HOME » NEWS » State » CONGRESS BYELECTION CANDIDATES TB JAYACHANDRA FOR SIRA ASSEMBLY AND KUSUMA HANUMANTHAPPA FOR RR NAGAR SCT

ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆ; ಶಿರಾದಲ್ಲಿ ಟಿ.ಬಿ. ಜಯಚಂದ್ರ, ಆರ್​ಆರ್​ ನಗರದಲ್ಲಿ ಕುಸುಮಾ ಸ್ಪರ್ಧೆ

Karnataka Assembly Bypolls: ಶಿರಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಹಾಗೂ ಆರ್​.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದ ಐಎಎಸ್​ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ನ. 3ರಂದು ಉಪಚುನಾವಣೆ ನಡೆಯಲಿದೆ.

news18-kannada
Updated:October 7, 2020, 2:43 PM IST
ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆ; ಶಿರಾದಲ್ಲಿ ಟಿ.ಬಿ. ಜಯಚಂದ್ರ, ಆರ್​ಆರ್​ ನಗರದಲ್ಲಿ ಕುಸುಮಾ ಸ್ಪರ್ಧೆ
ಟಿ.ಬಿ. ಜಯಚಂದ್ರ, ಕುಸುಮಾ
  • Share this:
ನವದೆಹಲಿ (ಅ. 7): ಜೆಡಿಎಸ್​ ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರ ಹಾಗೂ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಗಳಿಗೆ ನ. 3ರಂದು ಉಪಚುನಾವಣೆ ನಡೆಯಲಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಶಿರಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಹಾಗೂ ಆರ್​.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದ ಐಎಎಸ್​ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ಇಂದು ಎಐಸಿಸಿ ಅಧಿಕೃತವಾಗಿ ತನ್ನ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಆರ್​ಆರ್​ ನಗರದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುನಿರತ್ನ ಗೆಲುವು ಸಾಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ತುಳಸಿ ಮುನಿರಾಜು ಗೌಡ ಆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾದ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ, 2018ರ ಚುನಾವಣಾ ಅಕ್ರಮದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ನಡೆಯುತ್ತಿದ್ದುದರಿಂದ ಮುನಿರತ್ನ ಅವರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿರಲಿಲ್ಲ.



ಇದೀಗ ಆ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್​ನಿಂದ ಕುಸುಮಾ ಎದುರಾಳಿಯಾಗಿ ಬಿಜೆಪಿಯಿಂದ ಈ ಬಾರಿ ಮುನಿರತ್ನ ಸ್ಪರ್ಧಿಸುತ್ತಾರಾ ಅಥವಾ ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮುನಿರಾಜು ಗೌಡ ಅವರೇ ಕಣಕ್ಕಿಳಿಯುತ್ತಾರಾ ಎಂಬ ಬಗ್ಗೆ ಬಿಜೆಪಿ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಆರ್​ಆರ್​ ನಗರದಲ್ಲಿ ಜೆಡಿಎಸ್​ ಪಕ್ಷದ ಅಭ್ಯರ್ಥಿಯ ಹೆಸರನ್ನು ನಾಳೆ ಘೋಷಿಸುವ ಸಾಧ್ಯತೆಯಿದೆ.
Youtube Video

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಶಾಸಕರಾಗಿದ್ದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಲು ಜೆಡಿಎಸ್​ ನಿರ್ಧರಿಸಿದೆ. ಶಿರಾದಲ್ಲಿ ಟಿ.ಬಿ. ಜಯಚಂದ್ರ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬಿಜೆಪಿಯಿಂದ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾಗಿರುವ ರಾಜೇಶ್ ಗೌಡ ಉಪಚುನಾವಣೆ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆ.
Published by: Sushma Chakre
First published: October 7, 2020, 2:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories