• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Election Results: ಸರ್ಕಾರ ರಚನೆಗೆ ಕಾಂಗ್ರೆಸ್ ಸಿದ್ಧತೆ ; ಇಂದು ಸಂಜೆ ಶಾಸಕಾಂಗ ಸಭೆ

Karnataka Election Results: ಸರ್ಕಾರ ರಚನೆಗೆ ಕಾಂಗ್ರೆಸ್ ಸಿದ್ಧತೆ ; ಇಂದು ಸಂಜೆ ಶಾಸಕಾಂಗ ಸಭೆ

ಸರ್ಕಾರ ರಚನೆಗೆ ಕಾಂಗ್ರೆಸ್ ಸಿದ್ಧತೆ

ಸರ್ಕಾರ ರಚನೆಗೆ ಕಾಂಗ್ರೆಸ್ ಸಿದ್ಧತೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣ್​​ದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ.

  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಬಹುಮತ ಪಡೆದುಕೊಂಡಿರುವ ಕಾಂಗ್ರೆಸ್ (Congress), ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಗೆದ್ದಿರುವ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಬರುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಬಹುತೇಕರು ಶಾಸಕರು ಬೆಂಗಳೂರು ತಲುಪಿದ್ದು, ಇಂದು ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ (CLP Meeting) ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ಸಿಎಂ ಯಾರು ಸೇರಿದಂತೆ ಇನ್ನಿತರ ವಿಷಯಗಳ  ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಸಿಎಂ ಅಭ್ಯರ್ಥಿಗಳಾಗಿದ್ದಾರೆ. ಈ ಇಬ್ಬರಲ್ಲಿ ಯಾರು ಸಿಎಂ ಆಗ್ತಾರೆ ಅನ್ನೋ ಚರ್ಚೆಗಳು ರಾಜಕೀಯ ಅಂಗಳದಲ್ಲಿ ಕೇಳಿ ಬರುತ್ತಿವೆ.


ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣ್​​ದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ .


congress call clp meeting today mrq
ಸರ್ಕಾರ ರಚನೆಗೆ ಕಾಂಗ್ರೆಸ್ ಸಿದ್ಧತೆ


ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ


ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜ್ಯಪಾಲರಿಗೆ (Governor) ರಾಜೀನಾಮೆ ಪತ್ರ ನೀಡಿದ್ದಾರೆ. ಬಿಜೆಪಿ ಸೋಲಿಗೆ ನೈತಿಕ ಹೊಣೆ ಹೊತ್ತಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು, ರಾಜಭವನದಲ್ಲಿ ಗವರ್ನರ್ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾಗಿದ್ದರು.




ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಳಿಕ ಅಚ್ಚರಿಯ ಆಯ್ಕೆಯಂತೆ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದರು.


ಇದನ್ನೂ ಓದಿ:  Jayanagar: 6 ಬಾರಿ ಮತ ಎಣಿಕೆ; ಕಣ್ಣೀರು ಹಾಕ್ತಾ ಹೊರಬಂದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ


2021ರ ಜುಲೈ 26 ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಬೊಮ್ಮಾಯಿ ಅವರು, 19 ತಿಂಗಳು 17 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಯಡಿಯೂರಪ್ಪರ ನಿವೃತ್ತಿ ಘೋಷಣೆಯಿಂದ ಬಯಸದೇ ಬಂದ ಭಾಗ್ಯದಂತೆ ಮುಖ್ಯಮಂತ್ರಿ ಪದವಿ ಅಲಂಕರಿಸಿದ್ದರು.

First published: