• Home
  • »
  • News
  • »
  • state
  • »
  • Karnataka Congress: ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಹೃದಯಾಘಾತ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

Karnataka Congress: ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಹೃದಯಾಘಾತ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು

ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ಬೆನ್ನಲ್ಲೇ ಕಾಂಗ್ರೆಸ್​ ಈ ಸಭೆಯನ್ನು ರದ್ದುಗೊಳಿಸಿದೆ.

  • News18 Kannada
  • Last Updated :
  • Bangalore [Bangalore], India
  • Share this:

ಬೆಂಗಳೂರು(ನ.25): ರಾಜಕೀಯ ಅಖಾಡದಲ್ಲಿ (Karnataka Politics) ಸದ್ಯ ಟಿಕೆಟ್​ ಲೆಕ್ಕಾಚಾರ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಹೊರವಲಯದಲ್ಲಿ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಗಳ (Ticket Aspirants Meeting) ಸಭೆಯನ್ನು ಆಯೋಜಿಸಿತ್ತು. ಆದರೀಗ ಈ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ (Former MLA  Shrishailappa Bidarur) ಬಿದರೂರು ಹೃದಯಾಘಾತದಿಂದ (Heart Attack)  ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ಬೆನ್ನಲ್ಲೇ ಕಾಂಗ್ರೆಸ್​ ಈ ಸಭೆಯನ್ನು ರದ್ದುಗೊಳಿಸಿದೆ.


ಆಗಿದ್ದೇನು?


ಹೌದು ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್​ಬೆಂಗಳೂರಿನ ಹೊರವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಸಭೆಯ ಆರಂಭದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸ್ಥಳೀಯ ಸಂಸದ ಡಿ. ಕೆ. ಸುರೇಶ್ ಅವರ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಘಟನೆಯ ಬೆನ್ನಲ್ಲೇ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಗಳ ಸಭೆಯನ್ನು ರದ್ದುಗೊಳಿಸಲಾಗಿದೆ.


ಇದನ್ನೂ ಓದಿ: Mahesh Babu’s Father Krishna Death: ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ: ಅಮ್ಮನ ಸಾವಿನ ಬೆನ್ನಲ್ಲೇ ನಟನಿಗೆ ಶಾಕ್


ಈ ಹಿಂದೆ ರೋಣ- ಗದಗ ಕ್ಷೇತ್ರದ ಶಾಸಕರಾಗಿದ್ದ ಶ್ರೀಶೈಲಪ್ಪ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದ್ದರು. ಅದರಂತೆ ರೋಣ ಕ್ಷೇತ್ರದಿಂದ ಟಿಕೆಟ್​ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು ಎಂಬುವುದು ಉಲ್ಲೇಖನೀಯ.


ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದ್ದ ಮಾಜಿ ಶಾಸಕ


ಇನ್ನು 2019ರಲ್ಲಿ ಶ್ರೀಶೈಲಪ್ಪ ಬಿದರೂರು ಬಿಜೆಪಿ ಬಿಟ್ಟು ಕಾಂಗ್ರೆಸ್ ‌ಸೇರಿದ್ದರು. ಶ್ರೀಶೈಲಪ್ಪ ಬಿದರೂರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಾಗಿದ್ದರು.


ಇದನ್ನೂ ಓದಿ: ಆರೋಗ್ಯಕ್ಕೆ ಒಳ್ಳೆಯದು ಅಂತ ಜಾಸ್ತಿ ಬಿಸಿನೀರು ಕುಡಿಬೇಡಿ, ಇದರ ಅಡ್ಡಪರಿಣಾಮಗಳು ಒಂದೆರೆಡಲ್ಲ


ಸಚಿವ ಸಿಸಿ ಪಾಟೀಲ ಸಂತಾಪ


ಇನ್ನು ಬಿದರೂರು ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಸಿಸಿ ಪಾಟೀಲ್ ಎರಡು ಬಾರಿ ಶಾಸಕರಾಗಿದ್ದ ಬಿದನೂರು ಅವರಿಗೆ ಹೃದಯಾಘಾತ ಆಗಿದೆ. ವಿಷಯ ತಿಳಿದು ನರಗುಂದ ದಿಂದ ಗದಗ ಬಂದಿದ್ದೇನೆ. ಶವಸಂಸ್ಕಾರದ ಬಗ್ಗೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂದು ಚರ್ಚಿಸುತ್ತೇವೆ. ಬಿಜೆಪಿಯಿಂದ ಶಾಸಕರಾದವರು, ಅನಿವಾರ್ಯ ಕಾರಣದಿಂದ ಕಾಂಗ್ರೆಸ್ ಸೇರಿದ್ದರು. ಅಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು ಅನ್ನೋ ಸುದ್ದಿ ಕೇಳಿದ್ದೇನೆ ರಾಜಕಾರಣ ಏನೇ ಇರಲಿ ಅವರು ನನ್ನ ಆತ್ಮೀಯರು, ದೂರದ ಸಂಬಂಧಿ. ಅವರ ಅಗಲಿಕೆ ತೀವ್ರ ನೋವು ತಂದಿದೆ.. ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.

Published by:Precilla Olivia Dias
First published: