HOME » NEWS » State » CONGRESS DEMANDS BASAVARAJ BOMMAI RESIGNATION OVER BENGALURU RIOTS GNR

‘ಡಿಜೆ ಹಳ್ಳಿ ಗಲಭೆ ತಡೆಯುವಲ್ಲಿ ಸರ್ಕಾರ ವಿಫಲ; ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿ‘ - ಕಾಂಗ್ರೆಸ್​

ಭ್ರಷ್ಟಾಚಾರದಲ್ಲಿ ತೊಡಗಿರುವುದೇ ಸರ್ಕಾರದ ಸಾಧನೆ. ಧಾರ್ಮಿಕ ಹೆಸರಿನಲ್ಲಿ ಕೀಳು ಮಟ್ಟದ ರಾಜಕೀಯ ಮಾಡಲಾಗುತ್ತಿದೆ. ಜನರಲ್ಲಿ ಕೋಮುವಾದಿ ತನವನ್ನ ಬಿತ್ತುವುದೇ ಸರ್ಕಾರ ಕೆಲಸವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.

news18-kannada
Updated:August 13, 2020, 1:50 PM IST
‘ಡಿಜೆ ಹಳ್ಳಿ ಗಲಭೆ ತಡೆಯುವಲ್ಲಿ ಸರ್ಕಾರ ವಿಫಲ; ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿ‘ - ಕಾಂಗ್ರೆಸ್​
ಗೃಹ ಸಚಿವ ಬಸವರಾಜ ಬೊಮ್ಮಾಯಿ
  • Share this:
ಬೆಂಗಳೂರು(ಆ.13): ಡಿ.ಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆ ನಿಯಂತ್ರಿಸುವಲ್ಲಿ ರಾಜ್ಯ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ನೈತಿಕ ಹೊಣೆಹೊತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. ಇಂದು ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಯುವ ಕಾಂಗ್ರೆಸ್ ಮುಖಂಡರಾದ ಮನೋಹರ್ ಹಾಗೂ ಸಲೀಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗೃಹ ಸಚಿವರ ರಾಜೀನಾಮೆಗೆ ಆಗ್ರಹ ಮಾಡಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಸಂದರ್ಭ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಶಾಸಕರಿಗೆ ರಕ್ಷಣೆ ನೀಡದಂತ ಪರಿಸ್ಥಿತಿ ಉದ್ಭವಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಲೇಬೇಕು. ಗಲಾಟೆ ನಡೆಯುವ ಮುನ್ಸೂಚನೆ ಇದ್ದರೂ ನಿಯಂತ್ರಿಸುವ ಪ್ರಯತ್ನ ಮಾಡುವಲ್ಲಿ ಗೃಹ ಇಲಾಖೆ ವಿಫಲವಾಗಿದೆ. ರಾಜ್ಯದ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರ ಈ ಒಂದು ಗಲಭೆಗೆ ಪರೋಕ್ಷವಾಗಿ ಕಾರಣವಾಗಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರದಲ್ಲಿ ತೊಡಗಿರುವುದೇ ಸರ್ಕಾರದ ಸಾಧನೆ. ಧಾರ್ಮಿಕ ಹೆಸರಿನಲ್ಲಿ ಕೀಳು ಮಟ್ಟದ ರಾಜಕೀಯ ಮಾಡಲಾಗುತ್ತಿದೆ. ಜನರಲ್ಲಿ ಕೋಮುವಾದಿ ತನವನ್ನ ಬಿತ್ತುವುದೇ ಸರ್ಕಾರ ಕೆಲಸವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ಶಾಸಕ ಅಖಂಡ ಶ್ರೀನಿವಾಸ್ ನಿವಾಸದ ಮೇಲೆ ದಾಳಿ ಆಗಿದೆ. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ, ಇಲ್ವಾ ಗೊತ್ತಿಲ್ಲ. ಬೇಹುಗಾರಿಕಾ ವ್ಯವಸ್ಥೆ ಇದ್ರೂ ಯಾಕೆ ಘಟನೆ ಗೊತ್ತಾಗಲಿಲ್ಲ. ಇಡೀ ಗೃಹ ಇಲಾಖೆಯೇ ಸಂಪೂರ್ಣ ವಿಫಲವಾಗಿದೆ ಎಂದರು.

ಇದನ್ನೂ ಓದಿ: ‘ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ‘ - ಶಾಸಕ ಜಮೀರ್ ಅಹಮದ್​ ಆಗ್ರಹ

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿಹೋಗಿದೆ. ನವೀನ್ ಒಬ್ಬ ಬಿಜೆಪಿ ಕಾರ್ಯಕರ್ತ. ಅವನ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಶಾಸಕರ ಮನೆ ಮೇಲೆ ಪುಂಡರ ದಾಳಿಗೆ ಅವಕಾಶ ಕೊಟ್ಟಿದ್ದಾರೆ. ಇದು ಖಂಡನೀಯವಾದುದು. ಬಸವರಾಜ ಬೊಮ್ಮಾಯಿರವರಿಗೆ  ಗೃಹ ಇಲಾಖೆಯ ನಿಭಾಯಿಸಲು ಆಗ್ತಾಯಿಲ್ಲ ಎಂದು ವಾಗ್ದಾಳಿ ನಡೆಸಿದರು. ತಡೆ
Published by: Ganesh Nachikethu
First published: August 13, 2020, 1:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories