ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದ (Gujarat And Himachal Pradesh Election Results) ಬಳಿಕ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ (Congress And BJP) ಕರ್ನಾಟಕದತ್ತ ಮುಖ ಮಾಡಿವೆ. ಚುನಾವಣೆ ಸಂಬಂಧ ಆರ್ಎಸ್ಎಸ್ ಪ್ರಮುಖ (RSS Leaders) ನಾಯಕರಾದ ಮುಕುಂದ್ ಮತ್ತು ದತ್ತಾತ್ರೇಯ ಹೊಸಬಾಳೆ ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತ ಕಾಂಗ್ರೆಸ್ ಸಹ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರಿಗೆ (Karnataka Congress Leaders) ಹೈಕಮಾಂಡ್ ದೆಹಲಿಗೆ ಬರುವಂತೆ ಹೇಳಿದ್ದು, ಇಂದು ಮಹತ್ವದ ಸಭೆ ನಡೆಯಲಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ಮಧ್ಯಾಹ್ನ 2ಕ್ಕೆ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ 2023ರ ವಿಧಾನಸಭೆ ಚುನಾವಣೆ ತಂತ್ರಗಾರಿಕಗೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂಬ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ.
ಖರ್ಗೆಗೆ ತವರಿನ ಸವಾಲು
ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತವರು ರಾಜ್ಯದ ಚುನಾವಣೆಯಲ್ಲಿ ಗೆಲ್ಲುವ ಅನಿವಾರ್ಯ ಎದುರಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಅಸಮರ್ಥ ಎಂದು ಹೇಳಿರುವ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಬೇಕಿದೆ. ಕರ್ನಾಟಕ ಚುನಾವಣೆಯಲ್ಲಿ ಲೋಕಸಭಾ ಎಲಕ್ಷನ್ ದಿಕ್ಸೂಚಿ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.ಈ ಹಿನ್ನೆಲೆ ತವರಿನ ಗೆಲುವು ಖರ್ಗೆ ಅವರಿಗೆ ಅನಿವಾರ್ಯವಾಗಿದೆ.
ಅಭ್ಯರ್ಥಿಗಳ ಆಯ್ಕೆ, ಬಸ್ ಯಾತ್ರೆ, ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಯಲಿದೆ. ರಾಜ್ಯ ಕಾಂಗ್ರೆಸ್ ನಾಯಕರಲ್ಲಿನ ಪೈಪೋಟಿ ಬಗ್ಗೆಯೂ ಚರ್ಚೆ ಆಗುತ್ತೆ ಎಂದು ಹೇಳಲಾಗಿದೆ.
ಸಭೆಯಲ್ಲಿ ಯಾರೆಲ್ಲಾ ಭಾಗಿ?
ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ
ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯ ಉಸ್ತುವಾರಿ
ಕೆ.ಸಿ ವೇಣುಗೋಪಾಲ್, ಕಾಂಗ್ರೆಸ್ ರಾಷ್ಟ್ರೀಯ ನಾಯಕ
ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯಾಧ್ಯಕ್ಷ
ಸಿದ್ದರಾಮಯ್ಯ, ವಿಧಾನಸಭೆ ವಿಪಕ್ಷ ನಾಯಕ
ಬಿ.ಕೆ ಹರಿಪ್ರಸಾದ್, ಪರಿಷತ್ ವಿಪಕ್ಷ ನಾಯಕ
ಎಂ.ಬಿ ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ
ಜಿ. ಪರಮೇಶ್ವರ್, ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ
ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ
ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ
ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ
ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ
ಇದನ್ನೂ ಓದಿ: Love Jihad Law: ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ: ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ
ಸಭೆಯಲ್ಲಿ ಏನೇನು ಚರ್ಚೆ?
2023 ಚುನಾವಣೆಗೆ ತಂತ್ರಗಾರಿಕೆಗೆ ಸಂಬಂಧ ಅಭ್ಯರ್ಥಿಗಳ ಆಯ್ಕೆ, ಮೊದಲ ಪಟ್ಟಿ ಯಾವಾಗ? ಯಾವ ಕ್ಷೇತ್ರ?, ಪ್ರಚಾರ, ಬಸ್ ಯಾತ್ರೆ, ಪಕ್ಷ ಸಂಘಟನೆ ಮತ್ತು ರಾಜ್ಯ ನಾಯಕರಲ್ಲಿನ ಪೈಪೋಟಿ ಬಗ್ಗೆ ಚರ್ಚೆ ನಡೆಯಲಿದೆಯಂತೆ.
ಮುಂದಿನ ಸಿಎಂ ಕುರಿತ ಗೊಂದಲ, ಬಣ ರಾಜಕೀಯ ನಿಲ್ಲಿಸುವ ಬಗ್ಗೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಲಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿರುವ ಭಿನ್ನಮತ ಶಮನ ಹಾಗೂ ಬಿಜೆಪಿ ವೈಫಲ್ಯತೆಗಳ ಬಳಕೆ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಹೊಸ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ
ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಯವರು (Schedule caste) ಹೋರಾಟ ಮಾಡ್ತಿದ್ದಾರೆ. ಇನ್ನೊಂದ್ಕಡೆ ಪಂಚಮಸಾಲಿಯಿಂದಲೂ ಮೀಸಲಾತಿಗಾಗಿ (Panchamasali Reservation) ಹೋರಾಟ ನಡೀತಿದೆ. ಈಗ ಹೋರಾಟಗಾರರನ್ನ ಸೆಳೆಯೋಕೆ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಹೊಸ ಅಸ್ತ್ರ ಬಿಟ್ಟಿದ್ದಾರೆ.
ನಮ್ಮ ಸರ್ಕಾರ ಬಂದರೆ ನ್ಯಾ, ಸದಾಶಿವ ಆಯೋಗದ ವರದಿ (Sadashiva Commission recommends) ಜಾರಿ ಮಾಡ್ತೀವಿ ಅಂತ ಸರಣಿ ಟ್ವೀಟ್ (Tweet) ಮಾಡಿದ್ದಾರೆ. ಒಳಮೀಸಲಾತಿಗಾಗಿ ಹೋರಾಟ ನಡೆಸ್ತಿದ್ದವರನ್ನ ಬಿಜೆಪಿ ಸರ್ಕಾರ (BJP Government) ಬಂಧಿಸಿದೆ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕು. ಅವರ ಮಾತುಗಳನ್ನ ಆಲಿಸಬೇಕು ಅಂತ ಸರ್ಕಾರಕ್ಕೂ ಚಾಟಿ ಬೀಸಿ ಪರಿಶಿಷ್ಠ ಜಾತಿಯ ಮತಗಳನ್ನ ಸೆಳೆಯೋ ಅಸ್ತ್ರ ಬಿಟ್ಟಿದ್ದಾರೆ.
ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಗುಂಡಿನ ದಾಳಿ ಕೇಸ್; ಆರೋಪಿಗಳು ಬಾಯ್ಬಿಟ್ಟರು ಸ್ಫೋಟಕ ಸತ್ಯ!
ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದು ಕಿಡಿಕಾರಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ