್ಯರ್ಥಿಗಳು ಕಣಕ್ಕೆ

    2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ (JDS) ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ (Sindagi By Election JDS Candidate Najeya Shakila Angadi) ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಮತ್ತೋರ್ವ ಅಲ್ಪಸಂಖ್ಯಾತ ಅಭ್ಯರ್ಥಿ ನಿಯಾಜ್ ಶೇಕ್ (Hangal JDS Candidate Niyaz Shaikh) ಅವರನ್ನು ಕಣಕ್ಕೆ ಇಳಿಸಿದೆ. ಈ ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ.

    ಇದನ್ನು ಓದಿ: JDS Candidates: ಎರಡು ಕ್ಷೇತ್ರಗಳಿಗೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ ಜೆಡಿಎಸ್; ಸಿಂಧಗಿಗೆ ಶಕೀಲಾ, ಹಾನಗಲ್​ನಿಂದ ನಿಯಾಜ್ ಸ್ಪರ್ಧೆ!

    ಜೆಡಿಎಸ್ ಅಭ್ಯರ್ಥಿಗಳಿಂದ ಮತ ವಿಭಜನೆ

    ಎರಡು ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದ ಓಟುಗಳು ನಿರ್ಣಾಯಕವಾಗಿವೆ. ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ನಿಲ್ಲಿಸಿರುವುದರಿಂದ ಕಾಂಗ್ರೆಸ್ ಮತಗಳು ವಿಭಜನೆ ಆಗಲಿವೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕರು, ಜೆಡಿಎಸ್ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ ಎಂದು ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕುಮಾರಸ್ವಾಮಿ ಅವರು, ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಇವರನ್ನು ಕೇಳಿಕೊಂಡು ನಿಲ್ಲಿಸಬೇಕಾ ಎಂದು ಹೇಳಿದ್ದರು.
    Published by:HR Ramesh
    First published: