ನೀತಿ ಸಂಹಿತೆ ಉಲ್ಲಂಘನೆ ಆರೋಪ: ಎಂಟಿಬಿ ನಾಗರಾಜ್, ಆನಂದ್ ಸಿಂಗ್ ವಿರುದ್ಧ ಕಾಂಗ್ರೆಸ್ ದೂರು

ಎಂಟಿಬಿ ನಾಗರಾಜ್ ಮತ್ತು ಆನಂದ್ ಸಿಂಗ್ ಇಬ್ಬರೂ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಅವರು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಏನು ಕ್ರಮ ಕೈಗೊಳ್ಳುತ್ತಾರೆಂದು ನೋಡಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ದೂರಿನ ಬಳಿಕ ಮಾಧ್ಯಮಗಳಿಗೆ ಎಂಎಲ್​ಸಿ ಪ್ರಕಾಶ್ ರಾಥೋಡ್ ತಿಳಿಸಿದ್ಧಾರೆ.

news18
Updated:November 26, 2019, 2:09 PM IST
ನೀತಿ ಸಂಹಿತೆ ಉಲ್ಲಂಘನೆ ಆರೋಪ: ಎಂಟಿಬಿ ನಾಗರಾಜ್, ಆನಂದ್ ಸಿಂಗ್ ವಿರುದ್ಧ ಕಾಂಗ್ರೆಸ್ ದೂರು
ಎಂಟಿಬಿ ನಾಗರಾಜ್​​
  • News18
  • Last Updated: November 26, 2019, 2:09 PM IST
  • Share this:
ಬೆಂಗಳೂರು(ನ. 26): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹೊರಿಸಿ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಮತ್ತು ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ದೂರು ದಾಖಲಿಸಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮತದಾರರಿಗೆ ಇವರಿಬ್ಬರು ಹಣ ಮತ್ತಿತರ ಆಮಿಷಗಳನ್ನು ಒಡ್ಡಿದ್ದಾರೆ ಎಂದು ಕೆಲ ದಾಖಲೆ ಸಮೇತ ಕಾಂಗ್ರೆಸ್ ಪಕ್ಷವು ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ. ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಬಂದವರೆಲ್ಲರಿಗೂ ದುಬಾರಿ ಗಿಫ್ಟ್ ನೀಡಿದ್ದಾರೆ. ಡಿಸೆಂಬರ್ 1ರಂದು ಅವರ ಮಗನ ಮದುವೆಯಾಗಿದೆ. ನಾಲ್ಕು ಬೃಹತ್ ಪೆಂಡಾಲ್ ಹಾಕಿ, 50 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ಧಾರೆ. ಇವು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Labour Code: ಕಂಪನಿಗಳಿಗೆ ಲಾಭ; ನೌಕರರಿಗೆ ಆತಂಕ; ಕೇಂದ್ರದ ಹೊಸ ಕಾರ್ಮಿಕ ಕಾನೂನಿನ ಮುಖ್ಯಾಂಶಗಳು

ಇನ್ನು, ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.

ಎಂಟಿಬಿ ನಾಗರಾಜ್ ಮತ್ತು ಆನಂದ್ ಸಿಂಗ್ ಇಬ್ಬರೂ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಅವರು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಏನು ಕ್ರಮ ಕೈಗೊಳ್ಳುತ್ತಾರೆಂದು ನೋಡಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ದೂರಿನ ಬಳಿಕ ಮಾಧ್ಯಮಗಳಿಗೆ ಎಂಎಲ್​ಸಿ ಪ್ರಕಾಶ್ ರಾಥೋಡ್ ತಿಳಿಸಿದ್ಧಾರೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published: November 26, 2019, 2:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading