ಬೆಂಗಳೂರಿನಲ್ಲಿ ಕೈ ಹೈಕಮಾಂಡ್ ಗುಲಾಂ ನಬಿ ಆಜಾದ್​; ಇಂದಿನಿಂದ 3 ದಿನ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ

ಇಂದಿನಿಂದ 3 ದಿನಗಳ ಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಾದ ಮುಧೋಳ, ಜಮಖಂಡಿ ಹಾಗೂ ಗೋಕಾಕ್, ರಾಮದುರ್ಗ, ಅಥಣಿ, ಕಾಗವಾಡ, ನಿಪ್ಪಾಣಿ, ಚಿಕ್ಕೋಡಿ, ಕಿತ್ತೂರು ಕ್ಷೇತ್ರಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

Sushma Chakre | news18-kannada
Updated:August 26, 2019, 11:19 AM IST
ಬೆಂಗಳೂರಿನಲ್ಲಿ ಕೈ ಹೈಕಮಾಂಡ್ ಗುಲಾಂ ನಬಿ ಆಜಾದ್​; ಇಂದಿನಿಂದ 3 ದಿನ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ
ಮಾಜಿ ಸಿಎಂ ಸಿದ್ದರಾಮಯ್ಯ
Sushma Chakre | news18-kannada
Updated: August 26, 2019, 11:19 AM IST
ಬೆಂಗಳೂರು (ಆ. 26): ಇಂದಿನಿಂದ ಮೂರು ದಿನಗಳ ಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್​ ಹೈಕಮಾಂಡ್ ನಾಯಕ ಗುಲಾಂ ನಬಿ ಆಜಾದ್​ ಬೆಂಗಳೂರಿಗೆ ಆಗಮಿಸುತ್ತಿರುವ ಹೊತ್ತಲ್ಲೇ ಸಿದ್ದರಾಮಯ್ಯ ಪ್ರವಾಹಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

3 ದಿನಗಳಿಂದ ಜೆಡಿಎಸ್​ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಮೈತ್ರಿ ಸರ್ಕಾರ ಪತನಕ್ಕೆ ದೇವೇಗೌಡರು ಮತ್ತು ಹೆಚ್​.ಡಿ. ಕುಮಾರಸ್ವಾಮಿ ಅವರೇ ಕಾರಣ ಎಂದು ಹೇಳಿದ್ದರು. ಇದಕ್ಕೂ ಮೊದಲು ದೇವೇಗೌಡರು ಕೂಡ ಸಿದ್ದರಾಮಯ್ಯ ಅವರಿಂದಲೇ ಸರ್ಕಾರ ಪತನವಾಯಿತು ಎಂದು ಹೇಳಿಕೆ ನೀಡಿದ್ದರು. ಉಪಚುನಾವಣೆಯಲ್ಲೂ ಜೆಡಿಎಸ್​- ಕಾಂಗ್ರೆಸ್​ ಒಟ್ಟಾಗಿ ಸ್ಪರ್ಧೆಗಿಳಿಯಲಿವೆ ಎನ್ನಲಾಗಿತ್ತು. ಆದರೆ, ಸದ್ಯದ ಪರಿಸ್ಥಿತಿ ನೋಡಿದರೆ ಮೈತ್ರಿ ಮುಂದುವರೆಯುವ ಸಾಧ್ಯತೆಯೇ ಇಲ್ಲ ಎನ್ನಲಾಗುತ್ತಿದೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ; ಇಂದೇ ಖಾತೆ ಹಂಚಿಕೆ ಸಾಧ್ಯತೆ

ಇಂದಿನಿಂದ 3 ದಿನಗಳ ಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಾದ ಮುಧೋಳ, ಜಮಖಂಡಿ ಹಾಗೂ ಗೋಕಾಕ್, ರಾಮದುರ್ಗ, ಅಥಣಿ, ಕಾಗವಾಡ, ನಿಪ್ಪಾಣಿ, ಚಿಕ್ಕೋಡಿ, ಕಿತ್ತೂರು ಕ್ಷೇತ್ರಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಕಾಂಗ್ರೆಸ್​ನ ಅನರ್ಹ ಶಾಸಕರ ಕ್ಷೇತ್ರ ಸೇರಿ ಇತರೆ ಕ್ಷೇತ್ರಗಳಿಗೂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಅನರ್ಹ ಶಾಸಕರು ಸ್ವಕ್ಷೇತ್ರಗಳನ್ನು ಮರೆತು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಾಸಕರು ಅತ್ತ ಬಿಜೆಪಿ ಸರ್ಕಾರದಲ್ಲಿ ಅಧಿಕಾರವೂ ಇಲ್ಲದೆ, ಇತ್ತ ಕಾಂಗ್ರೆಸ್​ ಶಾಸಕ ಸ್ಥಾನವೂ ಇಲ್ಲದೆ, ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಅವಕಾಶವೂ ಇಲ್ಲದೆ ಕಂಗಾಲಾಗಿ ಕುಳಿತಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಅನರ್ಹತೆಯ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿರುವ ಅನರ್ಹ ಶಾಸಕರ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ತಮ್ಮ ಕ್ಷೇತ್ರದ ಜನರು ಪ್ರವಾಹದಿಂದ ಕಂಗೆಟ್ಟಿದ್ದರೂ ಅನರ್ಹ ಶಾಸಕರು ತಮ್ಮ ಕ್ಷೇತ್ರದತ್ತ ಮುಖ ಮಾಡಿಲ್ಲ. ಈ ನಡುವೆ ಇಂದಿನಿಂದ ಬುಧವಾರದವರೆಗೆ ಅನರ್ಹ ಶಾಸಕರ ಗೋಕಾಕ್, ಅಥಣಿ, ಕಾಗವಾಡ ಸೇರಿ ಹಲವು ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಭೀಕರ ಪ್ರವಾಹ: ಬೆಳಗಾವಿಗೆ ಕೇಂದ್ರ ಅಧ್ಯಯನ ತಂಡ ಭೇಟಿ; ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ

ಕಾಂಗ್ರೆಸ್​ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಬೆಂಗಳೂರಿಗೆ ಆಗಮಿಸುತ್ತಿರುವ ವಿಷಯ ಗೊತ್ತಿದ್ದರೂ ಸಿದ್ದರಾಮಯ್ಯ ಉತ್ತರ ಕರ್ನಾಟಕದತ್ತ ಹೊರಟಿರುವುದು ಅಚ್ಚರಿ ಮೂಡಿಸಿದೆ. ಮಾಜಿ ಪ್ರಧಾನಿ ದೇವೇಗೌಡರು ಕಾಂಗ್ರೆಸ್​ ಮತ್ತು ಸಿದ್ದರಾಮಯ್ಯ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿರುವುದರಿಂದ ಇಂದು ಗುಲಾಂ ನಬಿ ಆಜಾದ್​ ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕಾಂಗ್ರೆಸ್​- ಜೆಡಿಎಸ್​ ಮೈತ್ರಿ ಸರ್ಕಾರಕ್ಕೆ ದೇವೇಗೌಡರನ್ನು ಒಪ್ಪಿಸಿದ್ದೇ ಗುಲಾಂ ನಬಿ ಆಜಾದ್​. ಹೀಗಾಗಿ, ಇಂದು ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆಯಿದೆ.
Loading...

(ವರದಿ: ಶ್ರೀನಿವಾಸ್ ಹಳಕಟ್ಟಿ)

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್​ನಲ್ಲಿ ಸಬ್​ಸ್ಕ್ರೈಬ್​ ಮಾಡಿ

First published:August 26, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...