BJP: ಕಾಂಗ್ರೆಸ್​ ತೊರೆದು ಮತ್ತೆ ಬಿಜೆಪಿ ಸೇರಿದ ಮಾಜಿ ಸಂಸದ ವಿರೂಪಾಕ್ಷಪ್ಪ

ಮಸ್ಕಿ ಚುನಾವಣೆ ಹಿನ್ನಲೆ ಬಿಜೆಪಿ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಬಿ ವೈ ವಿಜಯೇಂದ್ರ ಕಳೆದ ತಿಂಗಳು ವಿರೂಪಾಕ್ಷಪ್ಪ ಅವನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ವಿರೂಪಕ್ಷಪ್ಪ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡ ಬಿಜೆಪಿ ನಾಯಕರು

ವಿರೂಪಕ್ಷಪ್ಪ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡ ಬಿಜೆಪಿ ನಾಯಕರು

 • Share this:
  ಬೆಂಗಳೂರು (ಮಾ. 9): ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್​ ಸಿಗದ ಹಿನ್ನಲೆ ಮುನಿಸಿಕೊಂಡಿದ್ದ ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಇಂದು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮತ್ತೆ ಕಮಲ ಪಾಳೆಯಕ್ಕೆ ಸೇರ್ಪಡನೆಯಾದ ಅವರನ್ನು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮತ್ತು ಬಿಕೆಪಿ ಕಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಆತ್ಮೀಯವಾಗಿ ಬರಮಾಡಿಕೊಂಡರು. ಮಸ್ಕಿ ಚುನಾವಣೆ ಹಿನ್ನಲೆ ಬಿಜೆಪಿ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಬಿ ವೈ ವಿಜಯೇಂದ್ರ ಕಳೆದ ತಿಂಗಳು ವಿರೂಪಾಕ್ಷಪ್ಪ ಅವನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಭೇಟಿ ಸಫಲವಾದ ಬೆನ್ನಲ್ಲೇ ಅವರು ಕಾಂಗ್ರೆಸ್​ ತೊರೆದು ಬಿಜೆಪಿ ಸೇರಲು ಮುಂದಾಗಿದ್ದರು.  ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ವಿರೂಪಾಕ್ಷಪ್ಪ. ಕುರುಬರ ಎಸ್​ಟಿ ಹೋರಾಟ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ಸಿದ್ಧರಾಮಯ್ಯ ಅವರ ವಿರುದ್ಧ ಹರಿಹಾಯ್ದಿದ್ದರು.

  ಮಸ್ಕಿ ಕ್ಷೇತ್ರದಲ್ಲಿ ಈಗಾಗಲೇ ಕಾರ್ಯತಂತ್ರ ಆರಂಭಿಸಿರುವ ಬಿಜೆಪಿಗೆ ವಿರೂಪಾಕ್ಷಪ್ಪ ಅವರು ಮತ್ತೆ ಬಿಜೆಪಿ ಸೇರ್ಪಡನೆಯಾಗಿರುವುದು ಇನ್ನಷ್ಟು ಲಾಭಾವಾಗಲಿದೆ ಎನ್ನಲಾಗಿದೆ. ಕುರುಬ ಸಮುದಾಯದ ವಿರೂಪಾಕ್ಷಪ್ಪನವರ ಮೂಲಕ ಕುರುಬ ಮತಗಳನ್ನು ಸೆಳೆಯಲು  ಬಿಜೆಪಿ ಸಿದ್ಧತೆ ನಡೆಸಿದೆ.
  Published by:Seema R
  First published: