Karnataka Politics: ರಾಜ್ಯಕ್ಕೆ ಬರಲಿರುವ ಮೋದಿ ಎದುರು 12 ಪ್ರಶ್ನೆಗಳನ್ನು ಹಿಡಿದು ನಿಂತ ಕಾಂಗ್ರೆಸ್, ಏನು ಆ ಪ್ರಶ್ನೆಗಳು?

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ನೀವು ಹೇಳಿದಿರಿ, ಆದರೆ ರಾಜ್ಯದಲ್ಲಿ ಹಿಜಾಬ್, ಆಜಾನ್, ಆರ್ಥಿಕ ಜಿಹಾದ್ ಹೆಸರಿನಲ್ಲಿ ಅಲ್ಪ ಸಂಖ್ಯಾತರ ಮೇಲೆ ಕೋಮು ದೌರ್ಜನ್ಯ ನಡೆಯುತ್ತಿದ್ದು, ಈ ವಿಚಾರದಲ್ಲಿ ನಿಮ್ಮ ನಿಲುವೇನು?

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ

  • Share this:
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Modi) ರಾಜ್ಯ ಪ್ರವಾಸ ಹಿನ್ನೆಲೆ ಕೆಪಿಸಿಸಿ (KPCC) ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿ (Congress Pressmeet) ನಡೆಸಿದರು. ಬೆಂಗಳೂರಿನ ಮಾಜಿ ಮೇಯರ್ ಗಳ ನೇತೃತ್ವದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy), ಪ್ರಧಾನಿ ಮೋದಿ ಎದುರು ಡಜನ್ ಪ್ರಶ್ನೆಗಳನ್ನು ಇಟ್ಟರು. ಮೋದಿ ಕಳೆದ ಬಾರಿ ಚುನಾವಣೆ ಪ್ರಚಾರದಲ್ಲಿ ಎಸ್​ಬಿಎಂ ಬಗ್ಗೆ ಮಾತನಾಡಿದ್ದರು. ಸೋಮಶೇಖರ್, ಭೈರತಿ ಬಸವರಾಜು, ಮುನಿರತ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಈಗ ಅವರೇ ಮೋದಿ ಭಾಗವಹಿಸುವ ವೇದಿಕೆಯಲ್ಲಿರುತ್ತಾರೆ. ಈ ಬಗ್ಗೆ ‌ಮೋದಿ ಅವರೇ ಹೇಳಬೇಕು. ಕೊರೊನಾ ಹೆಚ್ಚಳ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮೋದಿ ಅವರ ಕಾರ್ಯಕ್ರಮಕ್ಕೆ ಹೋಗಬಾರದು ಎಂದು ತಿರುಗೇಟು ನೀಡಿದರು. ಪ್ರಧಾನಿ ಮೋದಿ ಎದುರು ರಾಜ್ಯ ಕಾಂಗ್ರೆಸ್​ ಇಟ್ಟಿರುವ ಆ 12 ಪ್ರಶ್ನೆಗಳು ಯಾವುವು ಅಂತ ನೋಡೋದಾದರೆ..

ಮೋದಿ ಅವರಿಗೆ ಡಜನ್ ಪ್ರಶ್ನೆಗಳು 

1) ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ, ಅಂದರೆ 2018 ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್ ಸರ್ಕಾರ 10 % ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದೀರಿ. ಈಗ ರಾಜ್ಯದ ನಿಮ್ಮ ಸರ್ಕಾರ 40 % ಸರ್ಕಾರ ಎಂದು ವಿಶ್ವವಿದ್ಯಾ ನಡೆದಿದ್ದು, ಈ ಅಮೋಘ ಸಾಧನೆ ಬಗ್ಗೆ, ಅಭಿಪ್ರಾಯವೇನು?

2) ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ, ಅವರು ಹಾಗೂ ಆತ್ಮಹತೆಗೂ ಮುನ್ನ ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ 40 % ಕಮಿಷನ್ ಕಿರುಕುಳ ಕುರಿತು ಸನಿಮಗೆ ಪತ್ರ ಬರೆದರೂ ನೀವು ಮೌನಿ ಬಾಬಾ ಆಗಿದ್ದು ಯಾಕೆ...?

3) ಪಿಎಸ್‌ಐ, ಶಿಕ್ಷಕರು, ಆರೋಗ್ಯ, ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ.., ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು, ಪ್ರಕರಣ ದಾಖಲಿಸುವುದು ಮಾತ್ರವೇ?

4) 2022 ರ ವೇಳೆಗೆ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ನೀವು ಹೇಳಿದ ಮಾತು ನೆನಪಿದೆಯೇ? ರೈತರ ಆದಾಯದ ಬದಲು ರಸಗೊಬ್ಬರ, ಯಂತ್ರೋಪಕರಣಗಳ ಬಳಕೆ ವೆಚ್ಚ ಡಬಲ್ ಆಗಿರುವುದರ ಬಗ್ಗೆ ಎನು ಹೇಳುತ್ತೀರಿ ಮೋದಿಯವರೇ?

ಇದನ್ನೂ ಓದಿ: Mysore Palace: ನಾಳೆ ಮೈಸೂರು ಅರಮನೆಗೆ ಹೋಗ್ತಿದ್ದೀರಾ? ಜೂನ್ 21ರವರೆಗೂ ಪ್ಯಾಲೇಸ್‌ಗೆ ನೋ ಎಂಟ್ರಿ!

5) ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ನೀವು ಹೇಳಿದಿರಿ, ಆದರೆ ರಾಜ್ಯದಲ್ಲಿ ಹಿಜಾಬ್, ಆಜಾನ್, ಆರ್ಥಿಕ ಜಿಹಾದ್ ಹೆಸರಿನಲ್ಲಿ ಅಲ್ಪ ಸಂಖ್ಯಾತರ ಮೇಲೆ ಕೋಮು ದೌರ್ಜನ್ಯ ನಡೆಯುತ್ತಿದ್ದು, ಈ ವಿಚಾರದಲ್ಲಿ ನಿಮ್ಮ ನಿಲುವೇನು?

6) ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸಲಿದೆ ಎಂದು ಬೀಗದಿರಿ ಅಲ್ಲವೇ? ರಾಜ್ಯದಲ್ಲಿ ನಿಮ್ಮ ಸರ್ಕಾರದ 5 ಸಾಧನೆ ಪಟ್ಟಿ ನೀಡುವಿರಾ?

7) ಕೋವಿಡ್ ಸಮಯದಲ್ಲಿ ನೀವು ಹೇಳಿದಂತೆ ಜಾಗಟೆ ಬಾರಿಸಿ, ಚಪ್ಪಾಳೆ ಹೊಡೆದು, ದೀಪ ಹಚ್ಚಿದೆವು, ಆದರೆ ತುರ್ತು ಸಮಯದಲ್ಲಿ ಆಕ್ಸಿಜನ್ ಪೂರೈಸದೇ ರಾಜ್ಯದ ಚಾಮರಾಜನಗರದಲ್ಲಿ 34 ಮಂದಿ ಪ್ರಾಣ ನುಂಗಿದ್ದು ಯಾಕೆ? ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತೆ ಇಲ್ಲ ಎಂದು ನಿಮಗೆ ಸುಳ್ಳು ವರದಿ ಕೊಟ್ಟ ನಿಮ್ಮ ಸರ್ಕಾರದ ವಿರುದ್ಧ ಕ್ರಮ ಇಲ್ಲ ಯಾಕೆ? ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ಗೆ ಬಲಿಯಾಗಿದ್ದರೂ 40 ಸಾವಿರ ಎಂದು ಸುಳ್ಳು ಲೆಕ್ಕ ತೋರಿದು ಯಾಕೆ?

8)  ಮತಬ್ಯಾಂಕ್ ಸೆಳೆಯಲು ಬಸವಣ್ಣ, ಅಂಬೇಡ್ಕರ್, ಬುದ್ಧ, ಭಗತ್ ಸಿಂಗ್, ನಾರಾಯಣ ಗುರು, ಕನಕದಾಸರು. ಮಹಾವೀರರು ಸೇರಿದಂತೆ ಮಹನೀಯರ ಜನ ಮಾಡುತ್ತೀರಿ. ಆದರೆ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ಈ ಮಹನೀಯರಿಗೆ ಅವಮಾನ ಮಾಡಿದ್ದು, ಈ ಬಗ್ಗೆ ನಿಮ್ಮ ಸಬುಬೂ ಏನು?

9) ಮೇಕೆದಾಟು ಹಾಗೂ ಮಹದಾಯಿ ನಮ್ಮ ರಾಜ್ಯಕ್ಕೆ ಅಗತ್ಯವಿರುವ ಎರಡು ಪ್ರಮುಖ ನೀರಾವರಿ ಯೋಜನೆ. ಈ ಯೋಜನೆಗೆ ಯಾವಾಗ ಅನುಮತಿ ಕೊಡಿಸುವಿರಿ?

10)  ಕಾಂಗ್ರೆಸ್‌ ಪ್ರತಿಭಟನೆಯಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ನಿಮ್ಮ ಸಚಿವ ಸುಧಾಕರ ಹೇಳುತ್ತಿದ್ದಾರೆ. ನೀವು ಬೆಂಗಳೂರಿನಲ್ಲಿ 12 km ಯಾತ್ರೆ ಮಾಡುತ್ತಿದ್ದೀರಿ, 50 ಸಾವಿರ ಜನರನ್ನು ಸೇರಿಸಿ ಸಾರ್ವಜನಿಕ ಸಭೆ ಮಾಡುತ್ತಿದ್ದೀರಿ, 12 ಸಾವಿರಕ್ಕೂ ಹೆಚ್ಚು ಜನರ ಜತೆ ಮೈಸೂರಿನಲ್ಲಿ ಯೋಗ ಮಾಡಲಿದ್ದೀರಿ. ನಿಮ್ಮ ಈ ಕಾರ್ಯಕ್ರಮಗಳಿಂದ ಕೊರೋನಾ ಹರಡುವುದಿಲ್ಲವೇ?

11) ಕಳೆದ ಎಂಟು ವರ್ಷದಿಂದ ರಾಜ್ಯದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಮೂಲಕ 19 ಲಕ್ಷ ಕೋಟಿ ಸಂಗ್ರಹವಾಗಿದ್ದು, ವಿವಿಧ ಯೋಜನೆಗಳ ಮೂಲಕ ಕೊಟ್ಟಿರೋದು ಕೇವಲ 4.5 ಲಕ್ಷ ಕೋಟಿ.  ಇನ್ನೂ ರಾಜ್ಯದ ಜಿಎಸ್ ಟಿ ಪಾಲು ನೀಡದೆ ಸಾಲ ನೀಡಿ, ಕನ್ನಡಿಗರನ್ನು ಸಾಲಗಾರರನ್ನಾಗಿ ಮಾಡುತ್ತಿರುವುದೇಕೆ? ರಾಜ್ಯಕ್ಕೆ ಈ ರೀತಿ ಅನ್ಯಾಯ ಮಾಡುತ್ತಿರುವುದೇಕೆ..?

12) ಅಂದಹಾಗೆ ಪ್ರಧಾನಿಗಳೇ... ಮತ್ತೊಂದು ಪ್ರಮುಖ ವಿಷಯ, ಬೆಂಗಳೂರಿನ 15 ಬಿಜೆಪಿ ಶಾಸಕರಿಗೆ ನಿಮ್ಮ ಸರ್ಕಾರ 79890 ಕೋಟಿ ಅನುದಾನ ನೀಡಿದರೆ, ಕಾಂಗ್ರೆಸ್ ನ 12 ಶಾಸಕರಿಗೆ 72165 ಕೋಟಿ ಮಾತ್ರ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಯಲ್ಲಿ ರಾಜಕೀಯ ತಾರತಮ್ಯ ಎಷ್ಟು ಸರಿ...?

ಬೆಂಗಳೂರು ರಸ್ತೆಗುಂಡಿ ಮುಚ್ಚುವ ಸಂಬಂಧ ಹೈಕೋರ್ಟ್‌ ಏಷ್ಟೇ ಚಾಟಿ ಬೀಸಿದರು. ನಿಮ್ಮ ಸರಕಾರ, ಬಿಬಿಎಂಪಿ ಎಚ್ಚೆತ್ತುಕೊಂಡಿರಲಿಲ್ಲ. ಕೊನೆಗೆ ಕೋರ್ಟ್‌ ನಿರ್ದೇಶನದಂತೆ ಪಾಲಿಕೆ ನಡೆಯಬೇಕಾದ ಸ್ಥಿತಿ ಬಂತು. ಈಗ ನೀವು ಬೆಂಗಳೂರಲ್ಲಿ ಯಾತ್ರೆ ಮಾಡುವ 12 ಕಿಮೀ ರಸ್ತೆ ಹೊಳೆಯುವಂತೆ ಮಾಡಿದ್ದಾರೆ.  ದಯವಿಟ್ಟು ನಿಮಗೊಂದು ಕಳಕಳಿಯ ಮನವಿ, ಇಡೀ ಬೆಂಗಳೂರು ಒಂದು ರೌಂಡ್ ಬರುವ ಕಾರ್ಯಕ್ರಮ ಹಾಕಿಕೊಳ್ಳಿ  ಆಗ ಎಲ್ಲ ರಸ್ತೆಗಳೂ ದುರಸ್ತಿ ಆಗುತ್ತವೆ. ನಗರದ ಜನ ನಿಮಗೆ ಅಭಾರಿ ಆಗಿರುತ್ತಾರೆ ಎಂದು ರಾಜ್ಯ ಕಾಂಗ್ರೆಸ್​​ ಸರಣಿ ಆರೋಪಗಳೊಂದಿಗೆ ಪ್ರಶ್ನಿಸಿದೆ.
Published by:Kavya V
First published: